ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಚನ್ನಪಟ್ಟಣದಲ್ಲಿ ಎಚ್ಡಿಕೆ ಜಯಭೇರಿ
ಬೆಂಗಳೂರು, ಏಪ್ರಿಲ್ 24: ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ಬಾರಿ ಸಾಮಾಜಿಕ ಜಾಲ ತಾಣಗಳು ಭಾರಿ ಪರಿಣಾಮ ಬೀರುತ್ತಿವೆ. ಈ ಸಂದರ್ಭದಲ್ಲಿ ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಪ್ರತಿದಿನ ಫೇಸ್ಬುಕ್ ಲೈವ್ ಪೋಲ್ ನಡೆಸುತ್ತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ.
ಬೊಂಬೆನಾಡು ಚನ್ನಪಟ್ಟಣದಲ್ಲಿ ಸದ್ಯ ಸಿ.ಪಿ ಯೋಗೇಶ್ವರ ಅವರು ಹಾಲಿ ಶಾಸಕ. ಒಕ್ಕಲಿಗ ಮತದಾರರೇ ಇಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ.

2013 ರ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ ಯೋಗೇಶ್ವರ್ 80,099 ಮತ ಪಡೆದು ಜಯಭೇರಿ ಗಳಿಸಿದ್ದರೆ, ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಅನಿತಾ ಕುಮಾರಸ್ವಾಮಿ 73,635 ಮತ ಪಡೆದು ಗೆಲುವಿನಿಂದ ವಂಚಿತರಾಗಿದ್ದರು.
ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ನಿಂದ ಎಚ್.ಎಂ.ರೇವಣ್ಣ, ಜೆಡಿಎಸ್ನಿಂದ ಎಚ್.ಡಿ.ಕುಮಾರಸ್ವಾಮಿ ಕಣದಲ್ಲಿದ್ದಾರೆ
ಕ್ಷೇತ್ರದಲ್ಲಿ 2013ರಲ್ಲಿ ಪುರುಷ ಮತದಾರರ ಸಂಖ್ಯೆ 105,688 ಇದ್ದರೆ, ಮಹಿಳೆಯರ ಸಂಖ್ಯೆ 109,015 ಇತ್ತು. ಅಂದರೆ ಒಟ್ಟು ಮತದಾರರ ಸಂಖ್ಯೆ 214,703ಇತ್ತು. ಜಾತಿವಾರು ಮತಗಳು ಒಕ್ಕಲಿಗರು 105,920, ದಲಿತರು 39,250, ಕುರುಬರು 7,136, ಮುಸ್ಲಿಮರು 24,000, ಲಿಂಗಾಯಿತರು 9,450, ತಿಗಳರು 8,232, ಬೆಸ್ತರು 9,700, ಇತರೆ 10,500 ಜನರಿದ್ದರು.

ಫೇಸ್ಬುಲ್ ಲೈವ್ ಮತದಾನ:
ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚನ್ನಪಟ್ಟಣದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.
ಫಲಿತಾಂಶ: ಸುಮಾರು ಒಂದು ಅಥವಾ ಎರಡು ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ಈ ವೇಳೆಯಲ್ಲಿ ಮುನ್ನೂರಕ್ಕೂ ಅಧಿಕ ಬಾರಿ ಶೇರ್ ಆಗಿದ್ದು, 40 ಸಾವಿರಕ್ಕೂ ಅಧಿಕ ಮಂದಿ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದು, 4ಸಾವಿರಕ್ಕೂ ಅಧಿಕ ಮಂದಿ ಕಾಮೆಂಟ್ ಮಾಡಿದ್ದಾರೆ. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.
ಬಿಜೆಪಿ ಅಭ್ಯರ್ಥಿ ಸಿಪಿಯೋಗೇಶ್ವರ್ ಅವರಿಗೆ 684 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ಎಚ್ಎಂ ರೇವಣ್ಣ ಅವರಿಗೆ 408ಮತಗಳು ಸಿಕ್ಕಿವೆ. ಇನ್ನು ಜೆಡಿಎಸ್ ನ ಎಚ್ಡಿ ಕುಮಾರಸ್ವಾಮಿ ಅವರಿಗೆ 2835 ಮತಗಳು ಸಿಕ್ಕಿದ್ದು, ಜಯಭೇರಿ ಬಾರಿಸಿದ್ದಾರೆ.












Click it and Unblock the Notifications