ಸಂಸದ ಸ್ಥಾನಕ್ಕೆ ಯಡಿಯೂರಪ್ಪ, ಶ್ರೀರಾಮುಲು ರಾಜೀನಾಮೆ

ಬೆಂಗಳೂರು, ಮೇ 19: ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಕಾರಣ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಶ್ರೀರಾಮುಲು ಅವರು ಸಹ ರಾಜೀನಾಮೆ ನೀಡಿದ್ದಾರೆ.

2014 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕ್ರಮವಾಗಿ ಶಿವಮೊಗ್ಗ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರ ರಾಜೀನಾಮೆಯನ್ನು ಸ್ಪೀಕರ್ ಅನುಮೋದಿಸಿದ್ದಾರೆ.

BS Yeddyurappa and B Sriramulu have resigned from Lok Sabha

ಮೇ 12 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ ಎಸ್ ಯಡಿಯೂರಪ್ಪ ಅವರು ಜಯಗಳಿಸಿದ್ದರು. ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದಿಂದ ಶ್ರೀರಾಮುಲು ಗೆದ್ದಿದ್ದರು. ಶಾಸಕ ಸ್ಥಾನ ಉಳಿಸಿಕೊಳ್ಳಬೇಕಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರೂ ರಾಜೀನಾಮೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+