ಕ್ಷೇತ್ರ ಪರಿಚಯ : ಬಿಸಿಲನಾಡು ರಾಯಚೂರಲ್ಲಿ ಗೆಲ್ಲುವವರು ಯಾರು?
ಹೈದರಾಬಾದ್-ಕರ್ನಾಟಕ ಭಾಗದ ಪ್ರಮುಖ ಜಿಲ್ಲೆ ರಾಯಚೂರು. ನಾಡಿಗೆ ಬೆಳಕನ್ನು ನೀಡುವ ಉಷ್ಣ ವಿದ್ಯುತ್ ಸ್ಥಾವರವನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ರಾಯಚೂರು ನಗರ. ಉಷ್ಣ ವಿದ್ಯುತ್ ಸ್ಥಾವರದ ಜೊತೆ ಬಿಸಿಲಿನ ಶಾಖವೂ ರಾಯಚೂರಿನಲ್ಲಿ ಹೆಚ್ಚು.
ರಾಯಚೂರು ನಗರ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆ ಇನ್ನೂ ಉತ್ತಮವಾಗಬೇಕು. ಐಐಟಿ ಕೇಂದ್ರವನ್ನು ಪಡೆಯುವ ಜಿಲ್ಲೆಗಳ ಸಾಲಿನಲ್ಲಿ ರಾಯಚೂರು ಇತ್ತು. ಕೊನೆ ಕ್ಷಣದಲ್ಲಿ ಐಐಟಿ ಧಾರವಾಡದ ಪಾಲಾಯಿತು.
ರಾಯಚೂರು ನಗರ ಕ್ಷೇತ್ರದ ಶಾಸಕರು ಜೆಡಿಎಸ್‌ನ ಶಿವರಾಜ ಪಾಟೀಲ. 2018ರ ಜನವರಿಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜಾಫರ್ ಷರೀಫ್ ಅವರ ಅಳಿಯ ಸೈಯದ್ ಯಾಸಿನ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.

ಬಿಜೆಪಿಯಲ್ಲಿದ್ದು ಒಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದ ಎ.ಪಾಪರೆಡ್ಡಿ ಅವರು ಕಾಂಗ್ರೆಸ್ ಸೇರಿದ್ದರು. ಈಗ ಅವರು ಬಿಜೆಪಿಗೆ ಮರಳಿದ್ದಾರೆ. ಮುಸ್ಲಿಂ, ಕಮ್ಮ, ಲಿಂಗಾಯತ ಸಮುದಾಯದ ಮತಗಳು ಕ್ಷೇತ್ರದಲ್ಲಿ ನಿರ್ಣಾಯಕವಾಗಿವೆ.
ಕಳೆದ ಬಾರಿ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ, ಪ್ರಬಲವಿಲ್ಲದ ಬಿಜೆಪಿ ಅಭ್ಯರ್ಥಿಯಿಂದಾಗಿ ಶಿವರಾಜ ಪಾಟೀಲ್ ಗೆಲುವು ಕಂಡಿದ್ದರು. ಆದರೆ, ಈ ಬಾರಿ ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದು, ಗೆಲುವು ಅಷ್ಟು ಸುಲಭವಿಲ್ಲ.
2013ರ ಚುನಾವಣೆಯಲ್ಲಿ ಡಾ.ಶಿವರಾಜ್ ಪಾಟೀಲ್ 45,263 ಮತ, ಕಾಂಗ್ರೆಸ್‌ನ ಸೈಯದ್ ಯಾಸೀನ್ 37,392 ಮತ, ಬಿಜೆಪಿಯ ತ್ರಿವಿಕ್ರಮ ಜೋಷಿ 6,186 ಮತಗಳನ್ನು ಪಡೆದಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications