ಹಾವೇರಿ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ
ಹಾವೇರಿ, ಮಾರ್ಚ್ 20 : ಜೆಡಿಎಸ್ 2018ರ ವಿಧಾನಸಭೆ ಚುನಾವಣೆಗೆ 126 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಈ ಪೈಕಿ ಹಾವೇರಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಹಾನಗಲ್, ಶಿಗ್ಗಾವಿ, ಹಾವೇರಿ, ಬ್ಯಾಡಗಿ, ಹಿರೇಕೆರೂರು ಮತ್ತು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಗಳಿವೆ. ಇವುಗಳ ಪೈಕಿ ಹಿರೇಕೆರೂರು, ರಾಣೆಬೆನ್ನೂರು ಮತ್ತು ಹಾವೇರಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.
ಹಾವೇರಿ ಕ್ಷೇತ್ರಕ್ಕೆ ಸಂಜಯ್ ಡಾಂಗೆ, ಹಿರೇಕೆರೂರು ಕ್ಷೇತ್ರಕ್ಕೆ ಸಿದ್ದಪ್ಪ ಮತ್ತು ರಾಣೆಬೆನ್ನೂರು ಕ್ಷೇತ್ರಕ್ಕೆ ಶ್ರೀಪಾದ್ ಸಾಹುಕಾರ್ ಅಭ್ಯರ್ಥಿಗಳಾಗಿದ್ದಾರೆ.

ಹಾವೇರಿ : ಹಾವೇರಿ ಕ್ಷೇತ್ರಕ್ಕೆ ಸಂಜಯ್ ಡಾಂಗೆ ಅಭ್ಯರ್ಥಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಪರಮೇಶ್ವರ ತಿಪ್ಪಣ್ಣ ಅಭ್ಯರ್ಥಿಯಾಗಿದ್ದರು. 1461 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಬಾರಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ.
ರಾಣೆಬೆನ್ನೂರು : ರಾಣೆಬೆನ್ನೂರು ಕ್ಷೇತ್ರಕ್ಕೆ ಶ್ರೀಪಾದ್ ಸಾಹುಕಾರ್ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ. 2013ರ ಚುನಾವಣೆಯಲ್ಲಿ ಕ್ಷೇತ್ರಕ್ಕೆ ಮಂಜನಾಥ್ ಗೌಡ ಶಿವಣ್ಣನವರ್ ಅಭ್ಯರ್ಥಿಯಾಗಿದ್ದರು. 14,146 ಮತಗಳನ್ನು ಪಡೆದಿದ್ದರು.
ಹಿರೇಕೆರೂರು : ಹಿರೇಕೆರೂರು ಕ್ಷೇತ್ರಕ್ಕೆ ಸಿದ್ದಪ್ಪ ಅವರು ಅಭ್ಯರ್ಥಿಯಾಗಿದ್ದಾರೆ. ಈ ಕ್ಷೇತ್ರದ ಅಭ್ಯರ್ಥಿಯನ್ನು ಪಕ್ಷ ಬದಲಾವಣೆ ಮಾಡಿದೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಧರ್ಮರಾಜ್ ಎಂ.ಸಾಲಿ ಅಭ್ಯರ್ಥಿಯಾಗಿದ್ದರು. 1,885 ಮತಗಳನ್ನು ಪಡೆದಿದ್ದರು.












Click it and Unblock the Notifications