ಬಳ್ಳಾರಿ ಕದನಕಣ : ಹಗರಿ ಬೊಮ್ಮನಹಳ್ಳಿ (ಎಸ್‌ಸಿ ಮೀಸಲು)

ಗಣಿಧಣಿಗಳ ಪಾರುಪತ್ಯ ಕಂಡಿರುವ ಬಳ್ಳಾರಿಯಲ್ಲಿ ಇನ್ನೂ ದುಡ್ಡಿನದೇ ಮೇಲಾಟವಾಗಿದ್ದರೂ ಲಿಂಗಾಯತ, ವಾಲ್ಮಿಕಿ, ಕುರುಬ, ಮುಸ್ಲಿಂ, ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಮತಗಳನ್ನು ಬುಟ್ಟಿಗೆ ಹಾಕಿಕೊಂಡವರು ಮಾತ್ರ ಇಲ್ಲಿ ಗೆಲ್ಲಲು ಸಾಧ್ಯ. ಶ್ರೀರಾಮುಲು ಮತ್ತು ರೆಡ್ಡಿಗಳ ನಡುವೆ ಒಡಕು ಮೂಡಿದೆ ಎಂಬ ಸುದ್ದಿ, ಹಾಗು ಟಿಕೆಟ್‌ಗಾಗಿ ಕಾಂಗ್ರೆಸ್ಸಿನಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದರಿಂದ ಈ ಬಾರಿ ಏನು ಬೇಕಾದರೂ ಸಂಭವಿಸಬಹುದು. ಕಳೆದ ಬಾರಿ ಇದ್ದ ಬಿಜೆಪಿ ಅಲೆ ಈ ಬಾರಿ ಇಲ್ಲದಿದ್ದರೂ ಹಣದ ಪ್ರಭಾವ ತುಸುವೂ ಕಡಿಮೆಯಾಗಿಲ್ಲ.

ಹಗರಿ ಬೊಮ್ಮನಹಳ್ಳಿ (ಎಸ್‌ಸಿ ಮೀಸಲು) : ಲಿಂಗಾಯತ ಮತ್ತು ಪರಿಶಿಷ್ಟ ಜಾತಿ ಮತಗಳು ಇಲ್ಲಿ ಹೆಚ್ಚಾಗಿವೆ. ತಲಾ 40 ಸಾವಿರ ಮತಗಳನ್ನು ಹೊಂದಿರುವ ಈ ಎರಡು ಸಮಾಜದ ಮತಗಳ ಮೇಲೆ ಎಲ್ಲ ಪಕ್ಷಗಳು ಈ ಬಾರಿ ಕಣ್ಣಿಟ್ಟಿವೆ. ಜೊತೆಗೆ ಕುರುಬ, ನಾಯಕ, ಮುಸ್ಲಿಂ ಮತಗಳು ಸಹ ಈ ಬಾರಿ ಇಲ್ಲಿ ನಿರ್ಣಾಯಕವಾಗಲಿದೆ.

ಕಳೆದ ಬಾರಿ ಗೆಲುವು ಕಂಡಿದ್ದ ನೇಮಿರಾಜ ನಾಯ್ಕ ಈ ಬಾರಿ ಮತ್ತೊಮ್ಮೆ ಬಿಜೆಪಿಯಿಂದ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್‌ನಿಂದ ಕಳೆದ ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದ ಹೆಗರದಾಳ ರಾಮಣ್ಣ. ಕೃಷ್ಣಾ ನಾಯಕ ಹಾಗೂ ಬಳ್ಳಾರಿ ಮೂಲದ ಮಾನಯ್ಯ, ಟಿಕೆಟ್‌ಗಾಗಿ ಪ್ರಬಲ ಆಕ್ಷಾಂಕಿಯಾಗಿದ್ದಾರೆ.

ಬಿಎಸ್‌ಆರ್ ಕಾಂಗ್ರೆಸ್, ಜಿಲ್ಲಾ ಪಂಚಾಯತ್ ಸದಸ್ಯ ಭೀಮಾನಾಯ್ಕನನ್ನು ಕಣಕ್ಕೆ ಇಳಿಸುತ್ತಿದೆ. ಕೆಜೆಪಿ ಸಹ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಲು ಮುಂದಾಗಿದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+