ಧಾರವಾಡ ಕ್ಷೇತ್ರ: ಗೆಲುವಿನ ಪೇಡಾ ಸವಿಯುವವರ್ಯಾರು?
ಧಾರವಾಡ ಕರ್ನಾಟಕದ ವಾಣಿಜ್ಯ ನಗರಿ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ! ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಲವು ಕಾರಣಗಳಿಂದಾಗಿ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದಿದೆ. ಬೆಂಗಳೂರಿನ ನಂತರ ಅತ್ಯಂತ ದೊಡ್ಡ ನಗರ ಪಾಲಿಕೆಯನ್ನು ಹೊಂದಿರುವ ನಗರವೆಂದರೆ ಧಾರವಾಡ.
ಜ್ಞಾನಪೀಠ ಪ್ರಶಸ್ತಿ ವಿಜೇತ ವರಕವಿ ದ.ರಾ.ಬೇಂದ್ರೆ ಅವರ ನೆಲವಾದ ಧಾರವಾಡ ಕನ್ನಡ ನಾಡಿನ ಸಾಹಿತ್ಯ, ಸಂಗೀತ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರ.ಗಂಗೂಬಾಯಿ ಹಾನಗಲ್, ಬೆಟಗೇರಿ ಕೃಷ್ಣಶರ್ಮ, ಎಂ.ಎಂ.ಕಲಬುರ್ಗಿ, ಕೀರ್ತಿನಾಥ ಕುರ್ತಕೋಟಿ, ವಿ.ಕೃ.ಗೋಕಾಕ, ಗಿರೀಶ ಕಾರ್ನಾಡ ಸೇರಿದಂತೆ ಹಲವು ಮಹನೀಯರ ನೆಲೆ ಧಾರವಾಡ.
ಹಲವು ಉದ್ಯಮಗಳನ್ನು ಕಂಡ ಧಾರವಾಡ ನಗರದಲ್ಲಿ ಕನ್ನಡವೇ ಬಹುಮುಖ್ಯಭಾಷೆ. ಉತ್ತರ ಕರ್ನಾಟಕ ಶೈಲಿಯ ಇಲ್ಲಿನ ಕನ್ನಡ, ಕರ್ನಾಟಕದ ಜಾನಪದ ಸೊಗಡಿಗೆ ಕಳೆ ನೀಡಿದೆ.

ಇಲ್ಲಿನ ರಾಜಕೀಯದ ಬಗ್ಗೆ ಹೇಳುವುದಾದರೆ ಈ ಕ್ಷೇತ್ರವನ್ನು ಸದ್ಯಕ್ಕೆ ಕಾಂಗ್ರೆಸ್ ನ ವಿನಯ್ ಕುಲಕರ್ಣಿ ಪ್ರತಿನಿಧಿಸುತ್ತಿದ್ದಾರೆ. ಪ್ರಸ್ತುತ ಕರ್ನಾಟಕ ಸರ್ಕಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವರೂ ಆಗಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ನ ಅಮೃತ ದೇಸಾಯಿ ಅವರನ್ನು ಸೋಲಿಸಿದ್ದರು. ಆಗ ಕೆಜೆಪಿ ಅಸ್ತಿತ್ವದಲ್ಲಿದ್ದಿದ್ದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಲಾಭ ಪಡೆದಿತ್ತು. ಆದರೆ ಈ ಬಾರಿ ಆ ಪರಿಸ್ಥಿತಿ ಇಲ್ಲ.
ಈಗಾಗಲೇ ತಮ್ಮ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಡೆದಿದ್ದಲ್ಲದೆ, ಮಂತ್ರಿಯೂ ಆಗಿರುವ ಕಾರಣಕ್ಕೆ ಮತದಾರ ಪ್ರಭು ಅವರ ಮೇಲೆ ಕೃಪೆ ತೋರಬಹುದು. 2013 ರ ಚುನಾವಣೆಯಲ್ಲಿ ವಿನಯ ಕುಲಕರ್ಣಿ 53453 ಮತ ಗಳಿಸಿದ್ದರೆ, ಜೆಡಿಎಸ್ ನ ಅಮೃತ ದೇಸಾಯಿ 35133 ಮತ ಪಡೆದಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications