ಕ್ಷೇತ್ರ ಪರಿಚಯ : ದುರ್ಗಾದೇವಿಯ ಕೃಪೆಯಿಂದ ಯಾರಿಗೆ ಜಯ?
ಹಾವೇರಿ ಜಿಲ್ಲೆಯ ಕಟ್ಟಕಡೆಯ ಗ್ರಾಮ ಹಿರೇಕೆರೂರು. ಹಿಂದೆ ಬನವಾಸಿನಾಡಿಗೆ ಸೇರಿದ್ದ 'ಪಿರಿಯಕೆರೆಯೂರು 12 ಹಳ್ಳಿಗಳ ಆಡಳಿತದ ಕೇಂದ್ರ ವಾಗಿತ್ತು. ಈಗ ಅದು ಹಿರೇಕೆರೂರು ಆಗಿದೆ. ಇದೊಂದು ಪ್ರಮುಖ ವಾಣಿಜ್ಯ ಕೇಂದ್ರವೂ ಹೌದು.
ಕ್ಷೇತ್ರದ ಪ್ರಮುಖ ಆಕರ್ಷಣೆ ಹೆಗ್ಗೇರಿಕೆರೆ. ಕೆರೆಯ ಸಮೀಪ ದುರ್ಗಾ ದೇವಿಯ ದೇವಾಲಯವಿದೆ. ಮರಾಠರು ಆಳ್ವಿಕೆ ನಡೆಸುತ್ತಿದ್ದ ಸಮಯದಲ್ಲಿ ದೇವಿಗೆ ಆಭರಣಗಳನ್ನು ನೀಡಿದ್ದಾರೆ ಎನ್ನುತ್ತದೆ ಇತಿಹಾಸ.
ತರಕಾರಿ ಬೆಳೆಗಳಿಗೆ ಹಿರೇಕೆರೂರು ಪ್ರಸಿದ್ಧಿ ಪಡೆದಿದೆ. ವಿವಿಧ ತಳಿಯ ತರಕಾರಿ ಬೀಜಗಳು ಇಲ್ಲಿ ಸಿಗುತ್ತವೆ. ದುರ್ಗಾದೇವಿ ಕೆರೆಗೆ (ಹೆಗ್ಗೇರಿ ಕೆರೆ) ಕುಮದ್ವತಿ ನದಿಯಿಂದ ನೀರು ಹರಿಸುವ ಯೋಜನೆ, ತುಂಗಭದ್ರಾ ನದಿಯಿಂದ ಗುಡ್ಡದ ಮಾದಾಪುರ ಕೆರೆಗೆ ನೀರು ತುಂಬಿಸುವ ಯೋಜನೆಗೆ ಒಪ್ಪಿಗೆ ಸಿಕ್ಕಿದೆ.

ಕ್ಷೇತ್ರದ ವ್ಯಾಪ್ತಿಯಲ್ಲಿರುವ ರೆಟ್ಟೆಹಳ್ಳಿಯನ್ನು ಹೊಸ ತಾಲೂಕಾಗಿ ಘೋಷಣೆ ಮಾಡಲಾಗಿದೆ. ಲಿಂಗಾಯಿತ ಸಾದರು ಶಾಸಕರು ಯಾರಾಗಬೇಕು? ಎಂದು ನಿರ್ಧರಿಸುವ ಕ್ಷೇತ್ರವಿದರು.
ಮಾಜಿ ಪೊಲೀಸ್ ಅಧಿಕಾರಿಯ ಸ್ಪರ್ಧೆಯಿಂದ ಕ್ಷೇತ್ರ ಭಾರೀ ಸುದ್ದಿ ಮಾಡಿತ್ತು. 2004ರ ಚುನಾವಣೆಲ್ಲಿ ಪೊಲೀಸ್ ಉದ್ಯೋಗ ತೊರೆದು ಬಿ.ಸಿ.ಪಾಟೀಲ್ ಈ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು.
2008ರಲ್ಲಿ ಕಾಂಗ್ರೆಸ್ ಮೂಲಕ ಗೆದ್ದು ಬಂದಿದ್ದರು. ಆದರೆ, 2013ರ ಚುನಾವಣೆಯಲ್ಲಿ ಕೌರವ ಖ್ಯಾತಿಯ ಬಿ.ಸಿ.ಪಾಟೀಲ್ ಸೋಲು ಕಂಡಿದ್ದರು. ಕೆಜೆಪಿಯ ಯು.ಬಿ.ಬಣಕರ್ ಗೆಲುವು ಕಂಡಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಬಿ.ಸಿ.ಪಾಟೀಲ್ ಅವರು ಗೆಲ್ಲಲೇಬೇಕು ಎಂದು ಹಠ ತೊಟ್ಟಿದ್ದಾರೆ. ಕಾಂಗ್ರೆಸ್ ಟಿಕೆಟ್ ಅವರಿಗೆ ಸಿಗುವುದು ಖಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿ.ಸಿ.ಪಾಟೀಲ್ ಆಪ್ತರು ಹೌದು.
ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಪಾಲಾಕ್ಷ ಗೌಡ ಪಾಟೀಲ್ ಸ್ಪರ್ಧಿಸಿದ್ದರು. ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ. ಜೆಡಿಎಸ್ ಅಭ್ಯರ್ಥಿಯಾಗಿ ಕಳೆದ ಬಾರಿ ಸ್ಪರ್ಧಿಸಿದ್ದ ಧರ್ಮರಾಜ ಎಂ.ಸಾಲಿ 8ನೇ ಸ್ಥಾನಕ್ಕೆ ಕುಸಿದಿದ್ದರು.
2013ರ ಚುನಾವಣೆಯಲ್ಲಿ ಯು.ಬಿ.ಬಣಕಾರ್ 52,623, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಿ.ಎಸ್.ಪಾಟೀಲ್ 50,017, ಬಿಜೆಪಿಯಿಂದ ಸ್ಪರ್ಧಿಸಿದ್ದ ಪಾಲಾಕ್ಷ ಗೌಡ ಪಾಟೀಲ್ 3,177, ಜೆಡಿಎಸ್‌ನ ಧರ್ಮರಾಜ್ ಎಂ.ಸಾಲಿ 1885 ಮತಗಳನ್ನು ಪಡೆದಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications