ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?
ತುಂಗಾ ನದಿ ತಟದಲ್ಲಿರುವ ಅಪ್ಪಟ ಮಲೆನಾಡ ಕ್ಷೇತ್ರ ತೀರ್ಥಹಳ್ಳಿ. ಸಮಾಜವಾದಿ ಚಳವಳಿ, ಸಾಹಿತ್ಯ ಕ್ಷೇತ್ರಕ್ಕೆ ಕ್ಷೇತ್ರದ ಕೊಡುಗೆ ಅಪಾರ. ಕ್ಷೇತ್ರದ ಜನರು ಅಡಿಕೆ ಬೆಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಕೆಲಸಕ್ಕೆ ಜನರು ಸಿಗುವುದಿಲ್ಲ ಎಂಬುದು ಪ್ರಸ್ತುತ ಬಹುದೊಡ್ಡ ಸಮಸ್ಯೆಯಾಗಿದೆ.
ಯುವಕ-ಯುವತಿಯರು ಓದು ಮುಗಿಸಿ, ಕೈಯಲ್ಲಿ ಪದವಿ ಹಿಡಿದು ಬೆಂಗಳೂರು ನಗರದ ಬಸ್ಸು ಹತ್ತುತ್ತಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ತುಂಗಾ ನದಿ ಹರಿಯುತ್ತದೆ. ಆದರೆ, ಮರಳಿಗೆ ಬಂಗಾರದ ಬೆಲೆ ಇದೆ. ಅಕ್ರಮ ಮರಳು ಸಾಗಣೆಗೆ ತಡೆ ಹಾಕಬೇಕು ಎಂಬ ಕೂಗಿಗೆ ಸರಿಯಾದ ಬೆಲೆ ಸಿಕ್ಕಿಲ್ಲ.
ರಿಯಲ್ ಎಸ್ಟೇಟ್ ಉದ್ಯಮ ಈಗ ಚಿಗುರೊಡೆಯುತ್ತಿದೆ. ಅರಣ್ಯ ಭೂಮಿಯಲ್ಲಿ ಜಮೀನಿ, ಮನೆ ಮಾಡಿಕೊಂಡವರು ಬಗರ್‌ಹುಕುಂಗಾಗಿ ಅರ್ಜಿ ಸಲ್ಲಿಸಿ ಕಾದು ಕುಳಿತಿದ್ದಾರೆ. ಅರಣ್ಯ ಇಲಾಖೆ, ಕಂದಾಯ ಇಲಾಖೆಯವರು ನಮ್ಮನ್ನು ಒಕ್ಕಲೆಬ್ಬಿಸುತ್ತಾರೆಯೇ? ಎಂಬ ಪ್ರಶ್ನೆ ಜನರನ್ನು ಕಾಡುತ್ತಲೆ ಇದೆ.

2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ ಅವರು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಮ್ಮನೆ ರತ್ನಾಕರ ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನಾಗಿ ಮಾಡಿದರು. ಆದರೆ, ಸಂಪುಟ ಪುನಾರಚನೆ ಸಮಯದಲ್ಲಿ ಸಚಿವ ಸ್ಥಾನವನ್ನು ಅವರು ಕಳೆದುಕೊಂಡರು.
ಸಾಕಷ್ಟು ಕೆಲಸ ಮಾಡಿದ್ದಾರೆ, ಜನರ ಕೈಗೆ ಸುಲಭವಾಗಿ ಶಾಸಕರು ಕೈಗೆ ಸಿಗುತ್ತಾರೆ. ಆದ್ದರಿಂದ, 2018ರ ಚುನಾವಣೆಯಲ್ಲಿಯೂ ಕಿಮ್ಮನೆ ರತ್ನಾಕರ ಅವರಿಗೆ ಟಿಕೆಟ್ ಖಚಿತ.
ಬಿಜೆಪಿಯಿಂದ ಮಾಜಿ ಶಾಸಕ ಆರಗ ಜ್ಞಾನೇಂದ್ರ ಅಭ್ಯರ್ಥಿಯಾಗುವುದು ಖಚಿತ, ಸಾಮಾಜಿಕ ಜಾಲತಾಣದಲ್ಲಿ ಅವರ ಪರವಾಗಿ ಭರ್ಜರಿ ಪ್ರಚಾರ ಆರಂಭವಾಗಿದೆ. 'ದೆಹಲಿಗೆ ನರೇಂದ್ರ, ತೀರ್ಥಹಳ್ಳಿಗೆ ಜ್ಞಾನೇಂದ್ರ' ಎಂಬುದು ಕ್ಷೇತ್ರದ ಬಿಜೆಪಿ ಸದಸ್ಯರ ಘೋಷವಾಕ್ಯವಾಗಿದೆ.
ಈ ಬಾರಿಯ ಚುನಾಣೆಯಲ್ಲಿ ತ್ರಿಕೋನ ಸ್ಪರ್ಧೆ ಖಚಿತ. ಅದಕ್ಕೆ ಕಾರಣ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರು ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲು ಸಿದ್ಧವಾಗಿರುವುದು.
2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿದ್ದ ಆರ್.ಎಂ.ಮಂಜುನಾಥ ಗೌಡರು 35,817ಮತಗಳನ್ನು ಪಡೆದಿದ್ದರು. ಚುನಾವಣೆ ಬಳಿಕ ಕಾಂಗ್ರೆಸ್ ಸೇರಿದ್ದರು, ಈ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಲಿದ್ದಾರೆ. ಆದ್ದರಿಂದ, ಕ್ಷೇತ್ರದ ಕದನ ಕುತೂಹಲಕ್ಕೆ ಕಾರಣವಾಗಿದೆ.
2013ರ ಚುನಾವಣೆಯಲ್ಲಿ ಕಿಮ್ಮನೆ ರತ್ನಾಕರ ಅವರು 37,160 ಮತಗಳನ್ನು ಪಡೆದಿದ್ದರು. ಕೆಜೆಪಿಯಿಂದ ಸ್ಪರ್ಧಿಸಿದ್ದ ಆರ್.ಎಂ.ಮಂಜುನಾಥ ಗೌಡ 35,817 ಮತ, ಬಿಜೆಪಿಯಿಂದ ಸ್ಪರ್ಧಿಸಿದ್ದ ಆರಗ ಜ್ಞಾನೇಂದ್ರ ಅವರು 34,446 ಮತಗಳನ್ನು ಪಡೆದಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications