ಬಳ್ಳಾರಿ ಕದನಕಣ : ಹೂವಿನ ಹಡಗಲಿ (ಎಸ್‌ಸಿ ಮೀಸಲು)
ಗಣಿಧಣಿಗಳ ಪಾರುಪತ್ಯ ಕಂಡಿರುವ ಬಳ್ಳಾರಿಯಲ್ಲಿ ಇನ್ನೂ ದುಡ್ಡಿನದೇ ಮೇಲಾಟವಾಗಿದ್ದರೂ ಲಿಂಗಾಯತ, ವಾಲ್ಮಿಕಿ, ಕುರುಬ, ಮುಸ್ಲಿಂ, ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಮತಗಳನ್ನು ಬುಟ್ಟಿಗೆ ಹಾಕಿಕೊಂಡವರು ಮಾತ್ರ ಇಲ್ಲಿ ಗೆಲ್ಲಲು ಸಾಧ್ಯ. ಶ್ರೀರಾಮುಲು ಮತ್ತು ರೆಡ್ಡಿಗಳ ನಡುವೆ ಒಡಕು ಮೂಡಿದೆ ಎಂಬ ಸುದ್ದಿ, ಹಾಗು ಟಿಕೆಟ್‌ಗಾಗಿ ಕಾಂಗ್ರೆಸ್ಸಿನಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದರಿಂದ ಈ ಬಾರಿ ಏನು ಬೇಕಾದರೂ ಸಂಭವಿಸಬಹುದು. ಕಳೆದ ಬಾರಿ ಇದ್ದ ಬಿಜೆಪಿ ಅಲೆ ಈ ಬಾರಿ ಇಲ್ಲದಿದ್ದರೂ ಹಣದ ಪ್ರಭಾವ ತುಸುವೂ ಕಡಿಮೆಯಾಗಿಲ್ಲ.
ಹೂವಿನ ಹಡಗಲಿ (ಎಸ್‌ಸಿ ಮೀಸಲು) : ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಈ ಕ್ಷೇತ್ರ ಮೀಸಲಾದರೂ ಕೂಡಾ, ಲಿಂಗಾಯತ ಮತಗಳೇ ಇಲ್ಲಿ ಆಧಾರ. 60 ಸಾವಿರಕ್ಕೂ ಅಧಿಕ ಮತಗಳನ್ನ ಹೊಂದಿರುವ ಈ ಕ್ಷೇತ್ರದಲ್ಲಿ, ಲಿಂಗಾಯತ ಮತಗಳನ್ನು ಯಾರು ಹೆಚ್ಚಾಗಿ ಪಡೆಯುತ್ತಾರೋ ಅವರಿಗೆ ಗೆಲುವು ಸಾಧಿಸಲು ಸಾಧ್ಯ. ಎಸ್‌ಸಿ/ಎಸ್‌ಟಿ ಕುರುಬ ಮತಗಳು ಸಹ ಹೆಚ್ಚಾಗಿರುವುದರಿಂದ ನಿರ್ಣಾಯಕ ಪಾತ್ರ ಈ ಮತಗಳದ್ದಾಗಲಿದೆ.
ಕಳೆದ ಬಾರಿ ಗೆಲುವು ಸಾಧಿಸಿರುವ ಚಂದ್ರಾನಾಯ್ಕ, ಈ ಬಾರಿಯೂ ಮತ್ತೊಮ್ಮೆ ಬಿಜೆಪಿಯಿಂದ ಸ್ಪರ್ಧೆ ಮಾಡಲಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಶಾಸಕ ಪರಮೇಶ್ವರನಾಯ್ಕ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಕೆಜೆಪಿ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸುತ್ತಿದ್ದರೂ ಬಿಜೆಪಿ ಕಾಂಗ್ರೆಸ್ ಮಧ್ಯೆ ಪ್ರಬಲ ಪೈಪೋಟಿ ನಡೆಯಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications