ಈಶಾನ್ಯ ರಾಜ್ಯ ಚುನಾವಣೆ ಸೋಲಿನ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ
ಹುಬ್ಬಳ್ಳಿ, ಮಾರ್ಚ್ 03: ಈಶಾನ್ಯ ಭಾರತದ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಲಿತಾಂಶ ಕರ್ನಾಟಕದ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ, ಯಾವುದೇ ರಾಜ್ಯದ ಪಲಿತಾಂಶ ಇನ್ನೊಂದು ರಾಜ್ಯದ ಮೇಲೆ ಪರಿಣಾಮ ಬೀರದು ಎಂದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಫಲಿತಾಂಶದಿಂದ ಆಶ್ಚರ್ಯವೇನಿಲ್ಲ, ಜನರು ಕೊಟ್ಟ ತೀರ್ಪು ಒಪ್ಪಿಕೊಳ್ಳಬೇಕು. ನಾವು ತ್ರಿಪುರ, ನಾಗಾಲ್ಯಾಂಡ್ ಗೆಲ್ಲುವ ಭ್ರಮೆಯಲ್ಲಿ ಇರಲಿಲ್ಲ ಎಂದರು.
ಇವಿಎಂ ಬಗ್ಗೆ ಮಾತನಾಡಿದ ಅವರು ಬ್ಯಾಲೆಟ್ ಪೇಪರ್‌ನಲ್ಲಿ ರಾಜ್ಯದ ಚುನಾವಣೆ ನಡೆಸಬೇಕು ಎನ್ನುವ ಅಭಿಪ್ರಾಯವಿದೆ. ಅದಕ್ಕೆ ನನ್ನ ಸಹಮತವೂ ಇದೆ. ಅನೇಕ ದೇಶಗಳು ಇವಿಎಮ್‌ಗೆ ಹೋಗಿ ಬ್ಯಾಲೆಟ್ ಪೇಪರ್‌ಗೆ ವಾಪಸಾಗಿವೆ. ಒಟ್ಟಿನಲ್ಲಿ ರಾಜ್ಯದಲ್ಲಿ ಫೇರ್ ಎಲೆಕ್ಷನ್ ಆಗಬೇಕು ಅಷ್ಟೆ ಎಂದು ಹೇಳಿದರು.

ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ
ರಾಜ್ಯದಲ್ಲಿ ಬಿಜೆಪಿಯವರೇ ಮುಕ್ತರಾಗಿ ಹೋಗುತ್ತಾರೆ ಎಂದ ಮುಖ್ಯಮಂತ್ರಿ ಅವರು ಚುನಾವಣೆಯನ್ನು ಮುಂದೂಡುವ ಪ್ರಶ್ನೆಯೇ ಇಲ್ಲ, ಅದು ಸಾಧ್ಯವೂ ಇಲ್ಲ, ಚುನಾವಣೆ ಮುಂದೂಡಲು ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ ಎಂದರು.

ಒತ್ತಡ ಇಲ್ಲ
ಲಿಂಗಾಯತ ಸ್ವತಂತ್ರ ಧರ್ಮ ವಿಚಾರದ ಬಗ್ಗೆ ಮಾತನಾಡಿದ ಅವರು ನಾಗಮೋಗನ್ ದಾಸ್ ಅವರು ಅಲ್ಪಸಂಖ್ಯಾತ ಆಯೋಗಕ್ಕೆ ವರದಿ ಕೊಟ್ಟಿದ್ದಾರೆ. ವರದಿ ಈ ವರೆಗೆ ಸರ್ಕಾರದ ಮುಂದೆ ಬಂದಿಲ್ಲ, ಬಂದಮೇಲೆ ನೋಡ್ತೇವೆ. ಬೇಗ ವರದಿ ಕೊಡುವಂತೆ ಸರ್ಕಾರದ ಒತ್ತಡವೇನು ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಭೇಟಿ ಆಗುವುದಾಗಿ ಹೇಳಿದ್ದಾರೆ
ರಾಹುಲ್ ಗಾಂಧಿ ಅವರು ಮಹದಾಯಿ ಹೋರಾಟಗಾರರನ್ನು ಭೇಟಿ ಮಾಡದೆ ಹೋದುದರ ಬಗ್ಗೆ ಸ್ಪಷ್ಟೀಕರಣ ನೀಡಿದ ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ಮಹದಾಯಿ ಹೋರಾಟಗಾರರು ಕಾಯುತ್ತಿದ್ದ ವಿಚಾರ ರಾಹುಲ್ ಗಾಂಧಿಯವರಿಗೆ ಗೊತ್ತಿರಲಿಲ್ಲ. ಗಮನಕ್ಕೆ ಬಾರದ ಕಾರಣ ಭೇಟಿಯಾಗದೆ ತೆರಳಿದ್ದಾರೆ. ಕೆ.ಸಿ. ವೇಣುಗೋಪಾಲ ಕೊನೆಯ ಕ್ಷಣದಲ್ಲಿ ರಾಹುಲ್ ಗಾಂಧಿಯವರಿಗೆ ವಿಷಯ ತಿಳಿಸಿದ್ದರು. ನನಗೆ ಗೊತ್ತಿದ್ದರೆ ಹೋಗ್ತಿದ್ದೆ ಅಂತ ರಾಹುಲ್ ಗಾಂಧಿ ಹೇಳಿದ್ದಾರೆ ಎಂದರು.

ಮೂರನೇ ಹಂತದ ಜನಾಶಿರ್ವಾದ
ರಾಹುಲ್ ಗಾಂಧಿ ಅವರು ಮಾರ್ಚ್ 20ರಿಂದ ಮೈಸೂರು ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಮೂರನೇ ಹಂತದ ಜನಾಶಿರ್ವಾದ ಯಾತ್ರೆಗೆ ರಾಹುಲ್ ದಿನಾಂಕ ನಿಗದಿಯಾಗಿದ್ದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಪಿಂಚಣಿ ಹಣ ಬಿಡುಗಡೆ ಮಾಡಲು ಹೇಳಿದ್ದೇನೆ.












Click it and Unblock the Notifications