ಕ್ಷೇತ್ರ ಪರಿಚಯ : ಲಿಂಗಸಗೂರು ಕ್ಷೇತ್ರದಲ್ಲಿ ಯಾರಿಗೆ ಜಯ?
ರಾಯಚೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರ ಲಿಂಗಸಗೂರು. ಹಲವಾರು ದೇವಾಲಯಗಳು, ಬೆಟ್ಟ ಕ್ಷೇತ್ರದ ಪ್ರಮುಖ ಆಕರ್ಷಣೆ. ಮುದಗಲ್ ನಲ್ಲಿರುವ ಪುರಾತನ ಕೋಟೆ ಪ್ರಸಿದ್ಧಿ ಪಡೆದಿದೆ.
ಲಿಂಗಸಗೂರಿನಿಂದ ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್‌ಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ ಇದೆ. ಹೈದರಾಬಾದ್ ವಿಮಾನ ನಿಲ್ದಾಣ ಕ್ಷೇತ್ರಕ್ಕೆ ತುಂಬಾ ಹತ್ತಿರವಾಗಿದೆ. ಪಟ್ಟಣ್ಣದಿಂದ ವಿವಿಧ ಗ್ರಾಮಗಳಿಗೆ ಹಲವು ಕೆಎಸ್ಆರ್‌ಟಿಸಿ ಬಸ್ಸುಗಳು ಸಂಚಾರ ನಡೆಸುತ್ತವೆ.
ಪಟ್ಟಣ್ಣದ ಹೊರವಲಯದಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ಹರಿಯುತ್ತದೆ. ಕೆರೆಗಳಿಗೆ ನೀರನ್ನು ಹರಿಸಿ ಕುಡಿಯುವ ನೀರು ಒದಗಿಸಲಾಗುತ್ತದೆ. ಕ್ಷೇತ್ರದ ವ್ಯಾಪ್ತಿಯ ಹಲವು ಗ್ರಾಮಗಳ ಜನರು ಕುಡಿಯುವ ನೀರಿಗಾಗಿ ಪರದಾಡುವುದು ತಪ್ಪಿಲ್ಲ.

ವಿಶ್ವಸಂಸ್ಥೆಯ ವರದಿ ಪ್ರಕಾರ ದಕ್ಷಿಣ ಭಾರತದಲ್ಲಿ ಅಂತರ್ ಜಲದಲ್ಲಿ ಆರ್ಸೆನಿಕ್ ಕಂಡುಬಂದಿರುವುದು ರಾಯಚೂರು ಜಿಲ್ಲೆಯಲ್ಲಿ. ಅದರಲ್ಲಿ ಹಲವು ಗ್ರಾಮಗಳು ಲಿಂಗಸಗೂರು ಕ್ಷೇತ್ರಕ್ಕೆ ಸೇರಿವೆ.
ರಾಜಕೀಯವಾಗಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಏಕೈಕ ಕ್ಷೇತ್ರ ಲಿಂಗಸಗೂರು. ಜೆಡಿಎಸ್ ವಶದಲ್ಲಿದೆ ಕ್ಷೇತ್ರ, ಬೋವಿ ಸಮುದಾಯದ ಮಾನಪ್ಪ ವಜ್ಜಲ್ ಶಾಸಕರಾಗಿದ್ದರು. ಕೆಲವು ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ.
2008ರಲ್ಲಿ ಬಿಜೆಪಿ ಗೆದ್ದಿದ್ದ ಕ್ಷೇತ್ರವನ್ನು ಜೆಡಿಎಸ್ ಕೈವಶ ಮಾಡಿಕೊಳ್ಳಲು ಕಾರಣ ಬಿಜೆಪಿ-ಕೆಜೆಪಿ ನಡುವಿನ ಮತ ಹಂಚಿಕೆ. ವಜ್ಜಲ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಟಿಕೆಟ್‌ಗಾಗಿ ಎ.ವಸಂತ ಕುಮಾರ್ ಪ್ರಯತ್ನ ನಡೆಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಪ್ತರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂಎಲ್‌ಸಿ ಎನ್.ಎಸ್.ಬೋಸರಾಜು ಅವರು ವಸಂತ ಕುಮಾರ್ ಅವರಿಗೆ ಟಿಕೆಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಭಾವಿ ನಾಯಕ ಎಂದು ಹೆಸರುಗಳಿಸಿರುವ ಬಿ.ಎಫ್.ಹೂಲಿಗೇರಿ ಅವರ ಹೆಸರು ಟಿಕೆಟ್‌ಗೆ ಕೇಳಿಬರುತ್ತಿದೆ.
ಬಿಜೆಪಿಯಲ್ಲಿ ಕುಳಸಿದ್ದು ಬಂಡಿ ಅವರ ಹೆಸರು ಕೇಳಿಬರುತ್ತಿದೆ. ಆದರೆ, ಗೋವಿಂದ ಕಾರಜೋಳ ಅವರ ಪುತ್ರ ರವಿ ಕಾರಜೋಳರಿಗೆ ಟಿಕೆಟ್ ಕೊಡಿಸುವ ಪ್ರಯತ್ನವೂ ನಡೆದಿದೆ. ಕ್ಷೇತ್ರವನ್ನು ಉಳಿಸಿಕೊಳ್ಳಲು, ವಜ್ಜಲ್‌ಗೆ ಪಾಠ ಕಲಿಸಲು ಜೆಡಿಎಸ್ ಯಾರಿಗೆ ಟಿಕೆಟ್ ನೀಡಲಿದೆ? ಎಂಬುದು ಕುತೂಹಲದ ಪ್ರಶ್ನೆ.
2013ರ ಚುನಾವಣೆಯಲ್ಲಿ ಮಾನಪ್ಪ ವಜ್ಜಲ್ 31,737, ಕಾಂಗ್ರೆಸ್‌ನ ಡಿ.ಎಸ್.ಹೂಲಗೇರಿ 30,451, ಬಿಜೆಪಿಯ ಟಿ.ಆರ್.ನಾಯಕ್ 13,545 ಮತಗಳನ್ನು ಪಡೆದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications