ವರುಣ ಕ್ಷೇತ್ರ : ಕಾಂಗ್ರೆಸ್ಸಿಗೆ ಸುಲಭ ಗೆಲುವು ಕಷ್ಟ
ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಮತ್ಯಾರೂ ಅಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ. ಕಳೆದ ಬಾರಿ ಇದೇ ತಮ್ಮ ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಹೇಳಿದ್ದರು.ಆದರೆ, ಕಾಲ ಬದಲಾಗಿದೆ. ಹಾಗೆಯೇ, ಸಿದ್ದರಾಮಯ್ಯ ಅವರ ಮನಸ್ಸೂ ಬದಲಾಯಿಸಿದ್ದಾರೆ, ಕ್ಷೇತ್ರವೂ ಬದಲಾಗಿದೆ.
ಕಳೆದ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಚುನಾವಣಾ ತಂತ್ರಗಾರಿಕೆಗಳನ್ನು, ಪ್ರಚಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದ ಅವರ ಪುತ್ರ ರಾಕೇಶ್ ಈಗ ಇಲ್ಲ. ಹಾಗಾಗಿ, ಇಲ್ಲಿ ಅವರ ಮತ್ತೊಬ್ಬ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಅವರಿಗೆ ಇಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಿದೆ. ಈ ವರ್ಷ ನಡೆದ ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಅವರಾಗಲೇ ಇಲ್ಲಿ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಆದರೆ, ಇಲ್ಲಿ ಸಿದ್ದರಾಮಯ್ಯ ಅವರಿಗೆ ಪ್ರಮುಖವಾದ ಸವಾಲೆಂದರೆ, ನಂಜನಗೂಡಿನ ಕೆಲ ಗ್ರಾಮಗಳು, ವರುಣಾ ಕ್ಷೇತ್ರಕ್ಕೂ ಸೇರುವುದು. ನಂಜನಗೂಡಿನಲ್ಲಿ ಶ್ರೀನಿವಾಸ ಪ್ರಸಾದ್ ಅವರು ಪ್ರಭಾವ ಬೀರಿದರೆ, ಅದು ಈ ಗ್ರಾಮಗಳ ಮೇಲೂ ಪರಿಣಾಮ ಬೀರಬಹುದು. ಇದೇ ಕುತೂಹಲದ ವಿಚಾರ. ಏನೇ ಆಗಲಿ, ಕಾಂಗ್ರೆಸ್ ಅಭ್ಯರ್ಥಿಗೆ ಈ ಕ್ಷೇತ್ರದಲ್ಲಿ ಗೆಲ್ಲುವುದು ಕಳೆದ ಬಾರಿಯಷ್ಟು ಸುಲಭವಲ್ಲ ಎಂದಷ್ಟೇ ಹೇಳಬಹುದು.

ಬಿಜೆಪಿಯಿಂದ ಅಭ್ಯರ್ಥಿ ಘೋಷಣೆಯಾಗಿಲ್ಲದಿದ್ದರೂ ಈ ಬಾರಿ ಸಿದ್ದಲಿಂಗಸ್ವಾಮಿ ಬದಲಿಗೆ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಜೆಡಿಎಸ್ ನಿಂದ ಎಸ್ ಅಭಿಷೇಕ್ ಕಣಕ್ಕಿಳಿಯಲಿದ್ದಾರೆ.
2013ರ ಫಲಿತಾಂಶ : ಕಳೆದ ಚುನಾವಣೆಯಲ್ಲಿ ಶೇ 82.43ರಷ್ಟು ಮತದಾನವಾಗಿತ್ತು. ಸಿದ್ದರಾಮಯ್ಯ ಅವರು ಗಳಿಸಿದ್ದು 84,217 ಮತಗಳಾದರೆ, ಬಿಜೆಪಿಯ ಕಾಪು ಸಿದ್ದಲಿಂಗ ಸ್ವಾಮಿ ಅವರು 54, 601 ಮತಗಳು. 29,641 ಮತಗಳ (ಶೇ 18.45ರಷ್ಟು) ಅಂತರದಿಂದ ಸಿದ್ದರಾಮಯ್ಯ ಅವರು ಜಯ ದಾಖಲಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications