ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಪದ್ಮನಾಭನಗರದಲ್ಲಿ ಮತ್ತೆ ಆರಳಲಿದೆ ಕಮಲ
ಬೆಂಗಳೂರು, ಮೇ 05: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಓದುಗರ ಅಭಿಪ್ರಾಯ ಸಂಗ್ರಹ ಮಾಡುವ ಉದ್ದೇಶದಿಂದ ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಫೇಸ್ಬುಕ್ ಲೈವ್ ಪೋಲ್ ನಡೆಸುತ್ತಿದೆ. ಬೆಂಗಳೂರಿನ ಪ್ರತಿಷ್ಠಿತ ಪದ್ಮನಾಭನಗರ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ.
ಪದ್ಮನಾಭನಗರ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್ ಆಶೋಕ ಅವರ ವಿರುದ್ಧ ಕಾಂಗ್ರೆಸ್ಸಿನಿಂದ ಶ್ರೀನಿವಾಸ್, ಜೆಡಿಎಸ್ ನಿಂದ ಗೋಪಾಲ್ ಅವರು ಪ್ರಮುಖ ಸ್ಪರ್ಧಿಗಳಾಗಿದ್ದಾರೆ. ಮೇ 12ರಂದು ಮತದಾನ ನಡೆಯಲಿದ್ದು, ಮೇ 15ರಂದು ಫಲಿತಾಂಶ ಹೊರ ಬರಲಿದೆ.

ಫೇಸ್ಬುಕ್ ಲೈವ್ ಮತದಾನ: ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.
ಫಲಿತಾಂಶ: ಸುಮಾರು ಎರಡು ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ಈ ವೇಳೆಯಲ್ಲಿ ನೂರಾರು ಬಾರಿ ಶೇರ್ ಆಗಿದ್ದು, ಸಾವಿರಾರು ಮಂದಿ ಸಮೀಕ್ಷೆ ತಲುಪಿತು. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.
ಬಿಜೆಪಿ ಅಭ್ಯರ್ಥಿ ಆರ್ ಅಶೋಕ ಅವರಿಗೆ 105 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ಶ್ರೀನಿವಾಸ್ ಅವರಿಗೆ 26 ಮತಗಳು ಸಿಕ್ಕಿವೆ. ಇನ್ನು ಜೆಡಿಎಸ್ ನ ವಿ.ಕೆ ಗೋಪಾಲ್ ಅವರಿಗೆ 46 ಮತಗಳು ಬಂದಿದೆ. ಈ ಮೂಲಕ ಮತ್ತೊಮ್ಮೆ ಪದ್ಮನಾಭನಗರದಲ್ಲಿ ಕಮಲ ಅರಳಲಿದೆ ಎಂದು ಓದುಗರು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications