ಜೆಡಿಎಸ್‌ಗೆ ಷರತ್ತು ರಹಿತ ಬೆಂಬಲ ನೀಡಿದ ಕಾಂಗ್ರೆಸ್
ಬೆಂಗಳೂರು, ಮೇ 15: ಕಾಂಗ್ರೆಸ್ ಪಕ್ಷವು ಜೆಡಿಸ್ ಗೆ ಬೆಂಬಲ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಖೃತವಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಪರಮೇಶ್ವರ್ ಅವರು, ಕಾಂಗ್ರೆಸ್ ಪಕ್ಷವು, ಜೆಡಿಎಸ್ ಸರ್ಕಾರ ರಚಿಸಲು ಸಂಪೂರ್ಣ ಬೆಂಬಲ ನೀಡಲಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಇದೇ ಮಾತನ್ನು ಹೇಳಿದ್ದು, ನಾವು ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ ಅಲ್ಲದೆ, ಸಚಿವ ಸಂಪುಟದ ಬಗೆಗಿನ ಸಂಪೂರ್ಣ ನಿರ್ಣಯ ಜೆಡಿಎಸ್‌ನದ್ದೇ ಆಗಿರುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಆ ಮೂಲಕ ಮುಖ್ಯಮಂತ್ರಿ ಸ್ಥಾನವನ್ನು ಜೆಡಿಎಸ್‌ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ ಅಲ್ಲದೆ ಸಚಿವ ಸಂಪುಟದ ತೀರ್ಮಾನವನ್ನು ಕೂಡ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.
ಜೆಡಿಎಸ್ ಮತ್ತು ಕಾಂಗ್ರೆಸ್‌ನ ಮೈತ್ರಿಗೆ ಸಂಧಾನವನ್ನು ಡಿ.ಕೆ.ಶಿವಕುಮಾರ್ ಅವರು ವಹಿಸಿಕೊಳ್ಳಲಿದ್ದಾರೆ. ಅಲ್ಲದೆ ಅವರು ಈಗಾಗಲೇ ದೇವೇಗೌಡ ಅವರೊಂದಿಗೆ ಮಾತುಕತೆಯಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.












Click it and Unblock the Notifications