ಕಾಂಗ್ರೆಸ್ ಗೆಲ್ಲಿಸಿದ್ದು ಮಾಧ್ಯಮಗಳು : ಎಚ್ಡಿಕೆ ಕಿಡಿ

 Kumarswamy
ಬೆಂಗಳೂರು, ಮೇ 8 : "ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿಲ್ಲ ಇದು ಮಾಧ್ಯಮಗಳ ಗೆಲುವು". ಮಾಧ್ಯಮಗಳು ಸಮೀಕ್ಷೆಗಳನ್ನು ಕಾಂಗ್ರೆಸ್ ಪರವಾಗಿ ನಡೆಸಿ ಜನರ ಮೇಲೆ ಪ್ರಭಾವ ಬೀರಿದವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚುನಾವಣಾ ಫಲಿತಾಂಶದ ನಂತರ ಮೊದಲ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಮಾಧ್ಯಮಗಳ ವಿರುದ್ಧ ಕಿಡಿಕಾರಿದರು. ಸಮೀಕ್ಷೆಗಳನ್ನು ಕಾಂಗ್ರೆಸ್ ಪರವಾಗಿ ನಡೆಸಿ ಜನರ ಮೇಲೆ ಚುನಾವಣೆಗೆ ಮೊದಲಿನಿಂದಲೂ ಮಾಧ್ಯಮಗಳು ಪ್ರಭಾವ ಬೀರಿದವು. ಇದರಿಂದಾಗಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ.

ಆದ್ದರಿಂದ ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆ ಮಾಡಿ ಜಯಗಳಿಸಿಲ್ಲ. ಮಾಧ್ಯಮಗಳ ಸಮೀಕ್ಷೆಗಳ ಮೂಲಕ ಜನರ ಮೇಲೆ ಪ್ರಭಾವ ಬೀರಿ ಜಯಗಳಿಸಿದ್ದಾರೆ ಎಂದು ಅವರು ದೂರಿದರು. ಕಾಂಗ್ರೆಸ್ ಪಕ್ಷದೊಂದಿಗೆ ಅಧಿಕಾರಕ್ಕಾಗಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ರಾಜ್ಯದ ರಾಜಕರಾರಣದಲ್ಲೇ ಸಕ್ರಿಯವಾಗಿ ಮುಂದುವರೆಯುತ್ತೇನೆ ಎಂದು ಹೇಳಿದ ಅವರು, ಸಂಸದ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಕುಮಾರಸ್ವಾಮಿಗೆ ಭರ್ಜರಿ ಗೆಲುವು

ರಾಮನಗರ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ 15 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಈಗಾಗಲೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+