ಕೊರಟಗೆರೆ ಕ್ಷೇತ್ರದಲ್ಲಿ ಲಕ್ಷ್ಮಿದೇವಿ ದೇವಾಲಯ ಫೇಮಸ್, ಸೌಕರ್ಯ ಮೈನಸ್
ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿನ ಕೊರಟಗೆರೆ ವಿಧಾನಸಭೆ ಕ್ಷೇತ್ರ ತುಂಬ ಚಿಕ್ಕ ಕ್ಷೇತ್ರ. ಇಲ್ಲಿನ ಶಾಸಕರು ಜೆಡಿಎಸ್ ನ ಸುಧಾಕರ್ ಲಾಲ್. ಕಳೆದ ವಿಧಾನಸಭೆ ಚುನಾವಣೆ ನಂತರ ಇಡೀ ಕರ್ನಾಟಕದಲ್ಲಿ ಖ್ಯಾತಿ ಪಡೆದವರು ಈ ಸುಧಾಕರ್ ಲಾಲ್. ಅದಕ್ಕೆ ಕಾರಣ ಏನೆಂದರೆ, ಕೆಪಿಸಿಸಿ ಅಧ್ಯಕ್ಷ- ಮುಖ್ಯಮಂತ್ರಿ ಸ್ಥಾನದ ರೇಸಿನಲ್ಲಿದ್ದ ಡಾ.ಜಿ.ಪರಮೇಶ್ವರ ಅವರನ್ನೇ ಸೋಲಿಸಿಬಿಟ್ಟರು.
ಆದರೆ, ಸುಧಾಕರ್ ಲಾಲ್ ಜನರ ಕೈಗೆ ಸಿಗುತ್ತಾರೆ ಎಂಬ ಮಾತಿದ್ದರೂ ಕ್ಷೇತ್ರದಲ್ಲಿ ಅಂಥ ಅಭಿವೃದ್ಧಿ ಕೆಲಸ ಆಗಿಲ್ಲ ಎಂಬ ಅಸಮಾಧಾನ ಇದೆ. ಇನ್ನು ಈ ಬಾರಿಯೂ ಜೆಡಿಎಸ್ ನಿಂದ ಸುಧಾಕರ್ ಲಾಲ್ ಹಾಗೂ ಕಾಂಗ್ರೆಸ್ ನಿಂದ ಪರಮೇಶ್ವರ್ ಅಭ್ಯರ್ಥಿ. ಬಿಜೆಪಿಯಿಂದ ವೈ.ಎಚ್.ಹುಚ್ಚಯ್ಯ ಕಣದಲ್ಲಿದ್ದಾರೆ.
ಇನ್ನು ಜೆಡಿಎಸ್ ನೊಳಗೆ ಸುಧಾಕರ್ ಬಗ್ಗೆ ಅಸಮಾಧಾನ ಇದೆ ಎಂಬ ಮಾತುಗಳಿವೆ. ಜೆಡಿಎಸ್ ಜಿಲ್ಲಾಧ್ಯಕ್ಷ ಚೆನ್ನಿಗಪ್ಪ ಅವರಿಗೆ ಈ ಕ್ಷೇತ್ರದ ಮೇಲೆ ಹೆಚ್ಚಿನ ಹಿಡಿತವಿದೆ. ಕೊರಟಗೆರೆ ಜಿಲ್ಲಾ ಕೇಂದ್ರಕ್ಕೆ ಹತ್ತಿರವಿದ್ದರೂ ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದಿಗೂ ಸಂಚಾರ ಸಮಸ್ಯೆಯಿದೆ.

ವಿದ್ಯಾರ್ಥಿಗಳು, ಕೃಷಿಕರು ತುಮಕೂರು ನಗರಕ್ಕೆ ಬರಬೇಕು ಅಂದರೆ ನಿತ್ಯವೂ ಪರದಾಡುವಂಥ ಸ್ಥಿತಿ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿಗೆ ಅಂಥ ಪ್ರಾಬಲ್ಯವಿಲ್ಲ. ಆದರೆ ಈ ಬಾರಿ ಕುತೂಹಲ ಇರುವುದು ಜೆಡಿಎಸ್ ವರ್ಸಸ್ ಕಾಂಗ್ರೆಸ್ ಅಂತಲೇ. ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನ ಬರುವುದು ಇದೇ ತಾಲೂಕು ವ್ಯಾಪ್ತಿಯಲ್ಲಿ.
ಡಾ.ಜಿ.ಪರಮೇಶ್ವರ್ ಈ ಸಲ ಗ್ರಾಮ ವಾಸ್ತವ್ಯ ಕೂಡ ಮಾಡಿದ್ದಾರೆ. ಆದರೆ ಅವರ ಬಗ್ಗೆ ಕ್ಷೇತ್ರದ ಜನತೆಗೆ ಪೂರ್ಣ ಪ್ರಮಾಣದಲ್ಲಿ ನಂಬಿಕೆ ಬಂದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಮುನಿಸಿಕೊಂಡ ಪರಮೇಶ್ವರ್ ಬಹಳ ಕಾಲ ಇತ್ತ ತಿರುಗಿ ಕೂಡ ನೋಡಿರಲಿಲ್ಲ. ಆ ಕಾರಣಕ್ಕೆ ಜನರಿಗೆ ಅವರ ಬಗ್ಗೆ ಇನ್ನೂ ಗುಮಾನಿ ಇದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ ಲಾಲ್ ವಿರುದ್ಧ ಗೆಲುವು ಸಾಧಿಸಿದ್ದು ಹದಿನೆಂಟು ಸಾವಿರ ಮತಗಳ ಅಂತರದಲ್ಲಿ. ಈ ಬಾರಿ ಆ ಪ್ರಮಾಣದ ಮತಗಳನ್ನು ತಮ್ಮ ಕಡೆಗೆ ಸೆಳೆಯುವಲ್ಲಿ ಪರಮೇಶ್ವರ್ ಸಫಲರಾಗುತ್ತಾರಾ ಎಂಬ ಪ್ರಶ್ನೆ ಕೂಡ ಇದೆ.
ರಾಜಕಾರಣದ ವಿಚಾರ ಏನೇ ಇರಬಹುದು. ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳು ಸಾಕಷ್ಟಿವೆ. ಮಾನವ -ಪ್ರಾಣಿ ಸಂಘರ್ಷದ ಸಮಸ್ಯೆಯಿದೆ. ಕ್ಷೇತ್ರದ ಕೆಲವು ಕಡೆ ಕರಡಿ ದಾಳಿ ಪ್ರಕರಣಗಳು ವರದಿಯಾಗಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications