ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ ಜೊತೆ ಮೈತ್ರಿಗೆ ಜೆಡಿಎಸ್‌ ಒಪ್ಪಿಗೆ, ಬಿಎಸ್‌ವೈ ಸಿಎಂ ಕನಸು ಭಗ್ನ

By Manjunatha
|
Google Oneindia Kannada News

ಬೆಂಗಳೂರು, ಮೇ 15: ಕಾಂಗ್ರೆಸ್ ಪಕ್ಷ ನೀಡಿದ್ದ ಬೆಂಬಲವನ್ನು ಒಪ್ಪಿಕೊಂಡಿರುವ ಜೆಡಿಎಸ್ ಪಕ್ಷವು, ಕಾಂಗ್ರೆಸ್‌ ಜೊತೆ ಸೇರಿ ಸರ್ಕಾರ ರಚಿಸಲು ಒಪ್ಪಿಗೆ ಸೂಚಿಸಿದೆ.

ಈಗಾಗಲೇ ಜೆಡಿಎಸ್ ರಾಜ್ಯಧ್ಯಕ್ಷ ಕುಮಾರಸ್ವಾಮಿ ಅವರು ರಾಜ್ಯಪಾಲರಿಗೆ ಭೇಟಿ ಆಗಲು ಅನುಮತಿ ಕೋರಿ ಪತ್ರ ಬರೆದಿದ್ದು, ಪತ್ರದಲ್ಲಿ ಕಾಂಗ್ರೆಸ್‌ ಜೊತೆ ಸೇರಿ ಸರ್ಕಾರ ರಚಿಸಲು ಅನುಮತಿ ಕೋರಿದ್ದಾರೆ.

ಆಜಾದ್ ತಂತ್ರ : ಕುಮಾರಸ್ವಾಮಿ ಸಿಎಂ, ಕೈ -ತೆನೆ ಮೈತ್ರಿಆಜಾದ್ ತಂತ್ರ : ಕುಮಾರಸ್ವಾಮಿ ಸಿಎಂ, ಕೈ -ತೆನೆ ಮೈತ್ರಿ

ದೇವೇಗೌಡ ಅವರ ನಿವಾಸದಲ್ಲಿ ದೀರ್ಥ ಕಾಲ ಚರ್ಚಿಸಿದ ಕುಮಾರಸ್ವಾಮಿ ಅವರು ಆ ನಂತರ ಈ ರೀತಿಯ ನಿರ್ಧಾರಕ್ಕೆ ಬಂದಿದ್ದಾರೆ. ಕಾಂಗ್ರೆಸ್‌ ಪಕ್ಷವು ಬೇಷರತ್ತಾಗಿ ಜೆಡಿಎಸ್‌ಗೆ ಬೆಂಬಲ ಸೂಚಿಸಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟ ಸ್ಥಾನದ ನಿರ್ಧಾರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.

JDS agrees to form government with alliance of congress

ಅತಂತ್ರ ವಿಧಾನಸಭೆ: ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆಅತಂತ್ರ ವಿಧಾನಸಭೆ: ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಯಿಂದಾಗಿ ಅತಿ ದೊಡ್ಡವಾಗಿ ಹೊರಹೊಮ್ಮಿದರೂ ಕೂಡ ಬಿಜೆಪಿಯು ಅಧಿಕಾರದ ಕುರ್ಚಿಯಿಂದ ದೂರವೇ ಉಳಿಯಬೇಕಾಗಿದೆ. ಅದರಲ್ಲಿಯೂ ಯಡಿಯೂರಪ್ಪ ಅವರ ಬಹು ವರ್ಷದ ಕನಸಾದ ಮುಖ್ಯಮಂತ್ರಿ ಸ್ಥಾನ ಸದ್ಯಕ್ಕಂತೂ ಅವರಿಂದ ದೂರ ಹೊದಂತೆ ಕಾಣುತ್ತಿದೆ.

English summary
JDS party agreed to alliance with congress and form government. HD Kumaraswamy already wrote letter to Governor and requested to give permission to form government with congress support.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X