ಚಾಮುಂಡೇಶ್ವರಿ ಕ್ಷೇತ್ರ : ಕುರುಬರ ಮತ ಗೆದ್ದವನೇ ಬಾಸ್!
Recommended Video

ಬೆಂಗಳೂರು, ಏಪ್ರಿಲ್ 11: ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ. ಅಲ್ಲದೆ, ಒಕ್ಕಲಿಗರ ಪ್ರಾಬಲ್ಯವೂ ಇದೆ. ಇಲ್ಲಿ ಜೆಡಿಎಸ್ ನ ಜಿ.ಟಿ. ದೇವೇಗೌಡ ಅವರು ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಇದು ಸಿದ್ದರಾಮಯ್ಯ ಅವರ ಹಿಂದಿನ ಕ್ಷೇತ್ರ. ಈ ಬಾರಿಯೂ ಸ್ಪರ್ಧಿಸಲಿರುವ ಕ್ಷೇತ್ರ.
ಹಾಗಾಗಿ, ಈ ಬಾರಿ ಈ ಕ್ಷೇತ್ರವನ್ನು ಮತ್ತೆ ತಮ್ಮ ವಶಕ್ಕೆ ಮಾಡಿಕೊಳ್ಳಲು ಇಚ್ಛಿಸಿರುವ ಅವರು, ತಮ್ಮ ಪುತ್ರ ಯತೀಶ್ ಅವರನ್ನು ಇಲ್ಲಿ ಕಣಕ್ಕಿಳಿಸುವ ಬಗ್ಗೆ ಆಲೋಚಿಸಿದ್ದರು. ಸಿಎಂ ಆಪ್ತ ಕೆ. ಮರೀಗೌಡ ಕೂಡಾ ಟಿಕೆಟ್ ಆಕಾಂಕ್ಷಿ ಯಾಗಿದ್ದರು.
ಆದರೆ, ಮರೀಗೌಡ ಅವರಿಗೆ ಇಲ್ಲಿ ಕೊಂಚ ಒಳ್ಳೆಯ ಹೆಸರಿಲ್ಲ. ಹಿಂದೆ, ಮೈಸೂರು ಜಿಲ್ಲಾಧಿಕಾರಿಗೆ ಅವಾಜ್ ಹಾಕಿ ಸಿದ್ದರಾಮಯ್ಯ ಅವರಿಗೆ ಇರುಸು ಮುರುಸು ತಂದಿದ್ದ ಮರೀಗೌಡ ಅವರ ಪ್ರಕರಣವನ್ನು ಇಲ್ಲಿನ ಜನರು ಮರೆತಿಲ್ಲ.
ಹಾಗಾಗಿ, ಸಿದ್ದರಾಮಯ್ಯ ಅವರು ಅವರಿಗೆ ಟಿಕೆಟ್ ಕೊಡುವ ಬಗ್ಗೆ ಕೊಂಚ ಆಲೋಚಿಸಬೇಕಿದೆ ಎಂದು ಈ ಕ್ಷೇತ್ರದ ಕಾಂಗ್ರೆಸ್ ಅಭಿಮಾನಿಗಳು ಹೇಳುತ್ತಾರೆ. ಅಭಿಮಾನಿಗಳ ಮಾತಿಗೆ ಬೆಲೆ ಕೊಟ್ಟು, ಆಂತರಿಕ ಸಮೀಕ್ಷೆ ಮನ್ನಿಸಿ, ಇವರಿಬ್ಬರನ್ನು ಬಿಟ್ಟು ತಾವೇ ಕಣಕ್ಕಿಳಿಯಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ.. ಮುಂದೇನು? ಸಿದ್ದರಾಮಯ್ಯ ಅವರಿಗೆ ಗೆಲುವು ಸುಲಭವೆ? ಸೋಲಿನ ಭೀತಿಯಿಂದ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆಯೆ? ಮುಂದೆ ಓದಿ...

ಸಿಎಂ ಸಿದ್ದರಾಮಯ್ಯ ಅವರ ಸ್ಪರ್ಧೆ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲುವುದು ಕಷ್ಟ ಎಂಬ ವರದಿಗಳು ಬರುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳಿಗೆ ಬೇರೆ ಕ್ಷೇತ್ರವನ್ನು ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ. ಆದರೆ, ಸಿಎಂ ಮಾತ್ರ ತಮ್ಮ ನೆಚ್ಚಿನ ಚಾಮುಂಡೇಶ್ವರಿಯಲ್ಲೇ ಸ್ಪರ್ಧಿಸಲು ಒಲವು ಹೊಂದಿದ್ದು, ಇಲ್ಲಿ ಸ್ಪರ್ಧಿಸುವುದರಿಂದ ಪಕ್ಷಕ್ಕೆ ಲಾಭವಾಗಲಿದೆ ಎಂದು ಹೈಕಮಾಂಡ್ ಗೆ ಮನವರಿಕೆ ಮಾಡುತ್ತಿದ್ದಾರೆ.
ಜತೆಗೆ ಹೈಕಮಾಂಡ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ನಿರ್ಧಾರ ಸೇರಿದಂತೆ ಈ ಕುರಿತು ತೀರ್ಮಾನ ತೆಗೆದುಕೊಳ್ಳಲು ಸಿದ್ದರಾಮಯ್ಯನವರಿಗೆ ಸ್ವಾತಂತ್ರ್ಯ ನೀಡಿದೆ. ಬದಾಮಿಯಿಂದ ಏಪ್ರಿಲ್ 23ರ ವೇಳೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಇದೆ. ಆದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ಜಿಟಿ ದೇವೇಗೌಡ ಹಾಗೂ ಸಿದ್ದರಾಮಯ್ಯ
ಜಿ.ಟಿ.ದೇವೇಗೌಡ ಮತ್ತು ಸಿದ್ದರಾಮಯ್ಯ ಅವರು ಒಂದು ಕಾಲದಲ್ಲಿ ಒಟ್ಟಿಗೆ ಇದ್ದವರು. 1983ರಿಂದ ಒಟ್ಟಿಗೆ ಇದ್ದ ಅವರು ಬೇರೆ ಯಾಗಿ 3 ದಶಕಗಳು ಕಳೆದಿವೆ. ಈಗ ಅವರು ಬೇರೆ-ಬೇರೆ ಪಕ್ಷದಲ್ಲಿದ್ದು, ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖಾಮುಖಿಯಾಗಿ ಚುನಾವಣಾ ಅಖಾಡಕ್ಕಿಳಿದ್ದಾರೆ.
ಸಿದ್ದರಾಮಯ್ಯ ಜೊತೆಗಿನ ಸ್ನೇಹ ಕಡಿದುಕೊಂಡ ಜಿ.ಟಿ.ದೇವೇಗೌಡರು ಬಿಜೆಪಿ ಸೇರಿದರು. ನಂತರ ಜೆಡಿಎಸ್ ಪಕ್ಷಕ್ಕೆ ಸೇರಿದರು. 2013ರ ಚುನಾವಣೆಯಲ್ಲಿ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ.

ಚಾಮುಂಡೇಶ್ವರಿಯನ್ನು ಕಡೆಗಣಿಸಿದ್ದಾರೆ
ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರಕ್ಕೆ ಹೋದ ಬಳಿಕ ಚಾಮುಂಡೇಶ್ವರಿಯನ್ನು ಕಡೆಗಣಿಸಿದ್ದಾರೆ. 5 ಬಾರಿ ಗೆಲುವು ಕಂಡ ಕ್ಷೇತ್ರದತ್ತ ಮುಖ ಮಾಡಿಲ್ಲ. ಜನರಿಗೆ ಈ ಬಗ್ಗೆ ತಿಳಿದಿದೆ. ಈ ಬಾರಿ ಅವರು ಜನರ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. 10 ವರ್ಷಗಳ ಬಳಿಕ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂದಿದ್ದಾರೆ ಎಂಬುದನ್ನು ಜನರು ಬಲ್ಲರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ದಲಿತ ಸಂಘಟನೆಗಳ ವಿರೋಧ ಕಟ್ಟಿಕೊಂಡಿದ್ದಾರೆ. ಅವರು ಚುನಾವಣೆಯಲ್ಲಿ ವಿರುದ್ಧವಾಗಿ ಕೆಲಸ ಮಾಡಿದರೆ ಸಿದ್ದರಾಮಯ್ಯ ಅವರು ಸೋಲು ಕಾಣಬಹುದು.
'ನನ್ನ ಗೆಲುವಿಗೆ ನಾನು ಜನರ ಕೈಗೆ ಸುಲಭವಾಗಿ ಸಿಗುವುದೇ ಸಹಕಾರಿಯಾಗಲಿದೆ. ಅದನ್ನು ಜನರು ಸಹ ಗೌರವಿಸುತ್ತಾರೆ. ಆದರೆ, ಸಿದ್ದರಾಮಯ್ಯ ಅವರದ್ದು ಸರ್ವಾಧಿಕಾರಿ ವ್ಯಕ್ತಿತ್ವ. ಅವರು ಜನರ ಬಳಿ ಹೋಗುವುದೇ ಇಲ್ಲ' ಎಂದು ಜಿ.ಟಿ.ದೇವೇಗೌಡರು ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ
ಈ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ. ಅಲ್ಲದೆ, ಒಕ್ಕಲಿಗರ ಪ್ರಾಬಲ್ಯವೂ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಜಿ.ಟಿ. ದೇವೇಗೌಡ, ಈ ಕ್ಷೇತ್ರದಲ್ಲಿನ ತಮ್ಮ ಬೆಂಬಲಿಗರಿಗೆ, ಪ್ರಮುಖರಿಗೆ ಉತ್ತಮ ಸ್ಥಾನ ಕೊಡಿಸಿಕೊಟ್ಟಿರುವುದರಿಂದ ಇಲ್ಲಿ ಗೆಲುವಿನ ಹಾದಿಯನ್ನು ಸುಲಭ ಮಾಡಿಕೊಂಡಿದ್ದಾರೆನ್ನಲಾಗಿದೆ.
ಕ್ಷೇತ್ರದಲ್ಲಿ 2.5 ಲಕ್ಷ ಮತದಾರರಿದ್ದು ಇದರಲ್ಲಿ 70,000 ಒಕ್ಕಲಿಗ ಮತಗಳಿವೆ. ದೇವೇಗೌಡರು ಒಕ್ಕಲಿಗರ ಕಣ್ಮಣಿಯಾಗಿ ಕ್ಷೇತ್ರದಲ್ಲಿ ಮೂಡಿ ಬಂದಿರುವುದು ಸಿಎಂ ಗೆಲುವಿಗೆ ತೊಡರುಗಾಲು ಆಗಬಹುದು ಎನ್ನಲಾಗಿದೆ.

2013ರ ಫಲಿತಾಂಶ
ಈ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ. ಅಲ್ಲದೆ, ಒಕ್ಕಲಿಗರ ಪ್ರಾಬಲ್ಯವೂ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಜಿ.ಟಿ. ದೇವೇಗೌಡ, ಈ ಕ್ಷೇತ್ರದಲ್ಲಿನ ತಮ್ಮ ಬೆಂಬಲಿಗರಿಗೆ, ಪ್ರಮುಖರಿಗೆ ಉತ್ತಮ ಸ್ಥಾನ ಕೊಡಿಸಿಕೊಟ್ಟಿರುವುದರಿಂದ ಇಲ್ಲಿ ಗೆಲುವಿನ ಹಾದಿಯನ್ನು ಸುಲಭ ಮಾಡಿಕೊಂಡಿದ್ದಾರೆನ್ನಲಾಗಿದೆ.
ಕ್ಷೇತ್ರದಲ್ಲಿ 2.5 ಲಕ್ಷ ಮತದಾರರಿದ್ದು ಇದರಲ್ಲಿ 70,000 ಒಕ್ಕಲಿಗ ಮತಗಳಿವೆ. ದೇವೇಗೌಡರು ಒಕ್ಕಲಿಗರ ಕಣ್ಮಣಿಯಾಗಿ ಕ್ಷೇತ್ರದಲ್ಲಿ ಮೂಡಿ ಬಂದಿರುವುದು ಸಿಎಂ ಗೆಲುವಿಗೆ ತೊಡರುಗಾಲು ಆಗಬಹುದು ಎನ್ನಲಾಗಿದೆ.
ಒಟ್ಟು 18 ಮಂದಿ ನಾಮಪತ್ರ ಸಲ್ಲಿಸಿದ್ದರು. 6 ಮಂದಿ ಹಿಂಪಡೆದರು. 12 ಮಂದಿ ಸ್ಪರ್ಧಿಸಿದ್ದರು. 10 ಮಂದಿ ಠೇವಣಿ ಕಳೆದುಕೊಂಡರು.
ಶೇ 74.23ರಷ್ಟು ಮತದಾನವಾಗಿತ್ತು. 176962 ಮತಗಳ ಪೈಕಿ ಜೆಡಿಎಸ್ ನ ಜಿ.ಟಿ ದೇವೇಗೌಡ ಅವರು 75,864 ಮತಗಳನ್ನು ಪಡೆದರೆ, ಕಾಂಗ್ರೆಸ್ಸಿನ ಎಂ ಸತ್ಯನಾರಾಯಣ ಅವರು 68761 ಮತಗಳನ್ನು ಗಳಿಸಿದರು. . 7103 ಮತಗಳ (ಶೇ 4.01) ಅಂತರದಿಂದ ಜಿ.ಟಿ ದೇವೇಗೌಡ ಜಯ ಸಾಧಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications