Get Updates
Get notified of breaking news, exclusive insights, and must-see stories!

ಕಲಬುರಗಿ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ

ಕಲಬುರಗಿ, ಮಾರ್ಚ್ 06 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್‌ ಪಕ್ಷ 126 ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕಲಬುರಗಿ ಜಿಲ್ಲೆಯಲ್ಲಿ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

9 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಕಲಬುರಗಿ. ಈ ಪೈಕಿ ಚಿಂಚೋಳಿ, ಕಲಬುರಗಿ ದಕ್ಷಿಣ, ಕಲಬುರಗಿ ಉತ್ತರ, ಆಳಂದ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪಕ್ಷ ಅಂತಿಮಗೊಳಿಸಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಅಫಜಲಪುರ, ಜೇವರ್ಗಿ, ಚಿತ್ತಾಪುರ, ಸೇಡಂ, ಕಲಬುರಗಿ ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಇನ್ನೂ ಘೋಷಣೆ ಮಾಡಬೇಕಿದೆ. ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿರೀಕ್ಷೆ ಇದೆ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಣೆ ಮಾಡಿದ್ದಾರೆ.

2013ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್ 1 ಕ್ಷೇತ್ರದಲ್ಲಿಯೂ ಜಯಗಳಿಸಿಲ್ಲ. ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ಉತ್ಸಾಹದಿಂದ ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲು ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಪ್ರಚಾರ ಆರಂಭಿಸಲಾಗಿದೆ.

ಬಸವರಾಜ ದಿಗ್ಗಾಯಿ

ಬಸವರಾಜ ದಿಗ್ಗಾಯಿ

ಕಲಬುರಗಿ ದಕ್ಷಿಣ ಕ್ಷೇತ್ರಕ್ಕೆ ಬಸವರಾಜ ದಿಗ್ಗಾಯಿ ಜೆಡಿಎಸ್ ಅಭ್ಯರ್ಥಿ. ಕೆಲವು ದಿನಗಳ ಹಿಂದೆ ಬಸವರಾಜ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಇವರು ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದಾರೆ. 2013ರ ಚುನಾವಣೆಯಲ್ಲಿ ಕ್ಷೇತ್ರದಿಂದ ಶಶಿಲ್ ಜಿ.ನವೋಶಿ ಸ್ಪರ್ಧಿಸಿದ್ದರು. 26,880 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದರು.

ನಾಸೀರ್ ಉಸ್ತಾದ್

ನಾಸೀರ್ ಉಸ್ತಾದ್

ಕಲಬುರಗಿ ಉತ್ತರ ಕ್ಷೇತ್ರಕ್ಕೆ ನಾಸೀರ್ ಉಸ್ತಾದ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ನಾಸೀರ್ ಉಸ್ತಾದ್ ಕೆಜೆಪಿ ಪಕ್ಷದಲ್ಲಿದ್ದರು. 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 1,189 ಮತಗಳನ್ನು ಪಡೆದಿದ್ದರು.

ಸೂರ್ಯಕಾಂತ ಕೊರಳ್ಳಿ

ಸೂರ್ಯಕಾಂತ ಕೊರಳ್ಳಿ

ಆಳಂದ ಕ್ಷೇತ್ರಕ್ಕೆ ಸೂರ್ಯಕಾಂತ ಕೊರಳ್ಳಿ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. 2013ರ ಚುನಾವಣೆಯಲ್ಲಿ ಸುಭಾಷ್ ರುಕ್ಮಯ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದು, 49,971 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದರು.

ಸುಶೀಲ ಬಾಯಿ ಬಿ.ಕೊರವಿ

ಸುಶೀಲ ಬಾಯಿ ಬಿ.ಕೊರವಿ

ಚಿಂಚೋಳಿ ಕ್ಷೇತ್ರಕ್ಕೆ ಸುಶೀಲ ಬಾಯಿ ಬಿ.ಕೊರವಿ ಅಭ್ಯರ್ಥಿಯಾಗಿದ್ದಾರೆ. ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ. 2013ರ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಗಜರೆ ಅಭ್ಯರ್ಥಿಯಾಗಿದ್ದರು, 1,218 ಮತಗಳನ್ನು ಪಡೆದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+