ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ವಿಧಾನಸಭೆ ಚುನಾವಣೆ : ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪಟ್ಟಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 02 : ಕರ್ನಾಟಕದ ವಿಧಾನಸಭೆ ಚುನಾವಣೆಗೆ ಸಮಾಜವಾದಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, 21 ಕ್ಷೇತ್ರದಲ್ಲಿ ಪಕ್ಷ ಸ್ಪರ್ಧಿಸುವ ಸಾಧ್ಯತೆ ಇದೆ.

ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಬಿನ್ ಮ್ಯಾಥ್ಯೂಸ್ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 'ಪಕ್ಷಕ್ಕೆ ಹೆಚ್ಚಿನ ಜನ ಬೆಂಬಲವಿರುವ ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ' ಎಂದು ಹೇಳಿದ್ದಾರೆ.

ಸಿಪಿಐಎಂ ಅಭ್ಯರ್ಥಿಗಳ ಪಟ್ಟಿಸಿಪಿಐಎಂ ಅಭ್ಯರ್ಥಿಗಳ ಪಟ್ಟಿ

'ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳು ಆಹ್ವಾನ ನೀಡಿವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಈ ಕುರಿತು ನಿರ್ಧಾರವನ್ನು ಕೈಗೊಳ್ಳುತ್ತಾರೆ' ಎಂದು ರಾಬಿನ್ ಮ್ಯಾಥ್ಯೂಸ್ ತಿಳಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

Karnataka assembly elections 2018 : Samajwadi Party candidates list

2013ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಕರ್ನಾಟಕದಲ್ಲಿ ಒಂದು ಸ್ಥಾನದಲ್ಲಿ ಜಯಗಳಿಸಿತ್ತು. ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿ.ಪಿ.ಯೋಗೇಶ್ವರ ಅವರು ಜಯಗಳಿಸಿದ್ದರು. ನಂತರ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು, ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ್ದಾರೆ.

ಅಭ್ಯರ್ಥಿಗಳ ಪಟ್ಟಿ

* ಶಿಲ್ಪಶ್ರೀ ಗೌಡ (ಚನ್ನಪಟ್ಟಣ), (ರಾಮನಗರ)
* ಮಡಿಕೇರಿ (ಕಿಶನ್ ಉತ್ತಪ್ಪ), (ಮಡಿಕೇರಿ)
* ರಮೇಶ್ ನಾಯ್ಕ್, (ಪಾವಗಡ), (ತುಮಕೂರು)
* ಎಸ್.ವಿ.ರಾಘವೇಂದ್ರ (ಮಧುಗಿರಿ), (ತುಮಕೂರು)
* ಕೃಷ್ಣಪ್ಪ (ತುರುವೇಕರೆ), (ತುಮಕೂರು)
* ಮಂಜಪ್ಪ ಯಾದವ್ (ಹಿರಿಯೂರು), (ಚಿತ್ರದುರ್ಗ)
* ಎಸ್.ಮಿತ್ಯಾ ನಾಯ್ಕ್ (ಹೊಳಲ್ಕೆರೆ), (ಚಿತ್ರದುರ್ಗ)
* ಬಿ.ಜುಮರಿ (ಬಳ್ಳಾರಿ), (ಬಳ್ಳಾರಿ)
* ಚೆನ್ನನಾಯ್ಕ್ (ಹರಪನಹಳ್ಳಿ)
* ಎಂ.ಮಹದೇವಸ್ವಾಮಿ ಚಿದರವಳ್ಳಿ (ಟಿ.ನರಸೀಪುರ), (ಮೈಸೂರು).ರ

English summary
Samajwadi Party announced candidates name for 2018 Karnataka assembly elections. Election will be held on May 12 and result will be announced on May 12, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X