ಕ್ಷೇತ್ರ ಪರಿಚಯ : ಅರಭಾವಿ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ ಜಿಲ್ಲೆಯ ವಿಧಾನಸಭಾ ಕ್ಷೇತ್ರ ಅರಭಾವಿ. ವಿವಿಧ ಸಂಸ್ಕೃತಿಗಳ ಪ್ರಭಾವ ಈ ಕ್ಷೇತ್ರದ ಮೇಲಿದೆ. ಕನ್ನಡದ ಮುಖ್ಯ ಭಾಷೆಯಾದರೂ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತವಾದ ಕನ್ನಡವನ್ನು ಇಲ್ಲಿನ ಜನರು ಮಾತನಾಡುತ್ತಾರೆ.

ಗೋಧಿ, ಅಕ್ಕಿ, ಮೆಕ್ಕೆ ಜೋಳ, ಬೇಳೆಕಾಳುಗಳನ್ನು ಕ್ಷೇತ್ರದಲ್ಲಿ ಬೆಳೆಯಲಾಗುತ್ತದೆ. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಕ್ಷೇತ್ರದ ಜನಸಂಖ್ಯೆ 1,99,538.

ಕ್ಷೇತ್ರ ಪರಿಚಯ: ಬೆಳಗಾವಿ ಉತ್ತರದ ಗದ್ದುಗೆ ಯಾರ ಪಾಲಿಗೆ?

ರಾಜಕೀಯವಾಗಿ ಅರಭಾವಿ ಕ್ಷೇತ್ರ ಜಾರಕಿಹೊಳಿ ಕುಟುಂಬದ ಭದ್ರಕೋಟೆ. ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಕ್ಷೇತ್ರದ ಹಾಲಿ ಶಾಸಕರು. ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ 8 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವಷ್ಟು ಪ್ರಭಾವವನ್ನು ಹೊಂದಿದ್ದಾರೆ.

Karnataka assembly election 2018 : Arabhavi constituency profile

ಮೂಡಲಗಿ ತಾಲೂಕು ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಯಿಂದಾಗಿ ಬಾಲಚಂದ್ರ ಜಾರಕಿಹೊಳಿ ಅವರ ಹಿಡಿತ ಸ್ವಲ್ಪ ಸಡಿಲವಾಗಿದೆ. ಅಲ್ಲದೆ ಗೋಕಾಕ್ ಮತ್ತು ಅರಭಾವಿ ಕ್ಷೇತ್ರದಲ್ಲಿ ಪಕ್ಷಕ್ಕಿಂತ ಮುಖ್ಯವಾಗಿ ಇಲ್ಲಿನ ನಾಯಕರು ತಮ್ಮ ಕುಟುಂಬ ರಾಜಕಾರಣ ಮಾಡುತ್ತಾರೆ.

ಈ ಬಾರಿಯ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಜೊತೆ ಪ್ರಾದೇಶಿಕ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ರೈತರು ಸಹ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ರೈತಸಂಘ ಮತ್ತು ಹಸಿರು ಸೇನೆಯ ಅಭ್ಯರ್ಥಿಗಳು ಸಹ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ

ಕ್ಷೇತ್ರದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಚುನ್ನಪ್ಪ ಪೂಜಾರಿ ಅವರು ಮನೆ-ಮನೆ ಪ್ರಚಾರವನ್ನು ಆರಂಭಿಸಿದ್ದಾರೆ. ಒಂದು ನೋಟು ಒಂದು ವೋಟು ಎಂದು ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದಾರೆ. ರೈತ ಮುಖಂಡರಿಗೆ ಜನರು ಹಣದ ಜೊತೆ ರೊಟ್ಟಿ ಸಹ ನೀಡುತ್ತಿದ್ದಾರೆ.

2013ರ ಚುನಾವಣೆಯಲ್ಲಿ ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಅವರು 99,283 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ಉಟಗಿ ರಾಮಪ್ಪ ಕಾರೆಪ್ಪ ಅವರು 24,062 ಮತ, ಜೆಡಿಎಸ್‌ ಪಕ್ಷದ ಗುರಪ್ಪ ಕಲ್ಲಪ್ಪ ಹಿಟ್ಟಣಗಿ ಅವರು 3,081 ಮತಗಳನ್ನು ಪಡೆದಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Assembly Election 2018 : Read all about Arabhavi assembly constituency of Belagavi district. Get election news from Arabhavi. Know about candidates list, election results during Karnataka elections.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ