ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫ್ಲೆಕ್ಸ್, ಜಾಹೀರಾತಿಗಾಗಿ ಹೈಕೋರ್ಟ್ ಮೊರೆ ಹೋದ ಬಿಜೆಪಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 27: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲು ಅನುಮತಿ ನಿರಾಕರಿಸಿದ ಬಿಬಿಎಂಪಿ ಕ್ರಮ ಪ್ರಶ್ನಿಸಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದೆ.

ಹೈಕೋರ್ಟ್ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಚುನಾವಣೆಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೂಕ್ತ ಶುಲ್ಕ ಪಡೆದು ಫ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆಗೆ ಅನುಮತಿ ನೀಡುವಂತೆ ಸಲ್ಲಿಸಿದ್ದ ಮನವಿಯನ್ನು ಬಿಬಿಎಂಪಿ ತಿರಸ್ಕರಿಸಿದೆ. ಹೀಗಾಗಿ ಅನುಮತಿ ನೀಡುವಂತೆ ಬಿಬಿಎಂಪಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಈ ನಿವೇಶನ ಬಿಬಿಎಂಪಿ ಸ್ವತ್ತು' ಫಲಕ ಹಾಕುವ ಮೊದಲು ತೆರಿಗೆ ಪಾವತಿಸಿಈ ನಿವೇಶನ ಬಿಬಿಎಂಪಿ ಸ್ವತ್ತು' ಫಲಕ ಹಾಕುವ ಮೊದಲು ತೆರಿಗೆ ಪಾವತಿಸಿ

ನಗರದಲ್ಲಿ ಅಳವಡಿಸಲಾಗಿರುವ ಹೋರ್ಡಿಂಗ್ ಗಳಲ್ಲಿ ಚುನಾವಣಾ ಪ್ರಚಾರದ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿ ನಿರಾಕರಿಸಿದೆ.

BJP knocks HC door against BBMP

ಜಾಹೀರಾತು ಫಲಕಗಳ ಮೂಲಕ ಪ್ರಚಾರ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ರಾಜಕೀಯ ಪಕ್ಷಗಳು ಬಿಬಿಎಂಪಿಗೆ ಮನವಿ ಸಲ್ಲಿಸಿದ್ದವು. ಆದರೆ ಪಾಲಿಕೆ ಆಯುಕ್ತರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ರಾಜಕೀಯ ಪಕ್ಷಗಳ ಮುಖಂಡರು ಆಯೋಗಕ್ಕೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಆಯೋಗವು ಖಾಲಿ ಇರುವ ಜಾಹೀರಾತು ಫಲಕಗಳನ್ನು ಎಲ್ಲ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಾನೂನು ಇಲಾಖೆಯ ಕಾರ್ಯದರ್ಶಿ, ಪೊಲೀಸ್ ಮತ್ತು ಬಿಬಿಎಂಪಿ ಆಯುಕ್ತರನ್ನೊಳಗೊಂಡ ಸಮಿತಿಯನ್ನು ರಚಿಸಿ ಏ.24ರಂದು ಆದೇಶ ಹೊರಡಿಸಿತ್ತು.

ಸಮಿತಿ ತಕ್ಷಣವೇ ಸಭೆ ಸೇರಿ ಲಭ್ಯವಿರುವ ಜಾಹೀರಾತು ಹೋರ್ಡಿಂಗ್ಸ್ ಗಳನ್ನು ರಾಜಕೀಯ ಪ್ರಚಾರಕ್ಕೆ ಎಲ್ಲರಿಗೂ ಸಮಾನವಾಗಿ ಹಂಚಲು ಕ್ರಮ ಕೈಗೊಳ್ಳಬೇಕು. ಜಾಹೀರಾತು ಪ್ರದರ್ಶನದ ಶುಲ್ಕವನ್ನು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಸೇರಿಸಬೇಕೆಂದು ಚುನಾವಣಾ ಆಯೋಗ ನಿರ್ದೇಶನ ನೀಡಿತ್ತು.

English summary
Abandon on flex advertising in Bangalore, Bjp has filed case against BBMP in high court on Friday. The court has adjourned the hearing to next week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X