ಕ್ಷೇತ್ರ ಪರಿಚಯ : ಬೀದರ್‌ ಕ್ಷೇತ್ರದಲ್ಲಿ ಗೆಲುವಿನ ಕಿರೀಟ ಯಾರಿಗೆ?

ಕರ್ನಾಟಕ ರಾಜ್ಯದ ತುತ್ತ ತುದಿಯಲ್ಲಿರುವ ಜಿಲ್ಲೆ ಬೀದರ್. ಬೀದರ್‌ಗೆ ಹೋದರೆ ಕೋಟೆ ನೋಡದೇ ವಾಪಸ್ ಬರಬೇಡ ಎಂಬ ಮಾತಿದೆ. ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೊತೆ ಬೀದರ್ ಗಡಿ ಹಂಚಿಕೊಂಡಿದೆ. ಹೈದರಾಬಾದ್-ಕರ್ನಾಟಕ ಭಾಗದ ಪ್ರಮುಖ ನಗರವಿದು.

ರಾಜಕೀಯವಾಗಿ ಯಡಿಯೂರಪ್ಪ ಪ್ರಭಾವ ಬೀದರ್ ಕ್ಷೇತ್ರದಲ್ಲಿ ಹೆಚ್ಚಿದೆ. ಯಡಿಯೂರಪ್ಪ ಕಟ್ಟಾ ಬೆಂಬಲಿಗರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ 2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆದಿದ್ದರು. 2016ರಲ್ಲಿ ಅವರು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ನಂತರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಹೀಮ್ ಖಾನ್ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಅವರಿಗೆ ಟಿಕೆಟ್ ಖಚಿತವಾಗಿದೆ. ಬಿಜೆಪಿಯಿಂದ ಗುರುಪಾದಪ್ಪ ನಾಗಮಾರಪಲ್ಲಿ ಪುತ್ರ ಸೂರ್ಯಕಾಂತ ನಾಗಮಾರಪಲ್ಲಿ ಅವರು ಅಭ್ಯರ್ಥಿಯಾಗಬಹುದು.

Karnataka Assembly Election 2018 : Bidar constituency profile

ಉಪ ಚುನಾವಣೆಯಲ್ಲಿ ಜಯಗಳಿಸಿರುವ ರಹೀಮ್ ಖಾನ್ ಕ್ಷೇತ್ರದಲ್ಲಿ ಉತ್ತಮ ಪ್ರಭಾವ ಹೊಂದಿದ್ದಾರೆ. 2009ರಲ್ಲಿ ಬಿಜೆಪಿ ಸರ್ಕಾರವಿದ್ದಾಗ 10,814, 2016ರಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ನಡೆದ ಉಪ ಚುನಾವಣೆಯಲ್ಲಿ 22,721 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುರುಪಾದಪ್ಪ ನಾಗಮಾರಪಲ್ಲಿ 50,718 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ರಹೀಮ್ ಖಾನ್ 48,147 ಮತ ಪಡೆದಿದ್ದರು. ಜೆಡಿಎಸ್‌ನ ಡಾ.ಅಮರ್ ಯೆರೋಲ್ಕರ್ 2,420 ಮತ ಪಡೆದಿದ್ದರು.

2016ರಲ್ಲಿ ಗುರುಪಾದಪ್ಪ ನಾಗಮಾರಪಲ್ಲಿ ನಿಧನ ಹೊಂದಿದರು. ನಂತರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಹೀನ್ ಖಾನ್ 70,138 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+