ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡಿಯಾ ಟುಡೇ, ಕಾರ್ವಿ ಸಮೀಕ್ಷೆ : ಯಾವ ಪಕ್ಷಕ್ಕೆ ಎಷ್ಟು ಸೀಟು?

|
Google Oneindia Kannada News

ಬೆಂಗಳೂರು, ಏಪ್ರಿಲ್ 13 : ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಬಗ್ಗೆ ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಬಹಿರಂಗವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ.

ಶುಕ್ರವಾರ ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ.

ಸಿಫೋರ್ ಸಮೀಕ್ಷೆ : ಎರಡು ಬಾರಿ ಫಲಿತಾಂಶದಲ್ಲೂ 'ಕೈ' ಮೇಲುಗೈಸಿಫೋರ್ ಸಮೀಕ್ಷೆ : ಎರಡು ಬಾರಿ ಫಲಿತಾಂಶದಲ್ಲೂ 'ಕೈ' ಮೇಲುಗೈ

ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್, 150 ಸ್ಥಾನದಲ್ಲಿ ಜಯಗಳಿಸುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ಸಹ ಸ್ಪಷ್ಟ ಬಹುಮತವನ್ನು ಪಡೆಯುವುದಿಲ್ಲ. ಯಾವುದೇ ಪಕ್ಷವೂ 113 ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಸಮೀಕ್ಷೆ ಹೇಳಿದೆ.

ಸಿ ವೋಟರ್ ಸಮೀಕ್ಷೆ: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆಸಿ ವೋಟರ್ ಸಮೀಕ್ಷೆ: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ

ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಕಿಂಗ್ ಮೇಕರ್ ಆಗಲಿದೆ. ಜೆಡಿಎಸ್ ಚುನಾವಣೆಯಲ್ಲಿ 34 ರಿಂದ 43 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಮೇ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್‌ ಪಕ್ಷಕ್ಕೆ ಎಷ್ಟು ಸೀಟು?

ಕಾಂಗ್ರೆಸ್‌ ಪಕ್ಷಕ್ಕೆ ಎಷ್ಟು ಸೀಟು?

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸುತ್ತಿದೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಪಕ್ಷ ಬಹುಮತವನ್ನುಗಳಿಸುವುದಿಲ್ಲ.

90 ರಿಂದ 101 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಸಮೀಕ್ಷೆ ಹೇಳಿದೆ.

ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 113. ಚುನಾವಣೆಗೆ 1 ತಿಂಗಳು ಬಾಕಿ ಇರುವಾಗ ಪ್ರಕಟಗೊಂಡ ಸಮೀಕ್ಷೆ ಯಾವ ಪಕ್ಷವೂ ಬಹುಮತ ಪಡೆಯುವುದಿಲ್ಲ ಎಂದು ವರದಿ ನೀಡಿದೆ.

ಬಿಜೆಪಿಗೆ ಎಷ್ಟು ಕ್ಷೇತ್ರದಲ್ಲಿ ಜಯ?

ಬಿಜೆಪಿಗೆ ಎಷ್ಟು ಕ್ಷೇತ್ರದಲ್ಲಿ ಜಯ?

ಕರ್ನಾಟಕ ಪ್ರಮುಖ ಪ್ರತಿಪಕ್ಷ ಬಿಜೆಪಿ. ಈ ಬಾರಿಯ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲುವ ಗುರಿಯನ್ನು ಪಕ್ಷ ಹೊಂದಿದೆ.

ಆದರೆ, ಇಂದು ಪ್ರಕಟವಾದ ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಬಿಜೆಪಿ 78 ರಿಂದ 86 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದೆ.

ಈಗಾಗಲೇ ಬಿಜೆಪಿ ಚುನಾವಣೆಗೆ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಭರ್ಜರಿಯಾಗಿ ಪ್ರಚಾರವನ್ನು ನಡೆಸುತ್ತಿದೆ.

ಜೆಡಿಎಸ್ ಎಷ್ಟು ಕ್ಷೇತ್ರ ಗೆಲ್ಲುತ್ತದೆ?

ಜೆಡಿಎಸ್ ಎಷ್ಟು ಕ್ಷೇತ್ರ ಗೆಲ್ಲುತ್ತದೆ?

ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ.

ಜೆಡಿಎಸ್ ಪಕ್ಷ ಕಿಂಗ್ ಮೇಕರ್ ಆಗಲಿದೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 34 ರಿಂದ 43 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ.

ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಬಿಎಸ್‌ಪಿ ಮೈತ್ರಿ ಮಾಡಿಕೊಂಡಿವೆ. 20 ಕ್ಷೇತ್ರಗಳಲ್ಲಿ ಬಿಎಸ್‌ಪಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ.

ಇತರರು ಎಷ್ಟು ಸ್ಥಾನ?

ಇತರರು ಎಷ್ಟು ಸ್ಥಾನ?

ಕರ್ನಾಟಕದಲ್ಲಿ ಹಲವಾರು ಹೊಸ ಪಕ್ಷಗಳು ಸ್ಥಾಪನೆಯಾಗಿವೆ. ಹಲವಾರು ಪಕ್ಷೇತರ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಾರೆ.

ಈ ಬಾರಿಯ ಚುನಾವಣೆಯಲ್ಲಿ ಇತರರು 4 ರಿಂದ 7 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಇಂಡಿಯಾ ಟುಡೇ ಮತ್ತು ಕಾರ್ವಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಹೇಳಿದೆ.

ವಿಧಾನಸಭೆಯ ಚಿತ್ರಣ ಹೀಗಿದೆ

ವಿಧಾನಸಭೆಯ ಚಿತ್ರಣ ಹೀಗಿದೆ

ಕರ್ನಾಟಕ ವಿಧಾನಸಭೆಯ ಒಟ್ಟು ಸದಸ್ಯ ಬಲ 225. 224 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಮತದಾನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಒಂದು ಕ್ಷೇತ್ರಕ್ಕೆ ನೇರವಾಗಿ ನಾಮ ನಿರ್ದೇಶನ ಮಾಡಲಾಗುತ್ತದೆ.

ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ

ಕಾಂಗ್ರೆಸ್ : 90-101
ಬಿಜೆಪಿ : 78-86
ಜೆಡಿಎಸ್: 34-43
ಇತರರು: 04-07

English summary
Karnataka assembly elections 2018 opinion poll by India Today and Karvy. In the Karnataka assembly elections 2018 state heading towards a hung assembly, no party is expected to reach the magic number of 112.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X