ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಪ್ರಿಯಕೃಷ್ಣ ವಿರುದ್ಧ ಸೋಮಣ್ಣಗೆ ಜಯ

By Mahesh
|
Google Oneindia Kannada News

ಬೆಂಗಳೂರು, ಮೇ 08: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಓದುಗರ ಅಭಿಪ್ರಾಯ ಸಂಗ್ರಹ ಮಾಡುವ ಉದ್ದೇಶದಿಂದ ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಫೇಸ್ಬುಕ್ ಲೈವ್ ಪೋಲ್ ನಡೆಸುತ್ತಿದೆ. ಬೆಂಗಳೂರು ಜಿಲ್ಲೆಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಒಂದು ಕಾಲದಲ್ಲಿ ಗೆಲುವು ಸಾಧಿಸಿದ್ದ ವಿ ಸೋಮಣ್ಣ ಅವರು ನಂತರ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು. ನಂತರ ಇಲ್ಲಿ ಹಾಲಿ ಸಚಿವ ಎಂ ಕೃಷ್ಣಪ್ಪ ಅವರ ಮಗ, ಅತ್ಯಂತ ಶ್ರೀಮಂತ ಅಭ್ಯರ್ಥಿ ಪ್ರಿಯಕೃಷ್ಣ ಅವರು ಕಳೆದ ಬಾರಿ ಬಿಜೆಪಿಯ ಅರ್ ರವೀಂದ್ರ ಅವರನ್ನು ಸೋಲಿಸಿದ್ದರು. ಈ ಬಾರಿ ಬಿಜೆಪಿಯಿಂದ ವಿ ಸೋಮಣ್ಣ ಹಾಗೂ ಜೆಡಿಎಸ್ ನಿಂದ ಎ ನಾಗೇಂದ್ರ ಪ್ರಸಾದ್ ಅವರು ಎದುರಾಳಿಯಾಗಿದ್ದಾರೆ.

Assembly Elections 2018 Oneindia Fb Poll : V Somanna to win in Govindarajanagar

ಫೇಸ್ಬುಕ್ ಲೈವ್ ಮತದಾನ: ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.

ಕ್ಷೇತ್ರ ಪರಿಚಯ : ಗೋವಿಂದರಾಜನಗರದಲ್ಲಿ ಬಿಜೆಪಿ ಗೆಲುವಿನ ಕನಸುಕ್ಷೇತ್ರ ಪರಿಚಯ : ಗೋವಿಂದರಾಜನಗರದಲ್ಲಿ ಬಿಜೆಪಿ ಗೆಲುವಿನ ಕನಸು

ಫಲಿತಾಂಶ: ಸುಮಾರು 2 ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ಸಾವಿರಾರು ಮಂದಿ ಸಮೀಕ್ಷೆ ತಲುಪಿದ್ದು, ನೂರಾರು ಮಂದಿ ಕಾಮೆಂಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.

ಪ್ರಿಯಾಕೃಷ್ಣ ಸೇರಿದಂತೆ ಕಣದಲ್ಲಿ 883 ಕೋಟ್ಯಧಿಪತಿಗಳುಪ್ರಿಯಾಕೃಷ್ಣ ಸೇರಿದಂತೆ ಕಣದಲ್ಲಿ 883 ಕೋಟ್ಯಧಿಪತಿಗಳು

ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರಿಗೆ 470 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ಪ್ರಿಯಕೃಷ್ಣ ಅವರಿಗೆ 227 ಮತಗಳು ಸಿಕ್ಕಿವೆ. ಇನ್ನು ಜೆಡಿಎಸ್ ಎ ನಾಗೇಂದ್ರ ಪ್ರಸಾದ್ ಅವರಿಗೆ 143 ಮತಗಳು ಬಂದಿದೆ.

English summary
Karnataka assembly Elections 2018 : Oneindia readers on Facebook Live Poll predicted BJP candidate former minister V Somanna will defeat Congress candidate Priyakrishna in Govindarajanagar constituency, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X