ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಗೆಲುವು
ಬೆಂಗಳೂರು, ಮೇ 07: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಓದುಗರ ಅಭಿಪ್ರಾಯ ಸಂಗ್ರಹ ಮಾಡುವ ಉದ್ದೇಶದಿಂದ ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಫೇಸ್ಬುಕ್ ಲೈವ್ ಪೋಲ್ ನಡೆಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ನಂತರ ಪಕ್ಷೇತರ ಮತ್ತು ಬಿಜೆಪಿ ಪಕ್ಷಗಳು ತನ್ನ ಅಸ್ಥಿತ್ವವನ್ನು ಪಡೆದುಕೊಂಡಿತ್ತು.

2004ರಿಂದ ಸತತವಾಗಿ ಮೂರು ಬಾರಿ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಜಯಗಳಿಸಿದ್ದಾರೆ. ದತ್ತಪೀಠದ ವಿಷಯದ ಆಧಾರ ಮೇಲೆ ಜಿಲ್ಲೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಸಾಧಿಸಿಕೊಂಡಿದೆ.
ಈ ಬಾರಿ ಬಿಜೆಪಿಯ ಸಿಟಿ ರವಿ ಹಾಗೂ ಕಾಂಗ್ರೆಸ್ಸಿನ ಬಿಎಲ್ ಶಂಕರ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಫೇಸ್ಬುಕ್ ಲೈವ್ ಮತದಾನ: ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.
ಫಲಿತಾಂಶ: ಸುಮಾರು ಒಂದು ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ನೂರಾರು ಮಂದಿ ಸಮೀಕ್ಷೆ ತಲುಪಿದ್ದು, ಸಾವಿರಾರು ಮಂದಿ ಪ್ರತಿಕ್ರಿಯಿಸಿದ್ದಾರೆ. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.
ಬಿಜೆಪಿ ಅಭ್ಯರ್ಥಿ ಸಿಟಿ ರವಿ ಅವರಿಗೆ 103 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ಬಿ.ಎಲ್ ಶಂಕರ್ ಅವರಿಗೆ 23 ಮತಗಳು ಸಿಕ್ಕಿವೆ. ಇನ್ನು ಜೆಡಿಎಸ್ ನ ಜಿ.ಎಚ್ ಹರೀಶ್ ಅವರಿಗೆ 68 ಮತಗಳು ಬಂದಿದೆ.












Click it and Unblock the Notifications