ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಪರಿಚಯ

Posted By: Gururaj
Subscribe to Oneindia Kannada

2013ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಹೆಚ್ಚು ಅವಧಿ ಕಾರ್ಯ ನಿರ್ವಹಣೆ ಮಾಡಿದ ಹೆಗ್ಗಳಿಕೆ ಡಾ.ಜಿ.ಪರಮೇಶ್ವರ ಅವರದ್ದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಪರಮೇಶ್ವರ ಅವರು, ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮಕ್ಕೆ ತಲೆಬಾಗಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಿದ್ದಾರೆ.

Dr G Parameshwara profile

2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರ ಪಡೆಯಿತು. ಆದರೆ, ತುಮಕೂರು ಜಿಲ್ಲೆ ಕೊರಟಗೆರೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಜಿ.ಪರಮೇಶ್ವರ 54,074 ಮತಗಳನ್ನು ಪಡೆದು ಸೋಲು ಕಂಡರು. ಜೆಡಿಎಸ್‌ನ ಸುಧಾಕರಲಾಲ್ ಗೆಲುವು ಸಾಧಿಸಿದರು.

ದಲಿತ ಸಮುದಾಯಕ್ಕೆ ಸೇರಿದ ಪರಮೇಶ್ವರ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಕೂಗು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇಳಿಬಂತು. 2014ರ ಜುಲೈ 1 ರಂದು ಅವರನ್ನು ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಯಿತು. 2015ರ ಅಕ್ಟೋಬರ್‌ನಲ್ಲಿ ಪ್ರಭಾವಿ ಗೃಹ ಖಾತೆಯನ್ನು ನೀಡಲಾಯಿತು.

Dr G Parameshwara profile

ರಾಜಕೀಯ ಜೀವನ

* 1989ರಲ್ಲಿ ಕೊರಟಗೆರೆ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ

* ವೀರಪ್ಪ ಮೊಯ್ಲಿ ಸಂಪುಟದಲ್ಲಿ ರೇಷ್ಮೆ ಸಚಿವರಾಗಿ ಕಾರ್ಯ ನಿರ್ವಹಣೆ

* 1999ರಲ್ಲಿ ಮರು ಆಯ್ಕೆ. ಎಸ್‌.ಎಂ.ಕೃಷ್ಣ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆ ಜವಾಬ್ದಾರಿ

* 2013ರ ಚುನಾವಣೆ ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಸೋಲು

* 2010ರ ಅ. 29ರಂದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

* 2014ರ ಜುಲೈ 1 ರಂದು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ

* 2015ರ ಅಕ್ಟೋಬರ್‌ನಲ್ಲಿ ಗೃಹ ಸಚಿವರಾಗಿ ನೇಮಕ

* 2017ರ ಜೂನ್‌ನಲ್ಲಿ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Read all about KPCC President Dr G Parameshwara. Dr G Parameshwara in Kannada. In the perspective of Karnataka Assembly Elections 2018, we present the short biography and political journey of Dalit leader Dr G Parameshwara. He will play important role in Karnataka politics.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ