ಕೆಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಕ್ತಿ ಚಿತ್ರ
ವಿರೋಧ ಪಕ್ಷಗಳ ಆರೋಪ, ಹತ್ತು ಹಲವು ಹಗರಣಗಳನ್ನೆಲ್ಲ ಮೆಟ್ಟಿನಿಂತು ಸ್ವಂತ ಬಲದಿಂದ ರಾಜ್ಯದ ಜನತೆಯ ನಂಬಿಕೆಯನ್ನು ಗಳಿಸಿದ ಛಲಗಾರ ಬಿ.ಎಸ್.ಯಡಿಯೂರಪ್ಪ. 71ನೇ ವಸಂತದಲ್ಲಿದ್ದರು ಹದಿಹರೆಯದವರು ನಾಚುವಂತೆ ಪಕ್ಷ ಸಂಘಟನೆಯಲ್ಲಿ ತೊಡಗುವ ಛಾತಿ ಇವರಿಗಿದೆ.
ಹದಿಮೂರನೇ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ವಿರೋಧಿಗಳ, ಹಿತಶತ್ರುಗಳ ನಿರೀಕ್ಷೆಗೆ ವಿರುದ್ಧವಾಗಿ ಮತ್ತು ಸಮಸ್ತ ಕನ್ನಡಿಗರ ನಿರೀಕ್ಷೆಗೂ ಮೀರಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದ ಯಡಿಯೂರಪ್ಪ ಈಗ 'ಜನರೇ ಹೈಕಮಾಂಡ್' ಎಂಬ ಮಂತ್ರ ಜಪಿಸುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆ ಯಶಸ್ಸಿನ ಬಳಿಕ ಬಿಜೆಪಿ ವಿರುದ್ಧ ನೇರ ಯುದ್ಧಕ್ಕೆ ಇಳಿದಿದ್ದಾರೆ.
ಸತತ ನಾಲ್ಕು ದಶಕಗಳಲ್ಲಿ ಅನೇಕ ಏಳು ಬೀಳುಗಳನ್ನು ಕಂಡಿದ್ದಾರೆ. ಮಂಡ್ಯ ಜಿಲ್ಲೆಯ ಬೂಕನಕೆರೆ ಎಂಬ ಕುಗ್ರಾಮದ ಬಡ ರೈತ ಕುಟುಂಬದಲ್ಲಿ ಜನಸಿದ ಯಡಿಯೂರಪ್ಪ ದಿಢೀರ್ ನಾಯಕರಾದವರಲ್ಲ. ಯಾವುದೇ ಗಾಡ್ ಫಾದರ್ ಇಲ್ಲದೇ ಸ್ವಂತ ಪರಿಶ್ರಮ ಮೇಲೆ ಹಂತ ಹಂತವಾಗಿ ಬೆಳೆದು ಬಂದ ಧೀಮಂತ ನಾಯಕ. ಹಳ್ಳಿಯಿಂದಲೇ ಹೋರಾಟ ಆರಂಭಿಸಿ ರಾಜಕೀಯ ನೆಲೆಗಟ್ಟನ್ನು ಕಂಡುಕೊಂಡವರು.

ಪಕ್ಷ ಸಂಘಟನೆಯಲ್ಲಿ ನಿಪುಣರಾದ ಯಡಿಯೂರಪ್ಪ, ಹೋರಾಟದಲ್ಲಿ ಎತ್ತಿದ ಕೈ. ಭಾಷಣಕ್ಕೆ ನಿಂತರೆ ಗುಡುಗು ಸಿಡಿಲುಗಳ ಮೇಳೈಕೆ. ಇಂತಹ ಯಡಿಯೂರಪ್ಪ ಧೃತಿಗೆಡದೆ 80ರ ದಶಕದಲ್ಲಿ ಎರಡು ಶಾಸಕರಿದ್ದ ಪಕ್ಷವನ್ನು ಹಂತಹಂತವಾಗಿ ಬೆಳೆಸುತ್ತಾ 110 ಶಾಸಕರ ಪಕ್ಷವಾಗಿ ಮಾಡಿದ್ದು ಕಡಿಮೆ ಸಾಧನೆ ಏನಲ್ಲ
ಬಿಜೆಪಿ ಜತೆಗೆ ಜೆಡಿಎಸ್ ಸರ್ಕಾರ ರಚಿಸಲು ಮುಂದಾಗಿದ್ದು, ಅಪವಿತ್ರ ಮೈತ್ರಿ ಯಡಿಯೂರಪ್ಪ ಜೀವನದಲ್ಲಿ ಕಪ್ಪುಚುಕ್ಕೆಯೂ ಹೌದು, ಬ್ಲೆಸಿಂಗ್ ಇನ್ ಡಿಸ್ಗೈಸ್ ಕೂಡ ಹೌದು. ಜೆಡಿಎಸ್ ಬಿಜೆಪಿಗೆ ಕೈಕೊಡದಿದ್ದರೆ ಬಿಜೆಪಿ ಪರ ಗಾಳಿ ಬೀಸುತ್ತಲೂ ಇರಲಿಲ್ಲ ಎಂಬುದು ಕೂಡ ಅಷ್ಟೇ ಸತ್ಯ. ಆದರೆ, ಆ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ, ಹಣಕಾಸು ಸಚಿವರಾಗಿ ನೀಡಿದ ಅನೇಕ ಜನಪರ ಕಾರ್ಯಕ್ರಮಗಳಿಂದ ಯಡಿಯೂರಪ್ಪ ಮತ್ತಷ್ಟು ಜನಪ್ರಿಯತೆ ಪಡೆದುಕೊಂಡರು.
ವೈಯಕ್ತಿಕ ಜೀವನ: ಬಿ.ಎಸ್. ಯಡಿಯೂರಪ್ಪ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದ ಬಡ ರೈತ ಕುಟುಂಬದ ಸಿದ್ಧಲಿಂಗಪ್ಪ ಪುಟ್ಟಮ್ಮ ದಂಪತಿಗಳಿಗೆ 1943ರಲ್ಲಿ ಜನಿಸಿದರು. ತಾಯಿ ಪುಟ್ಟಮ್ಮ ಅವರನ್ನು ತಮ್ಮ ನಾಲ್ಕನೇ ವಯಸ್ಸಿನಲ್ಲಿಯೇ ಕಳೆದುಕೊಂಡ ಯಡಿಯೂರಪ್ಪ ತಂದೆಯ ಮಮತೆಯಲ್ಲಿ ಬೆಳೆದವರು.
ಬಿ.ಎ. ಪದವಿಯನ್ನು ಮಂಡ್ಯದಲ್ಲಿ ಪೂರೈಸಿದರು. ಕೆಲಸ ಅರಸಿ ಶಿಕಾರಿಪುರಕ್ಕೆ ಬಂದು ವೀರಭದ್ರ ಶಾಸ್ತ್ರೀ ಅವರ ರೈಸ್ ಮಿಲ್ ನಲ್ಲಿ ಗುಮಾಸ್ತನ ಕೆಲಸಕ್ಕೆ ಸೇರಿಕೊಂಡರು. ಕೊನೆಗೆ ಶಾಸ್ತ್ರೀ ಅವರ ಪುತ್ರಿ ಮೈತ್ರಾದೇವಿ ಅವರನ್ನು ವರಿಸಿ ಮಾವನ ಮನೆಯಲ್ಲಿ ನೆಲೆಸಿದರು.
ಯಡಿಯೂರಪ್ಪ ಅವರಿಗೆ ಇಬ್ಬರು ಪುತ್ರರು(ರಾಘವೇಂದ್ರ, ವಿಜಯೇಂದ್ರ), ಹಾಗೂ ಮೂವರು ಪುತ್ರಿಯರು (ಅರುಣಾದೇವಿ, ಪದ್ಮಾವತಿ ಮತ್ತು ಉಮಾದೇವಿ). 2004ರಲ್ಲಿ ಪತ್ನಿ ಮೈತ್ರಾದೇವಿಯವರು ಆಕಸ್ಮಿಕವಾಗಿ ನೀರಿನ ತೊಟ್ಟಿಯಲ್ಲಿ ಬಿದ್ದು ತೀರಿಕೊಂಡರು. ಬಿಜೆ ಪುಟ್ಟಸ್ವಾಮಿ, ರೇಣುಕಾಚಾರ್ಯ, ಶೋಭಾ ಕರಂದ್ಲಾಜೆ, ಭಾರತಿ ಶೆಟ್ಟಿ, ಬಸವರಾಜ್ ಬೊಮ್ಮಾಯಿ ಅತ್ಯಾಪ್ತರು.
ಯಡಿಯೂರಪ್ಪ ಅಲಂಕರಿಸಿದ ಹುದ್ದೆಗಳು:
* 1975 : ಶಿಕಾರಿಪುರ ಪುರಸಭೆ ಸದಸ್ಯರಾಗಿ ಆಯ್ಕೆ, 1977ರಲ್ಲಿ ಅಧ್ಯಕ್ಷ.
* 1980 : ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ.
* 1983 : ಮಾಜಿ ಸಚಿವ ವೆಂಕಟಪ್ಪ ಅವರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ
* 1985 : 88 ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ,
* 1988 ರಲ್ಲಿ ರಾಜ್ಯಾಧ್ಯಕ್ಷ,
* 1992 ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನ ನಿರ್ವಹಣೆ
* 1994 : ವಿಧಾನಸಭೆ ಪ್ರತಿಪಕ್ಷದ ನಾಯಕ
* 1999 : ಮತ್ತೆ ರಾಜ್ಯಾಧ್ಯಕ್ಷ, 2000 ರಲ್ಲಿ ಮೇಲ್ಮನೆ ಸದಸ್ಯ
* 2004 : ಐದನೇ ಬಾರಿಗೆ ವಿಧಾನಸಭೆ ಪ್ರವೇಶ, ಇನ್ನೊಮ್ಮೆ ಪ್ರತಿಪಕ್ಷದ ನಾಯಕ
* 2006 : ಸಮ್ಮಿಶ್ರ ಸರ್ಕಾರ ರಚನೆ, ಉಪಮುಖ್ಯಮಂತ್ರಿ, ಹಣಕಾಸು ಮತ್ತು ಅಬಕಾರಿ ಖಾತೆಗಳ ನಿರ್ವಹಣೆ
* 2007 : ನವೆಂಬರ್ 12 ರಿಂದ 17ರ ವರೆಗೆ 7 ದಿನ ಮಾತ್ರ ಮುಖ್ಯಮಂತ್ರಿಯಾಗಿ ಪದವಿ ಅಲಂಕರಿಸಿದ್ದರು.
* 2008 : ಮೇ 30ರ ಶುಕ್ರವಾರ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ
* ಬಿಜೆಪಿ ಶಾಸಕ ಸ್ಥಾನದಿಂದ ನವೆಂಬರ್ 30,2012 ರಂದು ಮುಕ್ತಿ ಪಡೆದರು.
* ನಂತರ ಸದಾನಂದ ಗೌಡರಿಗೆ ಸಿಎಂ ಪಟ್ಟ ಒಲಿದಿದ್ದು, ಬಂಡಾಯವೆದ್ದು ಜಗದೀಶ್ ಶೆಟ್ಟರ್ ರನ್ನು ಕುರ್ಚಿಯಲ್ಲಿ ಕೂರಿಸಿದ್ದು ಸಾಧನೆಗಿಂತ ವೈಫಲ್ಯ ಎನ್ನಬಹುದು
* ಡಿ 9, 2012ರಲ್ಲಿ ಕರ್ನಾಟಕ ಜನತಾ ಪಕ್ಷಕ್ಕೆ ಅಧಿಕೃತವಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
* ಗೋಲಿಬಾರ್ ನಲ್ಲಿ ರೈತನೊಬ್ಬ ಮೃತಪಟ್ಟ ಹಾವೇರಿಯಲ್ಲೇ ಉದಯವಾದ ಹೊಸ ಪ್ರಾದೇಶಿಕ ಪಕ್ಷದ ಚುಕ್ಕಾಣಿ ಹಿಡಿದರು.
ಕರ್ನಾಟಕ ಜನತಾ ಪಕ್ಷ ಎಂಬ ಪ್ರಾದೇಶಿಕ ಪಕ್ಷ [ಪ್ರಾದೇಶಿಕ ಪಕ್ಷದ ಅಗತ್ಯದ ಬಗ್ಗೆ ]ದ ಅಡಿಯಲ್ಲಿ ಯಡಿಯೂರಪ್ಪ ಗೆಲ್ಲುತ್ತಾರೋ ಸೋಲುತ್ತಾರೋ ಅದು ಭವಿಷ್ಯದ ಮಾತು.
ಕಾಂಗ್ರೆಸ್‌ನ ಭದ್ರಕೋಟೆಯನ್ನು ಭೇದಿಸಿ ಪ್ರಪ್ರಥಮ ಬಾರಿಗೆ ದಕ್ಷಿಣ ಭಾರತದಲ್ಲಿ ಭಾರತೀಯ ಅಧಿಪತ್ಯ ಸ್ಥಾಪಿಸಲು ಯಡಿಯೂರಪ್ಪ ಯಶಸ್ವಿಯಾಗಿದ್ದು ಸಣ್ಣ ವಿಷಯವಲ್ಲ. ಮುಂಬರುವ ಚುನಾವಣೆ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಹಾಗೂ ಸ್ವತಃ ಯಡಿಯೂರಪ್ಪ ಅವರ ಇಮೇಜಿಗೆ ದೊಡ್ಡ ಸವಾಲಾಗಿದೆ.
ಯಡಿಯೂರಪ್ಪ ಅವರ ಸುತ್ತ ಇನ್ನೂ ಅನೇಕ ಹಗರಣಗಳ ಬಲೆ ಇದ್ದೇ ಇದೆ. ಡಿ ನೋಟಿಫಿಕೇಷನ್, ಸ್ವಜನಪಕ್ಷಪಾತ, ಭೂ ಹಗರಣಗಳ ಜೊತೆ ಯಡಿಯೂರಪ್ಪ ಅವರ ಸಿಡುಕು ಕಂಡರೆ ಜನ ಮುಖ ಬೇರೆಡೆ ತಿರುಗಿಸುತ್ತಾರೆ. ಕೆಜೆಪಿ ಅಳಿವು ಉಳಿವಿನೊಂದಿಗೆ ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯವೂ ನಿರ್ಧಾರವಾಗಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications