ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ

|
Google Oneindia Kannada News

ಧಾರವಾಡ, ಮಾರ್ಚ್ 21 : ಕರ್ನಾಟಕ ಜೆಡಿಎಸ್‌ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಧಾರವಾಡ ಜಿಲ್ಲೆಯ 3ಕ್ಷೇತ್ರಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಧಾರವಾಡ ಜಿಲ್ಲೆಯಲ್ಲಿ 7 ವಿಧಾನಸಭೆ ಕ್ಷೇತ್ರಗಳಿವೆ.ಇವುಗಳ ಪೈಕಿ ನವಲಗುಂದ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್, ಕುಂದಗೋಳ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ಜೆಡಿಎಸ್‌ ಅಭ್ಯರ್ಥಿಗಳ ಪರಿಚಯಹಾವೇರಿ ಜಿಲ್ಲೆಯ ಜೆಡಿಎಸ್‌ ಅಭ್ಯರ್ಥಿಗಳ ಪರಿಚಯ

ಧಾರವಾಡ ಜಿಲ್ಲೆಯಲ್ಲಿ ನವಲಗುಂದ, ಕುಂದಗೋಳ, ಧಾರವಾಡ, ಹುಬ್ಬಳ್ಳಿ-ಧಾರವಾಡ ಪೂರ್ವ, ಹುಬ್ಬಳ್ಳಿ-ಧಾರವಾಡ ಕೇಂದ್ರ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಮತ್ತು ಕಲಘಟಗಿ ಕ್ಷೇತ್ರಗಳಿವೆ.

kona reddy

ನವಲಗುಂದ : ನವಲಗುಂದ ಕ್ಷೇತ್ರಕ್ಕೆ ಹಾಲಿ ಶಾಸಕ ಎನ್.ಎಚ್.ಕೋನರೆಡ್ಡಿ ಅವರು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. 2013ರ ಚುನಾವಣೆಯಲ್ಲಿ ಅವರು 44,448 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಳಸಾ ಬಂಡೂರಿ ಹೋರಾಟದಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಜೆಡಿಎಸ್ ಪಕ್ಷದ ಉತ್ತರ ಕರ್ನಾಟಕ ಭಾಗದ ಪ್ರಮುಖ ನಾಯಕರು ಹೌದು.

ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ರಾಜಣ್ಣ ಕೊರವಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ತಬ್ರೇಜ್ ಶಂಶಿ ಸ್ಪರ್ಧಿಸಿದ್ದರು ಮತ್ತು 7,898 ಮತಗಳನ್ನು ಪಡೆದಿದ್ದರು. ಈ ಬಾರಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ. ಈ ಕ್ಷೇತ್ರದ ಹಾಲಿ ಶಾಸಕರು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್.

ಕುಂದಗೋಳ : ಕುಂದಗೋಳ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಅಕ್ಕಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿಯೂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 15,613 ಮತಗಳನ್ನು ಪಡೆದಿದ್ದರು.

English summary
JD(S) announced 3 candidates name for Dharwad district for 2018 Karnataka assembly elections out of 7 assembly constituency. Here are the brief profile of the candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X