ಕ್ಷೇತ್ರ ಪರಿಚಯ : ಸಾಗರದಲ್ಲಿ ಬಿಜೆಪಿ, ಕಾಂಗ್ರೆಸ್ ಮುಖಾಮುಖಿ ಕದನ
ಲಿಂಗನಮಕ್ಕಿ ಜಲಾಶಯವನ್ನು ತನ್ನ ಒಡಲಿಲ್ಲಿ ಇಟ್ಟುಕೊಂಡು ನಾಡಿಗೆ ಬೆಳಕು ನೀಡುತ್ತಿರುವ ಕ್ಷೇತ್ರ ಸಾಗರ. ಶರಾವತಿ ನದಿ ನೀರಿನಲ್ಲಿ ಮನೆ-ತೋಟ ಮುಳುಗಿದ ಮೇಲೆ ಹಲವರು ಊರನ್ನು ತೊರೆದಿದ್ದಾರೆ. ಆದರೆ, ನಮ್ಮದು ಸಾಗರ ಎಂದು ನೆನೆಪು ಮಾಡಿಕೊಳ್ಳುತ್ತಾರೆ.
ಬೆಂಗಳೂರು, ಮೈಸೂರಿನಿಂದ ಸಾಗರದ ತಾಳಗುಪ್ಪ ತನಕ ರೈಲು ಬರುತ್ತದೆ. ಇದನ್ನು ಪಕ್ಕದ ಉತ್ತರ ಕನ್ನಡದ ತನಕ ವಿಸ್ತರಣೆ ಮಾಡಿ ಎಂಬುದು ಪಕ್ಕದ ಜಿಲ್ಲೆಯವರ ಬೇಡಿಕೆ. ಸಿಂಗದೂರು ದೇವಾಲಯಕ್ಕೆ ಹೋಗಲು ಸೇತುವೆ ಬೇಕು ಎಂಬ ಕೂಗಿಗೆ ಈಗ ಬೆಲೆ ಸಿಕ್ಕಿದೆ.
ವಿಶ್ವವಿಖ್ಯಾತ ಜೋಗ ಜಲಪಾತ, ನಾಡಿಗೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯವನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ಸಾಗರ. ಸಿಗಂಧೂರು ದೇವಸ್ಥಾನ, ವರದಹಳ್ಳಿಯ ಶ್ರೀಧರಾಶ್ರಮ ಸೇರಿದಂತೆ ವಿವಿಧ ಪ್ರವಾಸಿ ಸ್ಥಳಗಳನ್ನು ನೋಡಲು ಸಾವಿರಾರು ಪ್ರವಾಸಿಗರು ಕ್ಷೇತ್ರಕ್ಕೆ ಆಗಮಿಸುತ್ತಾರೆ.
ಕಾಗೋಡು ಚಳವಳಿ ಮೂಲಕ ರಾಷ್ಟ್ರದ ಗಮನ ಸೆಳೆದ ಕ್ಷೇತ್ರ ಸಾಗರ. ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಕ್ಷೇತ್ರದ ಶಾಸಕರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಅವರು ಕಂದಾಯ ಸಚಿವರು.
1972 ರಿಂದಲೂ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರು ಸೋಲು-ಗೆಲುವನ್ನು ಕಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕೆಜೆಪಿಯ ಬಿ.ಎಸ್.ಜಯಂತ್ ವಿರುದ್ಧ ಜಯಗಳಿಸಿದ್ದಾರೆ. ಈ ಬಾರಿ ವಯಸ್ಸಿನ ಕಾರಣದಿಂದ ಅವರಿಗೆ ಟಿಕೆಟ್ ಕೈ ತಪ್ಪಿದೆಯೇ?.
ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಕ್ಷೇತ್ರದಲ್ಲಿ ಭಾರೀ ಹಿನ್ನಡೆ ಉಂಟಾಗಿತ್ತು. ಪಕ್ಷದ ಅಭ್ಯರ್ಥಿ 4ನೇ ಸ್ಥಾನ ಪಡೆದಿದ್ದರು. ಹಿಂದೆ ಬಿಜೆಪಿಯಲ್ಲಿದ್ದ ಬೇಳೂರು ಗೋಪಾಲಕೃಷ್ಣ ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ ಸೋಲು ಕಂಡಿದ್ದರು.
ಬಿಜೆಪಿ ಈ ಬಾರಿ ಹರತಾಳು ಹಾಲಪ್ಪ ಯಾರಿಗೆ ಟಿಕೆಟ್ ನೀಡಲಿದೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಕಾಗೋಡು ತಿಮ್ಮಪ್ಪ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪುತ್ರಿಯನ್ನು ಕಣಕ್ಕಿಳಿಸಬಹುದು ಎಂಬ ಸುದ್ದಿ ಹಬ್ಬಿದೆ. ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.
2013ರ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ 71, 960 ಮತ ಪಡೆದಿದ್ದರು. ಕೆಜೆಪಿಯ ಬಿ.ಆರ್.ಜಯಂತ್ 30,712 ಮತ, ಜೆಡಿಎಸ್‌ನ ಬೇಳೂರು ಗೋಪಾಲಕೃಷ್ಣ 23,217 ಮತ, ಬಿಜೆಪಿಯ ಶರಾವತಿ ಸಿ.ರಾವ್ 5,355 ಮತಗಳನ್ನು ಪಡೆದಿದ್ದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications