ಸಚಿವ ಸಂಪುಟ ರಚನೆ: ಇಂದು ಅಂತಿಮ ನಿರ್ಧಾರ
Recommended Video

H D Kumaraswamy Cabinet Expansion 2018 : ಇಂದು ಸರ್ಕಾರದಿಂದ ಅಂತಿಮ ನಿರ್ಧಾರ | oneindia Kannada
ಬೆಂಗಳೂರು, ಜೂನ್ 01: ಸಂಪುಟ ರಚನೆಗೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಅಂತಿಮ ನಿರ್ಧಾರ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳೂ ಜಂಟಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪಾಲ್ಗೊಳ್ಳಬೇಕಿದ್ದ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಇದೇ ಸಂದರ್ಭದಲ್ಲಿ ರಾಜ್ಯಪಾಲರನ್ನು ಭೇಟಿಯಾಗಲು ನಿರ್ಧರಿಸಿರುವ ಕುಮಾರಸ್ವಾಮಿ, ಅವರ ಬಳಿ ಸಮಯಾವಕಾಶ ಕೇಳಿದ್ದಾರೆ.

ಹಣಕಾಸು ಮಂತ್ರಿ ಸಚಿವ ಸ್ಥಾನ ಮತ್ತು ಗೃಹ ಸಚಿವ ಸ್ಥಾನಗಳ ಕುರಿತಂತೆ ಉಭಯ ಪಕ್ಷಗಳಲ್ಲಿ ಒಮ್ಮತ ಮೂಡದ ಕಾರಣ ಸಚಿವ ಸಂಪುಟ ರಚನೆ ಪ್ರಕ್ರಿಯೆಯನ್ನು ಮುಂದೂಡುತ್ತಲೇ ಬರಲಾಗಿತ್ತು. ಮೇ 23 ರಂದೇ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದರೂ, ಮಂತ್ರಿಮಂಡಲ ರಚನೆ ಮಾತ್ರ ಇನ್ನೂ ಸಾಧ್ಯವಾಗಿರಲಿಲ್ಲ.
ಈ ಕುರಿತು ಇಂದು ಅಂತಿಮ ನಿರ್ಧಾರ ಹೊರಬೀಳುವ ವೆಲ್ಲಾ ಸಾಧ್ಯತೆಗಳು ನಿಚ್ಛಳವಾಗಿವೆ.












Click it and Unblock the Notifications