ಬೆಳಗಾವಿ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ
ಬೆಳಗಾವಿ, ಮಾರ್ಚ್ 22 : ರಾಜ್ಯದಲ್ಲಿಯೇ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಬೆಳಗಾವಿ. ಜೆಡಿಎಸ್ ಬೆಳಗಾವಿಯ 4 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಕರ್ನಾಟಕ ಜೆಡಿಎಸ್ 2018ರ ವಿಧಾನಸಭೆ ಚುನಾವಣೆಗೆ 126 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.
ಬೆಳಗಾವಿಯ ಅಥಣಿ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ರಾಮದುರ್ಗ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 2013ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿರಲಿಲ್ಲ.
ನಿಪ್ಪಾಣಿ, ಚಿಕ್ಕೋಡಿ-ಸದಲಗಾ, ಕಾಗವಾಡ, ಕುಡಚಿ, ರಾಯಭಾಗ, ಹುಕ್ಕೇರಿ, ಅರಭಾವಿ, ಗೋಕಾಕ, ಯಮಕನಮರಡಿ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಖಾನಾಪುರ, ಕಿತ್ತೂರು, ಸವದತ್ತಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನೂ ಅಂತಿಮಗೊಳಿಸಬೇಕಾಗಿದೆ.
ಅಥಣಿ ಕ್ಷೇತ್ರಕ್ಕೆ ಗಿರೀಶ್ ಭೂತಾಳೆ, ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಶಿವನಗೌಡ ಪಾಟೀಲ್, ಬೈಲಹೊಂಗಲ ಕ್ಷೇತ್ರಕ್ಕೆ ಶಂಕರ ಮಾಳಗಿ ಮತ್ತು ರಾಮದುರ್ಗ ಕ್ಷೇತ್ರಕ್ಕೆ ಜಾವೆದ್ ಅಭ್ಯರ್ಥಿಯಾಗಿದ್ದಾರೆ. ಅಭ್ಯರ್ಥಿಗಳ ಪರಿಚಯ ಇಲ್ಲಿದೆ...

ಅಥಣಿ ಕ್ಷೇತ್ರ
ಅಥಣಿ ಕ್ಷೇತ್ರಕ್ಕೆ ಗಿರೀಶ್ ಭೂತಾಳೆ ಅವರನ್ನು ಅಭ್ಯರ್ಥಿ ಎಂದು ಜೆಡಿಎಸ್ ಘೋಷಣೆ ಮಾಡಿದೆ. 2013ರ ಚುನಾವಣೆಯಲ್ಲಿ ಸದಾಶಿವ ಕೇದಾರಿ ಭೂತಾಳೆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 15,204 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ.

ಶಿವನಗೌಡ ಪಾಟೀಲ್
ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಶಿವನಗೌಡ ಪಾಟೀಲ್ ಅಭ್ಯರ್ಥಿ ಎಂದು ಜೆಡಿಎಸ್ ಪಕ್ಷ ಘೋಷಣೆ ಮಾಡಿದೆ. ಈ ಕ್ಷೇತ್ರದಲ್ಲಿಯೂ ಪಕ್ಷ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಕಳೆದ ಬಾರಿ ಕ್ಷೇತ್ರದಿಂದ ಅಶೋಕ್ ಬಿ.ಗೋವೇಕರ್ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕೇವಲ 1837 ಮತಗಳನ್ನು ಪಡೆದು 7ನೇ ಸ್ಥಾನ ಗಳಿಸಿದ್ದರು.

ಬೈಲಹೊಂಗಲ
ಬೈಲಹೊಂಗಲ ಕ್ಷೇತ್ರಕ್ಕೆ ಶಂಕರ ಮಾಳಗಿ ಅವರನ್ನು ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿದೆ. 2013ರ ಚುನಾವಣೆಯಲ್ಲಿ ಸೋತ ಶಂಕರ ಮಾಳಗಿ ಅವರಿಗೆ ಪುನಃ ಟಿಕೆಟ್ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಇವರು 9,475 ಮತಗಳನ್ನು ಪಡೆದು 4ನೇ ಸ್ಥಾನ ಪಡೆದಿದ್ದರು.

ಜಾವೇದ್
ರಾಮದುರ್ಗ ಕ್ಷೇತ್ರಕ್ಕೆ ಎಂ.ಜಾವೇದ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ರಾಮದುರ್ಗ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. 2013ರ ಚುನಾವಣೆಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಪಿ.ಎಫ್.ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿತ್ತು, 17,303 ಮತಗಳನ್ನು ಪಡೆದು ಅವರು 3ನೇ ಸ್ಥಾನ ಪಡೆದಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications