ಕ್ಷೇತ್ರ ಪರಿಚಯ : ಬೆಂಗಳೂರಿನ ಹೆಬ್ಬಾಗಿಲಿನಲ್ಲಿ ಯಾರಿಗೆ ಜಯ?
ಎರಡು ರಾಷ್ಟ್ರೀಯ ಹೆದ್ದಾರಿಗಳನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ನೆಲಮಂಗಲ. ಕರ್ನಾಟಕದ ರಾಜಧಾನಿ ಬೆಂಗಳೂರಿನ ಹೆಬ್ಬಾಗಿಲು ಎಂದು ನೆಲಮಂಗಲವನ್ನು ಕರೆಯಲಾಗುತ್ತದೆ.
ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯನ್ನು ಒಡಲಿಲ್ಲಿ ಹೊಂದಿದೆ ನೆಲಮಂಗಲ. ರಾಷ್ಟ್ರೀಯ ಹೆದ್ದಾರಿ ಇರುವ ಕಾರಣಕ್ಕೆ ರಸ್ತೆ ಅಕ್ಕ-ಪಕ್ಕದ ಭೂಮಿಗೆ ಬಂಗಾರದ ಬೆಲೆ ಇದೆ. ಹಲವಾರು ಕೆರೆಗಳನ್ನು ಕ್ಷೇತ್ರ ಹೊಂದಿದೆ. ಕೆರೆಗೆ ನೀರನ್ನು ಆರಸಿ ಬರುವ ಆನೆಗಳು ರೈತರ ಬೆಳೆಗೆ ಸಂಕಷ್ಟ ತರುತ್ತವೆ.
ಕಿರ್ಲೋಸ್ಕರ್, ಜಿಂದಾಲ್ ಸೇರಿದಂತೆ ವಿವಿಧ ಕಂಪನಿ, 30ಕ್ಕೂ ಹೆಚ್ಚು ಬ್ಯಾಂಕುಗಳು, ಎರಡು ಕೈಗಾರಿಕಾ ಪ್ರದೇಶಗಳು, ನೀರು ಕಲುಷಿತಗೊಂಡಿರುವ ಬೃಹತ್ ಕೆರೆ ಕ್ಷೇತ್ರದ ವ್ಯಾಪ್ತಿಯಲ್ಲಿದೆ.

ವಿಶ್ವಶಾಂತಿ ಆಶ್ರಮ, ಮಹಾಲಿಂಗೇಶ್ವರ ದೇವಾಲಯ, ಶಿವಗಂಗೆ ಬೆಟ್ಟ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ಕ್ಷೇತ್ರ ಒಳಗೊಂಡಿದೆ. ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವುದರಿಂದ ವಾರಾಂತ್ಯದಲ್ಲಿ ಪ್ರವಾಸಿ ತಾಣಗಳಲ್ಲಿ ಜನರು ಹೆಚ್ಚಿರುತ್ತಾರೆ.
ರಾಜಕೀಯವಾಗಿ ಕ್ಷೇತ್ರ ಜೆಡಿಎಸ್ ವಶದಲ್ಲಿದೆ. ಶಾಸಕ ಡಾ.ಶ್ರೀನಿವಾಸಮೂರ್ತಿ ಕ್ಷೇತ್ರದ ಶಾಸಕರು. ಈ ಕ್ಷೇತ್ರದಲ್ಲಿ ಒಂದು ಬಾರಿ ಮಾತ್ರ ಬಿಜೆಪಿ ಗೆದ್ದಿರುವುದು ಅಚ್ಚರಿಯ ಸಂಗತಿ. ಬಿಜೆಪಿ ಕ್ಷೇತ್ರದಲ್ಲಿ ಯಶಸ್ವಿಯಾಗಲು ಪ್ರಯತ್ನ ಪಡುತ್ತಲೇ ಇದೆ.
ಬಿಜೆಪಿಯ ಎಂ.ವಿ.ನಾಗರಾಜು ಒಮ್ಮೆ ಕ್ಷೇತ್ರದಲ್ಲಿ ಗೆದಿದ್ದರು. ಉಳಿದಂತೆ ಕಾಂಗ್ರೆಸ್-ಜೆಡಿಎಸ್ ಗೆಲುವು ಸಾಧಿಸುತ್ತಿವೆ. ಡಾ.ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿಯೂ ಜೆಡಿಎಸ್ ಟಿಕೆಟ್ ಖಚಿತ. ಕಾಂಗ್ರೆಸ್‌ನ ಅಂಜನಮೂರ್ತಿ ಕಳೆದ ಚುನಾವಣೆಯಲ್ಲಿ 15 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು.
ಡಾ.ಶ್ರೀನಿವಾಸಮೂರ್ತಿ ಜನರ ಕೈಗೆ ಸುಲಭವಾಗಿ ಸಿಗುತ್ತಾರೆ. ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಕಾಂಗ್ರೆಸ್ ಮತ್ತೆ ಅಂಜನಮೂರ್ತಿ ಅವರಿಗೆ ಟಿಕೆಟ್ ಕೊಡಲಿದೆ. ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.
2013ರ ಚುನಾವಣೆಯಲ್ಲಿ ಡಾ.ಕೆ.ಶ್ರೀನಿವಾಸಮೂರ್ತಿ ಅವರು 60,492 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನ ಅಂಜನಮೂರ್ತಿ ಅವರು 45,389 ಮತ, ಎಂ.ವಿ.ನಾಗರಾಜು ಅವರು 19,368 ಮತಗಳನ್ನು ಪಡೆದಿದ್ದರು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications