Jan Ki Baat ಚುನಾವಣೋತ್ತರ ಸಮೀಕ್ಷೆ, ಬಿಜೆಪಿಗೆ 114 ಸೀಟು
ಬೆಂಗಳೂರು, ಮೇ 12 : ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಶನಿವಾರ ರಾಜ್ಯದ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಮತದಾನ ನಡೆಯಿತು. ಸದ್ಯದ ಮಾಹಿತಿ ಪ್ರಕಾರ ಶೇ 70ರಷ್ಟು ಮತದಾನ ನಡೆದಿದೆ.
Jan Ki Baat ಚುನಾವಣೋತ್ತರ ಸಮೀಕ್ಷೆ ನಡೆಸಿದೆ. ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಂಡ ಬಳಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಸಮೀಕ್ಷೆ ಪ್ರಕಾರ ಬಿಜೆಪಿ 95-114 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು, ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷ 73-82 ಸ್ಥಾನಗಳಲ್ಲಿ ಜಯಗಳಿಸಲಿದೆ. ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು 113 ಸೀಟುಗಳು ಸಾಕು. ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಬಿಜೆಪಿ ಸರ್ಕಾರ ರಚನೆಗೆ ಬೇಕಾದ ಬಹುಮತವನ್ನು ಪಡೆಯಲಿದೆ.
ಸಮೀಕ್ಷೆಯ ವರದಿ ಪ್ರಕಾರ ಬಿಜೆಪಿ 95-114, ಕಾಂಗ್ರೆಸ್ 73-82, ಜೆಡಿಎಸ್ 32-43, ಇತರೆ 2-3 ಸ್ಥಾನಗಳಲ್ಲಿ ಜಯಗಳಿಸಲಿವೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮೇ 15ರ ಮಂಗಳವಾರ ನಡೆಯಲಿದೆ. ಬೆಂಗಳೂರಿನ ಜಯನಗರ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಇನ್ನೂ ಬಾಕಿ ಇದೆ.

ಜನ್ ಕಿ ಬಾತ್ ಸಮೀಕ್ಷೆ
ಕರ್ನಾಟಕದ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಶನಿವಾರ ಮತದಾನ ನಡೆದಿದೆ. ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಬಿಜೆಪಿ 114 ಸ್ಥಾನಗಳಲ್ಲಿ ಜಯಗಳಿಸಲಿದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.
ಚುನಾವಣೆಗೂ ಮೊದಲು ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿತ್ತು. ಆದರೆ, ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ 95-114 ಸ್ಥಾನಗಳಲ್ಲಿ ಜಯಗಳಿಸಲಿದೆ.
ಆಡಳಿತಾರೂಢ ಕಾಂಗ್ರೆಸ್ 73-82 ಸ್ಥಾನಗಳಲ್ಲಿ ಜಯಗಳಿಸಲಿದೆ. ಜೆಡಿಎಸ್ 32-43 ಕ್ಷೇತ್ರ, ಪಕ್ಷೇತರ ಅಭ್ಯರ್ಥಿಗಳು 2-3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.

ಮ್ಯಾಜಿಕ್ ನಂಬರ್ ಪಡೆದ ಬಿಜೆಪಿ
ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ ಬಿಜೆಪಿ 95-114 ಸ್ಥಾನಗಳಲ್ಲಿ ಜಯಗಳಿಸಲಿದೆ. ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 113. ಬಿಜೆಪಿ ಮ್ಯಾಜಿಕ್ ನಂಬರ್‌ಗಿಂತ 1 ಸ್ಥಾನ ಹೆಚ್ಚಿಗೆ ಗೆಲ್ಲಲಿದೆ.
ಬಿಜೆಪಿ ಕರ್ನಾಟಕದ 224 ಕ್ಷೇತ್ರಗಳ ಪೈಕಿ 150 ಸ್ಥಾನದಲ್ಲಿ ಜಯಗಳಿಸುವ ಗುರಿ ಹೊಂದಿತ್ತು. ಇದಕ್ಕಾಗಿ ಮಿಷನ್ 150 ಎಂಬ ಘೋಷಣೆ ಮಾಡಿತ್ತು.
ಚುನಾವಣೋತ್ತರ ಸಮೀಕ್ಷೆ ಪ್ರಕಾರ 95-114 ಸ್ಥಾನಗಳಲ್ಲಿ ಮಾತ್ರ ಜಯಗಳಿಸಲಿದೆ. ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೂ ನಿರೀಕ್ಷಿತ ಗೆಲುವು ಸಿಗುವುದಿಲ್ಲ.

ಜೆಡಿಎಸ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ?
ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷ 73-82 ಸ್ಥಾನಗಳಲ್ಲಿ ಜಯಗಳಿಸಲಿದೆ. ಒಂದು ವೇಳೆ ಮೈತ್ರಿ ಸರ್ಕಾರ ರಚನೆಯಾಗುವ ಸಂದರ್ಭ ಬಂದರೆ ಜೆಡಿಎಸ್ ಪಕ್ಷದ ಬೆಂಬಲ ಪಡೆಯುವುದು ಅನಿವಾರ್ಯವಾಗಲಿದೆ.
ಜೆಡಿಎಸ್ 32-43 ಸ್ಥಾನಗಳಲ್ಲಿ ಜಯಗಳಿಸಲಿದೆ. ಪಕ್ಷೇತರ ಅಭ್ಯರ್ಥಿಗಳು 2-3 ಸ್ಥಾನಗಳಲ್ಲಿ ಮಾತ್ರ ಜಯಗಳಿಸಲಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಬಿಜೆಪಿಗೆ ಶೇ 38.25ರಷ್ಟು ಮತಗಳಿಕೆ
ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ 38.25ರಷ್ಟು ಮತಗಳನ್ನು ಪಡೆಯಲಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಬಿಜೆಪಿ ಸರಳ ಬಹುಮತ ಪಡೆಯಲಿದೆ.
ಆಡಳಿತಾರೂಡ ಕಾಂಗ್ರೆಸ್ ಪಕ್ಷ 36.5 ರಷ್ಟು ಮತಗಳನ್ನು ಪಡೆಯಲಿದೆ. ಜೆಡಿಎಸ್ 22.5 ರಷ್ಟು ಮತಗಳನ್ನು ಪಡೆಯಲಿದೆ ಮತ್ತು ಇತರ ಅಭ್ಯರ್ಥಿಗಳು 2.75 ರಷ್ಟು ಮತಗಳನ್ನು ಪಡೆಯಲಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications