ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿ ಕದನಕಣ : ಕಂಪ್ಲಿ

By Prasad
|
Google Oneindia Kannada News

Suresh Babu
ಗಣಿಧಣಿಗಳ ಪಾರುಪತ್ಯ ಕಂಡಿರುವ ಬಳ್ಳಾರಿಯಲ್ಲಿ ಇನ್ನೂ ದುಡ್ಡಿನದೇ ಮೇಲಾಟವಾಗಿದ್ದರೂ ಲಿಂಗಾಯತ, ವಾಲ್ಮಿಕಿ, ಕುರುಬ, ಮುಸ್ಲಿಂ, ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಮತಗಳನ್ನು ಬುಟ್ಟಿಗೆ ಹಾಕಿಕೊಂಡವರು ಮಾತ್ರ ಇಲ್ಲಿ ಗೆಲ್ಲಲು ಸಾಧ್ಯ. ಶ್ರೀರಾಮುಲು ಮತ್ತು ರೆಡ್ಡಿಗಳ ನಡುವೆ ಒಡಕು ಮೂಡಿದೆ ಎಂಬ ಸುದ್ದಿ, ಹಾಗು ಟಿಕೆಟ್‌ಗಾಗಿ ಕಾಂಗ್ರೆಸ್ಸಿನಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದರಿಂದ ಈ ಬಾರಿ ಏನು ಬೇಕಾದರೂ ಸಂಭವಿಸಬಹುದು. ಕಳೆದ ಬಾರಿ ಇದ್ದ ಬಿಜೆಪಿ ಅಲೆ ಈ ಬಾರಿ ಇಲ್ಲದಿದ್ದರೂ ಹಣದ ಪ್ರಭಾವ ತುಸುವೂ ಕಡಿಮೆಯಾಗಿಲ್ಲ.

ಕಂಪ್ಲಿ : ವಾಲ್ಮೀಕಿ ನಾಯಕರ ಮತಗಳು 40 ಸಾವಿರ ಇರುವುದರಿಂದ ಬಿಎಸ್‌ಆರ್ ಸಂಸ್ಥಾಪಕ ಶ್ರೀರಾಮುಲು ಬೆಂಬಲಿಗರಿಗೆ ಹೇಳಿ ಮಾಡಿಸಿದ ಜಾಗ. ಹೀಗಾಗಿ ಶ್ರೀರಾಮುಲು ಅಳಿಯ ಟಿ.ಎಚ್. ಸುರೇಶ್‌ ಬಾಬು ಕಳೆದ ಬಾರಿ ಈ ಕ್ಷೇತ್ರದಿಂದ ಸ್ಪರ್ಧಿಸಿ 22,336 ಮತಗಳ ಅಂತರದಿಂದ ಗೆದ್ದಿದ್ದರು. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸಣ್ಣ ಹನುಮಕ್ಕ ಅವರನ್ನು ಸುರೇಶ್ ಬಾಬು ಸದೆಬಡಿದಿದ್ದರು.

ಲಿಂಗಾಯತ ಹಾಗೂ ಕುರುಬ ಮತಗಳೂ ಇಲ್ಲಿ ನಿರ್ಣಾಯಕವಾಗಿದೆ. ಹೀಗಾಗಿ ಮತ್ತೊಂದು ಬಾರಿ ಬಿಎಸ್‌ಆರ್‌ನಿಂದ ಶಾಸಕ ಸುರೇಶ್‌ ಬಾಬು ಕಣಕ್ಕೆ ಇಳಿಯುತ್ತಿದ್ದಾರೆ. ಲಿಂಗಾಯತ ಮತಗಳನ್ನೇ ನೆಚ್ಚಿಕೊಂಡಿರುವ ಕೆಜೆಪಿ, ಮಾಜಿ ಶಾಸಕ ಎಚ್ ಡಿ ಬಸವರಾಜರನ್ನು ಕಣಕ್ಕೆ ಇಳಿಸುತ್ತಿದೆ. ಕಾಂಗ್ರೆಸ್ ಪಕ್ಷ ಗುಜ್ಜಲ್ ನಾಗರಾಜ ಅಥವಾ ಜೆ ಎನ್ ಗಣೇಶ್‌ಗೆ ಟಿಕೆಟ್ ಕೊಡಬಹುದು. ಹೀಗಾಗಿ ಕಾಂಗ್ರೆಸ್ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ನಡೆಯುವ ಸಾಧ್ಯತೆಯಿದೆ. [ಮುಂದಿನ ಕ್ಷೇತ್ರ : ಸಂಡೂರು]

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
Bellary district latest updates. It's going to be battle of royals in Bellary. Though money plays a major role in the land of mining lords, whoever plays the caste card well will be victorious, ultimately. Bellary constituencies have garnered lots of importance as many are fighting for Congress tickets.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X