ಕ್ಷೇತ್ರ ಪರಿಚಯ: ಕಲಬುರಗಿ ಉತ್ತರದಲ್ಲಿ ಕೈ-ಕಮಲ ಪೈಪೋಟಿ
ಕಲಬುರಗಿ ನಗರ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರವಿದು. ನಗರ ಪ್ರದೇಶಗಳನ್ನೇ ಇದು ಒಳಗೊಂಡಿದೆ.
ಖಮರುಲ್ ಇಸ್ಲಾಂ ಕಲಬುರಗಿ ಉತ್ತರ ಕ್ಷೇತ್ರದ ಶಾಸಕರಾಗಿದ್ದರು. ಸದ್ಯ ಅವರ ನಿಧನದಿಂದ ಕಲಬುರಗಿ ಉತ್ತರದಲ್ಲಿ ಶಾಸಕರಿಲ್ಲ.
1978ರಿಂದ ಕಲಬುರಗಿ (ಈಗಿನ ಕಲಬುರಗಿ ಉತ್ತರ ಕ್ಷೇತ್ರವಿರಲಿಲ್ಲ) ಯಲ್ಲಿ ಚುನಾವಣೆಗೆ ನಿಲ್ಲುತ್ತಾ ಬಂದಿದ್ದ ಖಮರುಲ್ ಇಸ್ಲಾಂ ಕ್ಷೇತ್ರದ ಮೇಲೆ ತಮ್ಮ ಪಾರಮ್ಯ ಮೆರೆಯುತ್ತಾ ಬಂದಿದ್ದರು.
1978ರಲ್ಲೇ ಆಗಿನ ಗುಲ್ಬರ್ಗಾ ಕ್ಷೇತ್ರದಲ್ಲಿ ಖಮರುಲ್ ಇಸ್ಲಾಂ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲುವು ಸಾಧಿಸಿದ್ದರು. ಮುಂದೆ 1983 ಮತ್ತು 1985ರಲ್ಲಿ ಜನತಾ ಪಕ್ಷದಿಂದ ಕಣಕ್ಕಿಳಿದಿದ್ದ ಎಸ್.ಕೆ ಕಾಂತಾ ವಿರುದ್ಧ ಸೋಲು ಕಂಡಿದ್ದರು. ನಂತರ 1989ರಲ್ಲಿ ಜನತಾದಳದಿಂದ ಕಣಕ್ಕಿಳಿದಿದ್ದ ಎಸ್.ಕೆ ಕಾಂತಾರನ್ನು ಖಮರುಲ್ ಇಸ್ಲಾಂ ಸೋಲಿಸಿ ಮತ್ತೆ ವಿಧಾನಸಭೆ ಪ್ರವೇಶಿಸಿದ್ದರು. ಈ ಬಾರಿ ಅವರು ಮುಸ್ಲಿಂ ಲೀಗ್ ನಿಂದ ಕಣಕ್ಕಿಳಿದಿದ್ದರು.

ಮುಂದೆ 1994ರಲ್ಲಿ ಇಂಡಿಯನ್ ನ್ಯಾಷನಲ್ ಲೀಗ್, 1999ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಖಮರುಲ್ ಶಾಸಕರಾದರು. ಆದರೆ ಆ ವೇಳೆಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬೇರುಗಳನ್ನು ಇಳಿ ಬಿಟ್ಟಿತ್ತು. ಹೀಗಾಗಿ 2004ರಲ್ಲಿ ಬಿಜೆಪಿಯ ಚಂದ್ರಶೇಖರ್ ಪಾಟೀಲ್ ರೇವೂರ ಎದುರು ಸೋಲು ಕಂಡರು.
2008ರಲ್ಲಿ ಕ್ಷೇತ್ರ ಮರು ವಿಂಗಡಣೆಯಾದ ನಂತರ ಕಲಬುರಗಿ ಉತ್ತರ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಈ ವೇಳೆ ಮತ್ತೆ ಖಮರುಲ್ ಇಸ್ಲಾಂಗೆ ಮತ್ತೆ ವಿಧಾನಸಭೆ ಪ್ರವೇಶಿಸುವ ಭಾಗ್ಯ ಒಲಿದು ಬಂತು. 2013ರಲ್ಲೂ ಖಮರುಲ್ ಇಸ್ಲಾಂ ಮತ್ತೆ ಜಯಶಾಲಿಯಾಗುವುದರೊಂದಿಗೆ ಆರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಈ ಬಾರಿ ಅವರು ಕೆಜೆಪಿ ಅಭ್ಯರ್ಥಿಯನ್ನು 20 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು.
ಒಮ್ಮೆ ಲೋಕಸಭೆಗೂ ಪ್ರವೇಶಿಸಿರುವ ಅನುಭವಿ ರಾಜಕಾರಣಿ, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 2016ರಲ್ಲಿಅವರನ್ನು ಸಂಪುಟದಿಂದ ಕೈ ಬಿಡಲಾಯಿತು. ಹಿರಿಯ ಖಮರುಲ್ ಇಸ್ಲಾಂ ನಿಧನದಿಂದ ಕಲಬುರಗಿಯಲ್ಲಿ ಕಾಂಗ್ರೆಸ್ ತನ್ನ ನಾಯಕನನ್ನು ಕಳೆದುಕೊಂಡಿದೆ. ಹೀಗಾಗಿ ಯಾರನ್ನು ಈ ಬಾರಿ ಕಣಕ್ಕಿಳಿಸಲಿದೆ ಎಂಬುದು ಕುತೂಹಲ ಹುಟ್ಟಿಸಿದೆ.
ಇಲ್ಲಿ ವರ್ಷದಿಂದ ವರ್ಷಕ್ಕೆ ಬಿಜೆಪಿ ತನ್ನ ಮತಗಳಿಕೆ ಹೆಚ್ಚಿಸುತ್ತಾ ಬಂದಿರುವುದನ್ನು ಕಾಣಬಹುದು. ಕ್ಷೇತ್ರದಲ್ಲಿ ಜೆಡಿಎಸ್ ಗೆ ನೆಲೆ ಇಲ್ಲ. ಹಾಗಾಗಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಇಲ್ಲಿ ಮುಸ್ಲಿಂ ಮತದಾರರು ಹೆಚ್ಚಿದ್ದು, ಅವರ ಮತಗಳೇ ನಿರ್ಣಾಯಕವಾಗಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications