ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಹೊಸ ಬಾಂಬ್ ಎಸೆದ ಹಿಟ್ನಾಳ್
ಬೆಂಗಳೂರು, ಜೂನ್ 01: "ನಾನೂ ಸಚಿವ ಸ್ಥಾನದ ಆಕಾಂಕ್ಷಿ. ನನ್ನನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ" ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ದುಂಬಾಲು ಬಿದ್ದಿದ್ದಾರೆ.
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ನಡೆಯುತ್ತಿರುವ ಹೊತ್ತಲ್ಲಿ ಒಬ್ಬೊಬ್ಬರೇ ಶಾಸಕರು, 'ತಾವೂ ಸಚಿವ ಸ್ಥಾನದ ಆಕಾಂಕ್ಷಿ' ಎಂದು ಧ್ವನಿ ಎತ್ತುತ್ತಿರುವುದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ತಲೆನೋವಾಗಿದೆ.
ಇದೀಗ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರು 98783 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ಅಮರೇಶ್ ಸಂಗಣ್ಣ ಕರಡಿ(72432) ಅವರನ್ನು ಸೋಲಿಸಿದ್ದರು.

ಸಚಿವ ಸಂಪುಟ ರಚನೆ ಕುರಿತಂತೆ ಇಂದು ಮೈತ್ರ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸುವುದು ಬಹುತೇಕ ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ಉಭಯ ಪಕ್ಷಗಳೂ ಜಂಟಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.












Click it and Unblock the Notifications