ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಹಿರಿಯೂರಿನಲ್ಲಿ ಅಚ್ಚರಿಯ ಫಲಿತಾಂಶ

ಬೆಂಗಳೂರು, ಮೇ 09: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಜನಪ್ರಿಯ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ಮೂಲಕ ಓದುಗರ ಅಭಿಪ್ರಾಯ ಸಂಗ್ರಹ ಮಾಡುವ ಉದ್ದೇಶದಿಂದ ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಲೈವ್ ಪೋಲ್ ನಡೆಸುತ್ತಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ.

ಹಿರಿಯೂರು ವಿಧಾನಸಭಾ ಕ್ಷೇತ್ರ ಕ್ಷೇತ್ರದಲ್ಲಿ ಕುರುಬರು, ಒಕ್ಕಲಿಗರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿರುವ ಯಾದವ ಸಮುದಾಯದ ಬೆಂಬಲ ಪೂರ್ಣಿಮಾ ಕುಟುಂಬಕ್ಕಿದೆ.

ಈ ಬಾರಿ ಕಾಂಗ್ರೆಸ್ಸಿನ ಅಭ್ಯರ್ಥಿ ಮಾಜಿ ಸಚಿವ ಡಿ ಸುಧಾಕರ್ ಹಾಗೂ ಮಾಜಿ ಸಚಿವ ದಿವಂಗತ ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ವಿರುದ್ಧ ನೇರ ಹಣಾಹಣಿ ಏರ್ಪಟ್ಟಿದೆ.

Assembly Elections 2018 Oneindia Fb Poll : Poornima to win in Hiriyur Constitueny

ಫೇಸ್ಬುಕ್ ಲೈವ್ ಮತದಾನ: ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.

ಫಲಿತಾಂಶ: ಸುಮಾರು ಒಂದು ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ನೂರಾರು ಮಂದಿ ಸಮೀಕ್ಷೆ ತಲುಪಿದ್ದು, ಸಾವಿರಾರು ಮಂದಿ ಪ್ರತಿಕ್ರಿಯಿಸಿದ್ದಾರೆ. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.

ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಅವರಿಗೆ 1400 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ಡಿ ಸುಧಾಕರ್ ಅವರಿಗೆ 274 ಮತಗಳು ಸಿಕ್ಕಿವೆ. ಇನ್ನು ಜೆಡಿಎಸ್ ನ ಡಿ ಯಶೋಧರ ಅವರಿಗೆ 983 ಮತಗಳು ಬಂದಿದೆ.ಈ ಮೂಲಕ ಪೂರ್ಣಿಮಾ ಅವರು ಜಯಗಳಿಸಬಹುದು ಎಂದು ಓದುಗರು ಮತ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+