ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಕಣದಲ್ಲಿ 80ಪ್ಲಸ್ ವಯಸ್ಸಿನ ಐವರು ಅಭ್ಯರ್ಥಿಗಳು

By Mahesh
|
Google Oneindia Kannada News

ಬೆಂಗಳೂರು, ಏಪ್ರಿಲ್ 26: ಕರ್ನಾಟಕ ವಿಧಾನಸಭಾ ಚುನಾವಣಾ ಕಣದಲ್ಲಿ ಐವರು ಅಭ್ಯರ್ಥಿಗಳು 80ಪ್ಲಸ್ ವಯೋಮಿತಿ ಹೊಂದಿದ್ದಾರೆ. 80 ರಿಂದ 90 ವರ್ಷದೊಳಗಿನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಐವರು ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್‌ನಿಂದ ಮೂವರು ಮತ್ತು ಬಿಜೆಪಿ, ಜೆಡಿಎಸ್‌ನಿಂದ ತಲಾ ಒಬ್ಬರು ಹಿರಿಯ ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದಾರೆ.

ಶಿವಮೊಗ್ಗದ ಸಾಗರದಿಂದ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ಸಿನ ಹಿರಿಯ ಮುಖಂಡ 87 ವರ್ಷ ವಯಸ್ಸಿನ ಕಾಗೋಡು ತಿಮ್ಮಪ್ಪ ಅವರು ಈ ಬಾರಿ ಸ್ಪರ್ಧೆಯಲ್ಲಿರುವ ಅತ್ಯಂತ ಹಿರಿಯ ಅಭ್ಯರ್ಥಿಯಾಗಿದ್ದಾರೆ.

Karnataka Assembly Elections 2018 : Five 80 Plus aged Candidates in the election fray

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ಸಿನ ಶಾಮನೂರು ಶಿವಶಂಕರಪ್ಪ (86) ಎರಡನೇ ಹಿರಿಯ ಅಭ್ಯರ್ಥಿಯಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾದಗಿರಿಯಿಂದ ನಾಮಪತ್ರ ಸಲ್ಲಿಸಿರುವ ಡಾ ಎ.ಬಿ.ಮಾಲಕರೆಡ್ಡಿ (82), ಹಾವೇರಿ ಹಾನಗಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಬಿಜೆಪಿಯ ಸಿ.ಎಂ. ಉದಾಸಿ (82), ವಿಜಯಪುರದ ಸಿಂದಗಿಯಿಂದ ನಾಮಪತ್ರ ಸಲ್ಲಿಸಿರುವ ಜೆಡಿಎಸ್‌ನ ಮಲ್ಲಪ್ಪ ಚನ್ನವೀರಪ್ಪ ಮನಗೊಳಿ (82) ಅವರು ಮತ್ತೊಬ್ಬ ಹಿರಿಯ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ಸಿನಲ್ಲಿ ವಯಸ್ಸಿನ ಆಧಾರದ ಮೇಲೆ ಅನೇಕರಿಗೆ ಈ ಬಾರಿ ಟಿಕೆಟ್ ತಪ್ಪಿದೆ.

English summary
Karnataka Assembly Elections 2018 : Five 80 Plus aged Candidates in the election fray.Senior Congressman, Sagara constituency candidate Kagodu Thimmappa(87) is the oldest candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X