ಗಾಂಧಿನಗರ ವಿಧಾನಸಭಾ ಕ್ಷೇತ್ರದ ಪರಿಚಯ

Dinesh G Rao
* ವಿಧಾನಸಭಾ ಕ್ಷೇತ್ರ ಸಂಖ್ಯೆ 164:ಹಾಲಿ ಶಾಸಕ- ದಿನೇಶ್ ಗುಂಡೂರಾವ್ (43 ವರ್ಷ)- ಕಾಂಗ್ರೆಸ್. ಸೋತ ಅಭ್ಯರ್ಥಿ ಪಿಸಿ ಮೋಹನ್- ಬಿಜೆಪಿ

* ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಪುತ್ರ ದಿನೇಶ್. ಯುವ ಕಾಂಗ್ರೆಸ್ ಅಧ್ಯಕ್ಷರೂ ಹೌದು. 3ನೇ ಬಾರಿ ಇದೇ ಕ್ಷೇತ್ರದಿಂದ ಗೆದ್ದುಬಂದಿದ್ದಾರೆ.

* ಸಾಧನೆಗಳು: ಅಂಬೇಡ್ಕರ್ ಭವನ, ಫ್ರೀಡಂ ಪಾರ್ಕ್ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಡಾಂಬರೀಕರಣ, ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಮಣೆ ಹಾಕಲಾಗಿದೆ.

* ಸಮಸ್ಯೆಗಳು: ಪರಾಜಿತ ಅಭ್ಯರ್ಥಿ ಬಿಜೆಪಿಯ ಪಿಸಿ ಮೋಹನ್ ಹೇಳುವಂತೆ 5 ವರ್ಷಗಳ ಹಿಂದೆ ಕ್ಷೇತ್ರ ಹೇಗಿತ್ತೋ ಇಂದಿಗೂ ಹಾಗೆಯೇ ಇದೆ. ಹೊಸ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ರಾಜಧಾನಿಯ ಹೃದಯ ಭಾಗವಾದರೂ ಒಳಚರಂಡಿ ಮತ್ತು ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಪ್ರತಿಪಕ್ಷದ ಶಾಸಕ ಆಗಿರುವುದರಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ನೆರವು ಸಿಕ್ಕಿಲ್ಲ.

* ವಾರ್ಡ್: ದತ್ತಾತ್ರೇಯ ದೇವಸ್ಥಾನ, ಗಾಂಧಿನಗರ, ಸುಭಾಷ್ ನಗರ, ಓಕಳೀಪುರಂ, ಚಿಕ್ಕಪೇಟೆ, ಕಾಟನ್ ಪೇಟೆ, ಬಿನ್ನಿಪೇಟೆ

* ಮತದಾರರ ಸಂಖ್ಯೆ: 2,22,144. ಕಳೆದ ಬಾರಿ ವೋಟ್ ಮಾಡಿದವರು ಶೇ. 45ರಷ್ಟು ಮಂದಿ. ಅದರಲ್ಲಿ ದಿನೇಶ್ ಗುಂಡೂರಾವ್ ಮತ ಗಳಿಕೆ ಪ್ರಮಾಣ ಶೇ. 41.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+