ಕ್ಷೇತ್ರ ಪರಿಚಯ : ಗೋಕಾಕ್‌ನಲ್ಲಿ ಯಾರಿಗೆ ಗೆಲುವಿನ ಕರದಂಟು?

Posted By: Lekhaka
Subscribe to Oneindia Kannada

ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ ಗೋಕಾಕ್. ಬೆಳಗಾವಿ ನಗರವನ್ನು ಹೊರತುಪಡಿಸಿದರೆ ಅತ್ಯಂತ ಹೆಚ್ಚು ಜನನಿಬಿಡ ಮತ್ತು ದೊಡ್ಡ ನಗರ ಗೋಕಾಕ್. ಗೋಕಾಕ್ ಜಲಪಾತ ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ.

ಗೋಕಾಕ್ ವಾಣಿಜ್ಯ ವ್ಯವಹಾರಗಳಿಗೆ ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇದ್ದು ಬೆಲ್ಲ, ಗೋವಿನಜೋಳ, ಹತ್ತಿ ವ್ಯಾಪಾರ ಹೆಚ್ಚಾಗಿ ನಡೆಯುತ್ತದೆ. ಕೈಗಾರಿಕೆಗೂ ಕ್ಷೇತ್ರ ಪ್ರಸಿದ್ಧಿ ಪಡೆದಿದೆ. ಸಿಮೆಂಟ್, ಜವಳಿ ಮತ್ತು ಸಕ್ಕರೆ ಕಾರ್ಖನೆಗಳಿವೆ.

ಕ್ಷೇತ್ರ ಪರಿಚಯ : ಕಿತ್ತೂರಿನಲ್ಲಿ ಯಾರಿಗೆ ಒಲಿಯಲಿದೆ ಜಯ?

ರಾಜಕೀಯವಾಗಿ ಗೋಕಾಕ್ ಜಾರಕಿಹೊಳಿ ಕುಟುಂಬದ ಭದ್ರಕೋಟೆ. ಜಾರಕಿಹೊಳಿ ಕುಟುಂಬದಲ್ಲಿ ಮೂವರು ಶಾಸಕರು ಇದ್ದಾರೆ. ಇಬ್ಬರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಮತ್ತೊಬ್ಬರು ಬಿಜೆಪಿ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ.

Karnataka assembly election 2018 : Gokak constituency profile

ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ರಾಜಕಾರಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಕಳೆದ ನಾಲ್ಕು ಚುನಾವಣೆಗಳಿಂದಲೇ ಜಾರಕಿಹೊಳಿ ಕುಟುಂಬದವೇ ಇಲ್ಲಿ ಅಧಿಕಾರಕ್ಕೆ ಬರುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಅಶೋಕ ಪೂಜಾರಿ ಅವರು ಕಡಿಮೆ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

ಅಶೋಕ ಪೂಜಾರಿ ಅವರನ್ನು ಸೆಳೆಯಲು ಬಿಜೆಪಿ ಪ್ರಯತ್ನ ಪಡುತ್ತಿದೆ. ಕ್ಷೇತ್ರದಲ್ಲಿ ಬಹುಪಾಲು ಲಿಂಗಾಯತ ಮತಗಳು ಇರುವದರಿಂದ ಈ ಬಾರಿಯ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.

ರಾಮದುರ್ಗ ಕ್ಷೇತ್ರ ಪರಿಚಯ : ಗೊಡಚಿ ವೀರಭದ್ರೇಶ್ವರ ಕೃಪೆ ಯಾರಿಗೆ?

2013ರ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ 79,175 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಜೆಡಿಎಸ್‌ನ ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ ಅವರು 51,170 ಮತಗಳನ್ನು ಪಡೆದಿದ್ದರು. ಬಿಜೆಪಿಯ ವಾಸುದೇವ್ ಮಹದೇವಪ್ಪ ಅವರು 4,293 ಮತಗಳನ್ನು ಪಡೆದು 4ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು.

ಈ ಬಾರಿಯ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಖಚಿತವಾಗಿದೆ. ಅಶೋಕ ಪೂಜಾರಿ ಅವರು ಬಿಜೆಪಿ ಸೇರಲಿದ್ದಾರೆಯೇ? ಕಾದು ನೋಡಬೇಕು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Assembly Election 2018 : Read all about Gokak assembly constituency of Belagavi district. Get election news from Gokak. Know about candidates list, election results during Karnataka elections.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ