ಜೂನ್ 14ಕ್ಕೆ ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಮೊದಲ ಸಭೆ

ಬೆಂಗಳೂರು, ಜೂನ್ 11: ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಮೊದಲ ಸಭೆ ಜೂನ್ 14, ಗುರುವಾರದಂದು ನಡೆಯಲಿದೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮನ್ವಯ ಸಮಿತಿ ಸಭೆಯು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ.

ಸಂಪುಟ ರಚನೆ ಮತ್ತು ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಇನ್ನೂ ಬಂಡಾಯ ಶಮನವಾಗಿಲ್ಲ. ಅದಕ್ಕೂ ಮುನ್ನವೇ ಸಮನ್ವಯ ಸಮೀತಿ ಸಭೆಯ ದಿನಾಂಕವನ್ನು ನಿಗದಿಪಡಿಸುವ ಮೂಲಕ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.

Coordination committee meeting of Karnatakas coalition government on June 14th

ಆದರೆ ದಿನಾಂಕ ನಿಗದಿಪಡಿಸುವ ಮುನ್ನ ಸಮನ್ವಯ ಸಮಿತಿಯ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿಲ್ಲ ಎಂಬ ಬಗ್ಗೆಯೂ ಕೆಲವರಲ್ಲಿ ಬೇಸರವಿದೆ ಎನ್ನಲಾಗುತ್ತಿದೆ.

ಸಮನ್ವಯ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ, ಡ್ಯಾನಿಷ್‌ ಅಲಿ, ಕೆ.ಸಿ.ವೇಣುಗೋಪಾಲ ಅವರು ಭಾಗಹಿಸಲಿದ್ದಾರೆ. ಅಲ್ಲದೆ ಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+