ಕರ್ನಾಟಕ ಚುನಾವಣೆ : ಸ್ವರಾಜ್ ಇಂಡಿಯಾ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು, ಏಪ್ರಿಲ್ 05 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ವರಾಜ್ ಇಂಡಿಯಾ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ಮೇಲುಕೋಟೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಸ್ವರಾಜ್ ಇಂಡಿಯಾ ಪಕ್ಷದ ಸಂಸ್ಥಾಪಕ ಯೋಗೇಂದ್ರ ಯಾದವ್ ಅವರು 6 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 12ರಂದು ಪಕ್ಷ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.
ಕರ್ನಾಟಕದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡು ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರಾಗಿ ಚಾಮರಸ ಮಾಲಿ ಪಾಟೀಲ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಚುಕ್ಕಿ ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ನೇಮಕ ಮಾಡಲಾಗಿದೆ.

ಅಭ್ಯರ್ಥಿಗಳ ಪಟ್ಟಿ
* ಮೇಲುಕೋಟೆ : ದರ್ಶನ್ ಪುಟ್ಟಣ್ಣಯ್ಯ (ಮಂಡ್ಯ)
* ಮದ್ದೂರು : ಎಸ್.ಎಚ್.ನಿಂಗೇಗೌಡ (ಮಂಡ್ಯ)
* ಯಾದಗಿರಿ : ವಿದ್ಯನಾಥ ಪಾಟೀಲ (ಯಾದಗಿರಿ)
* ಮಹದೇವಪುರ : ರಮೇಶ್ ಚಂದ್ರ (ಬೆಂಗಳೂರು ನಗರ)
* ಚಳ್ಳಕೆರೆ : ಕೆ.ಪಿ.ಭೂತಯ್ಯ (ಚಿತ್ರದುರ್ಗ)
* ಹನೂರು : ಶೈಲೇಂದ್ರ (ಚಾಮರಾಜನಗರ)












Click it and Unblock the Notifications