ಬೆಂಗಳೂರಿನ ಕೆಆರ್ ಪುರದಲ್ಲಿ ಮತ್ತೆ ಕಮಲ ಅರಳುವುದೇ?
ಕೃಷ್ಣರಾಜಪುರ ಕ್ಷೇತ್ರದಲ್ಲಿ ವಿವಿಧ ಯೋಜನೆಗಳಡಿ ಸಂಚಾರ ಸಮಸ್ಯೆ ನೀಗಲು ಮೇಲ್ಸೇತುವೆ, ರಸ್ತೆ ರಿಪೇರಿ ಮುಂತಾದ ಕಾರ್ಯಕ್ರಮಗಳು ತಕ್ಕಮಟ್ಟಿಗೆ ಕಾರ್ಯರೂಪಕ್ಕೆ ಬಂದಿದೆ. ಆದರೆ, ಕಾನೂನು ಸುವ್ಯವಸ್ಥೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಕ್ಷೇತ್ರ ಬಳಲುತ್ತಿದೆ.
* ವಿಧಾನಸಭಾ ಕ್ಷೇತ್ರ ಸಂಖ್ಯೆ 151
ಹಾಲಿ ಶಾಸಕ- ಬಿ.ಎ ಬಸವರಾಜ (ಕಾಂಗ್ರೆಸ್)
ಸೋತ ಅಭ್ಯರ್ಥಿ ಎನ್. ಎಸ್ ನಂದೀಶ ರೆಡ್ಡಿ (ಬಿಜೆಪಿ)
* ಸಮಸ್ಯೆಗಳು: ಬೆಂಗಳೂರು ದಕ್ಷಿಣ ಕ್ಷೇತ್ರದ ನಂತರ ಅತ್ಯಧಿಕ ಮತದಾರರನ್ನು ಹೊಂದಿರುವ ಕ್ಷೇತ್ರ ಇದಾಗಿದೆ. ಕ್ಷೇತ್ರ ಪುನರ್ವಿಂಗಡಣೆ ಮಾಡಲು ಮನವಿ ಕೂಡಾ ಇದೆ. ಮತದಾರರ ಸಂಖ್ಯೆ ಹೆಚ್ಚಾಗಿರುವುದರಿಂದ ಸಮಸ್ಯೆಗಳೂ ಹಾಗಿಯೇ ಇವೆ. ಹೊಸಕೋಟೆ ಮಾರ್ಗವಾಗಿ ಹೆದ್ದಾರಿ ಇರುವುದರಿಂದ ಸಂಚಾರ ಸಮಸ್ಯೆ ಇದೆ. ಪೊಲೀಸ್ ವ್ಯವಸ್ಥೆ ಸುಧಾರಿಸಬೇಕಾಗಿದೆ. ಇನ್ನು ಕುಡಿಯುವ ನೀರು ಸಮಸ್ಯೆ ಹಾಗೆಯೇ ಇದೆ. ರೇಶನ್ ಕಾರ್ಡ್, ಆಧಾರ್ ಕಾರ್ಡ್ ಮಾಡಿಸಲು ಜನ ಪರದಾಡುತ್ತಿದ್ದಾರೆ. ಆದರೆ ಶಾಸಕರು ಇದರತ್ತ ತಲೆ ಹಾಕಿಲ್ಲ. ನಕಲಿ ಕಾರ್ಡ್ ಬಳಕೆ ಬಗ್ಗೆ ಇತ್ತೀಚೆಗೆ ಭಾರಿ ಗದ್ದಲ ಏರ್ಪಟ್ಟಿತ್ತು.

2013ರ ಫಲಿತಾಂಶ:
* ವಾರ್ಡ್: ಹೊರಮಾವು, ರಾಮಮೂರ್ತಿ ನಗರ, ವಿಜ್ಞಾನ ಪುರ, ಕೆಆರ್ ಪುರಂ, ಬಸವನ ಪುರ, ದೇವಸಂದ್ರ, ಎ ನಾರಾಯಣ ಪುರ, ವಿಜ್ಞಾನನಗರ, ಎಚ್ಎಎಲ್ ಏರ್ ಪೋರ್ಟ್
* ಮತದಾರರ ಸಂಖ್ಯೆ: 339866.
ಕಳೆದ ಬಾರಿ 29 ಮಂದಿ ನಾಮಪತ್ರ ಸಲ್ಲಿಸಿದ್ದರು, 3 ನಾಮಪತ್ರ ತಿರಸ್ಕೃತಗೊಂಡಿತ್ತು. 4 ಮಂದಿ ವಿಥ್ ಡ್ರಾ ಮಾಡಿಕೊಂಡರು.22 ಮಂದಿ ಸ್ಪರ್ಧಿಸಿದ್ದರು.
ಕಳೆದ ಬಾರಿ ವೋಟ್ ಮಾಡಿದವರು ಶೇ. 5891ರಷ್ಟು ಮಂದಿ. 200184 ಮತಗಳ ಪೈಕಿ ಭೈರತಿ ಬಸವರಾಜ್ ಅವರು 106299 ಮತಗಳನ್ನು ಗಳಿಸಿ ಜಯಭೇರಿ ಬಾರಿಸಿದ್ದರು. ಬಿಜೆಪಿಯ ನಂದೀಶ್ ರೆಡ್ಡಿ ಅವರು 82298ರಷ್ಟು ಮತ ಪಡೆದು 11.99% (24001 ಮತಗಳು) ಅಂತರದಿಂದ ಸೋಲು ಕಂಡಿದ್ದರು.
ಈ ಬಾರಿ ಕೂಡಾ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದೆ. ಹಾಲಿ ಶಾಸಕರ ವಿರುದ್ಧ ಸಾಕಷ್ಟು ಪ್ರತಿಭಟನೆ ನಡೆಸಿ, ಕ್ಷೇತ್ರದ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದರೂ ನಂದೀಶ್ ರೆಡ್ಡಿ ಅವರಿಗೆ ನಿರಾಶೆಯಾಗುವ ಸಾಧ್ಯತೆ ಹೆಚ್ಚಿದೆ. ಜೆಡಿಎಸ್ ನಿಂದ ಗೋಪಾಲ್ ಕಣಕ್ಕಿಳಿಯುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications