ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ವಿರುದ್ಧ ಯಾರಿಗೆ ಜಯ?
2008ರಲ್ಲಿ ದಾವಣಗೆರೆ ಕ್ಷೇತ್ರ ಪುನರ್ ವಿಂಗಡನೆಯಾದ ಬಳಿಕ ಅಸ್ತಿತ್ವಕ್ಕೆ ಬಂದ ಕ್ಷೇತ್ರ ದಾವಣಗೆರೆ ದಕ್ಷಿಣ. ಹಿರಿಯ ಕಾಂಗ್ರೆಸ್ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಕ್ಷೇತ್ರದ ಹಾಲಿ ಶಾಸಕರು.
2008, 2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಅವರು ಜಯಗಳಿಸಿದ್ದಾರೆ. 2018ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಬಹುದು ಎಂಬ ಸುದ್ದಿಗಳು ಹರಿದಾಡುತ್ತಿವೆ. ಹಾಗಾದರೆ ಅಭ್ಯರ್ಥಿ ಯಾರು? ಎಂಬುದು ಸದ್ಯದ ಪ್ರಶ್ನೆ.
ಶಾಮನೂರು ಶಿವಶಂಕರಪ್ಪ ಅಥವ ಅವರ ಕುಟುಂಬ ಸದಸ್ಯರಿಗೆ ಪಕ್ಷ ಟಿಕೆಟ್ ನೀಡಲೇಬೇಕು. ಇಲ್ಲವಾದಲ್ಲಿ ಜಿಲ್ಲೆ ಮತ್ತು ರಾಜ್ಯದಲ್ಲಿ ವೀರಶೈವ ಸಮುದಾಯದ ಮತಗಳು ಹಂಚಿಕೆಯಾಗುವ ಭಯ ಪಕ್ಷಕ್ಕಿದೆ. ಕೆಲವು ದಿನಗಳ ಹಿಂದೆ ದಾವಣಗೆರೆಗೆ ಬಂದಿದ್ದ ಸಿದ್ದರಾಮಯ್ಯ ಶಾಮನೂರು ಅವರ ನಿವಾಸದಲ್ಲಿಯೇ ವಾಸ್ತವ್ಯ ಹೂಡಿದ್ದರು.

2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ, ಕಾಂಗ್ರೆಸ್ ಪಡೆದ ಶೇಕಡಾವಾರು ಮತಗಳ ಸಂಖ್ಯೆಯೂ ಹೆಚ್ಚಿತ್ತು. ಅಷ್ಟರ ಮಟ್ಟಿಗೆ ಶಾಮನೂರು ಶಿವಶಂಕರಪ್ಪ ಅವರು ಕ್ಷೇತ್ರದಲ್ಲಿ ತಮ್ಮ ಪ್ರಭಾವ ಹೊಂದಿದ್ದಾರೆ.
ಒಂದು ವೇಳೆ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೈ ತಪ್ಪಿದರೆ ಡಾ.ಎಸ್.ಎಸ್.ಮಲ್ಲಿಕಾರ್ಜುನ ಅವರ ಪತ್ನಿ ಡಾ.ಪ್ರಭಾ ಅವರಿಗೆ ಟಕೆಟ್ ದೊರೆಯುವ ಸಾಧ್ಯತೆ ಇದೆ. ಸಭೆ, ಧಾರ್ಮಿಕ ಕಾರ್ಯಕ್ರಮಗಳು, ಆರೋಗ್ಯ ಶಿಬಿರದಲ್ಲಿ ಪಾಲ್ಗೊಳ್ಳುವ ಪ್ರಭಾ ಅವರು ಕ್ಷೇತ್ರದ ಜನರಿಗೆ ಚಿರಪರಿಚಿತರು.
ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೈಯದ್ ಸೈಫುಲ್ಲಾ ಅವರನ್ನು 40 ಸಾವಿರ ಮತಗಳ ಅಂತರದಿಂದ ಶಾಮನೂರು ಶಿವಶಂಕರಪ್ಪ ಸೋಲಿಸಿದ್ದರು. ಕಳೆದ ಬಾರಿ ಬಿಜೆಪಿಯಿಂದ ವಿ.ಲೋಕೇಶ್ ಸ್ಪರ್ಧಿಸಿದ್ದರು. ಈ ಬಾರಿ ಯಾರು ಸ್ಪರ್ಧಿಸುತ್ತಾರೆ? ಎಂಬುದನ್ನು ಕಾದು ನೋಡಬೇಕು.
2013ರ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ 66,320ಮತಗಳನ್ನು ಪಡೆದಿದ್ದರು. ಜೆಡಿಎಸ್‌ನ ಸೈಯದ್ ಸೈಫುಲ್ಲಾ 26,162, ಬಿಜೆಪಿಯ ಬಿ.ಲೋಕೇಶ್ 21,282 ಮತಗಳನ್ನು ಪಡೆದಿದ್ದರು.












Click it and Unblock the Notifications