ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡಿಯಾ ಟುಡೇ ಸಮೀಕ್ಷೆ : ಸಿದ್ದರಾಮಯ್ಯ ಸರ್ಕಾರದ ಆಡಳಿತ ಹೇಗಿದೆ?

|
Google Oneindia Kannada News

Recommended Video

Karnataka Elections 2018 : ಇಂಡಿಯಾ ಟುಡೇ ಸಮೀಕ್ಷೆ | ಸಿದ್ದರಾಮಯ್ಯ ಸರ್ಕಾರದ ಆಡಳಿತ ಹೇಗಿದೆ | Oneindia Kannada

ಬೆಂಗಳೂರು, ಏಪ್ರಿಲ್ 13 : ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಬಗ್ಗೆ ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಬಹಿರಂಗವಾಗಿದೆ.

ಶುಕ್ರವಾರ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಆಡಳಿತ ನೀಡಿದೆ ಎಂದು ಶೇ 8ರಷ್ಟು ಜನರು ಅಭಿಪ್ರಾಯಪಟ್ಟದ್ದಾರೆ.

ಇಂಡಿಯಾ ಟುಡೇ, ಕಾರ್ವಿ ಸಮೀಕ್ಷೆ : ಯಾವ ಪಕ್ಷಕ್ಕೆ ಎಷ್ಟು ಸೀಟು?ಇಂಡಿಯಾ ಟುಡೇ, ಕಾರ್ವಿ ಸಮೀಕ್ಷೆ : ಯಾವ ಪಕ್ಷಕ್ಕೆ ಎಷ್ಟು ಸೀಟು?

ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ.

ಸಮೀಕ್ಷೆ 2018 ಚುನಾವಣಾ ಪೂರ್ವ ಸಮೀಕ್ಷೆಯ ಮುಖ್ಯಾಂಶಗಳುಸಮೀಕ್ಷೆ 2018 ಚುನಾವಣಾ ಪೂರ್ವ ಸಮೀಕ್ಷೆಯ ಮುಖ್ಯಾಂಶಗಳು

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. 27, 919 ಜನರನ್ನು ಸಂದರ್ಶಿಸಿ ಸಮೀಕ್ಷಾ ವರದಿಯನ್ನು ಸಿದ್ಧಪಡಿಸಲಾಗಿದೆ.

India Today Karvy opinion poll : Karnataka government performance

ಸಮೀಕ್ಷೆಯ ಫಲಿತಾಂಶ

* ಅತ್ಯುತ್ತಮ ಆಡಳಿತ ಶೇ 8

* ಉತ್ತಮ ಆಡಳಿತ ಶೇ 27

* ತೃಪ್ತಿದಾಯಕ ಶೇ 31

* ಉತ್ತಮವಾಗಿಲ್ಲ ಶೇ 21

10 ರಲ್ಲಿ 7 ಅಂಕ : ಕಳೆದ ವಾರ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ದಕ್ಷ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಬಗ್ಗೆ ಸಮೀಕ್ಷೆ ನಡೆಸಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಜನರು 10ರಲ್ಲಿ 7 ಅಂಕಗಳನ್ನು ನೀಡಿದ್ದರು.

English summary
Karnataka assembly elections 2018 opinion poll by India Today and Karvy. 8 percent of people said that Chief Minister Siddaramaiah government performance is very good.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X