Get Updates
Get notified of breaking news, exclusive insights, and must-see stories!

ಮೈಸೂರು ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ

ಮೈಸೂರು, ಮಾರ್ಚ್ 02 : ಕರ್ನಾಟಕ ಜೆಡಿಎಸ್ 2018ರ ವಿಧಾನಸಭೆ ಚುನಾವಣೆಗೆ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಪೈಕಿ, 10 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಮಂಡ್ಯ ಮತ್ತು ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಬಲವಾಗಿದೆ. 2013ರ ಚುನಾವಣೆಯಲ್ಲಿ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದರು. ಆದರೆ, ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಚಿಕ್ಕಮಾದು ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಮೃತಪಟ್ಟಿದ್ದಾರೆ.

ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದರಿಂದ ಸಿದ್ದರಾಮಯ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ರಣತಂತ್ರ ರೂಪಿಸುತ್ತಾರೆ. ಅದಕ್ಕೂ ಮೊದಲೇ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಜೆಡಿಎಸ್ ನಂಜನಗೂಡು ಕ್ಷೇತ್ರ ಹೊರತುಪಡಿಸಿ ಉಳಿದ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚಾಮರಾಜ ಕ್ಷೇತ್ರದಲ್ಲಿ ಕೆ.ಎಸ್.ರಂಗಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕೆ.ಹರೀಶ್ ಗೌಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ....

ಜಿ.ಟಿ.ದೇವೇಗೌಡ

ಜಿ.ಟಿ.ದೇವೇಗೌಡ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಕ್ಷೇತ್ರದ ಹಾಲಿ ಶಾಸಕರು ಇವರೇ. 2013ರ ಚುನಾವಣೆಯಲ್ಲಿ 75,864 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಪ್ರೊ.ಕೆ.ಎಸ್.ರಂಗಪ್ಪ

ಪ್ರೊ.ಕೆ.ಎಸ್.ರಂಗಪ್ಪ

ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಜೆಡಿಎಸ್ ಪಕ್ಷ ಸೇರಿದ್ದಾರೆ. 2018ರ ಚುನಾವಣೆ ಮೈಸೂರಿನ ಚಾಮರಾಜ ಕ್ಷೇತ್ರದಿಂದ ಅವರಿಗೆ ಟಿಕೆಟ್ ನೀಡಲಾಗಿದೆ. 2013ರ ಚುನಾವಣೆಯಲ್ಲಿ ಎಚ್.ಎಸ್.ಶಂಕರಲಿಂಗೇಗೌಡ ಅವರು ಕ್ಷೇತ್ರದಿಂದ ಸ್ಪರ್ಧಿಸಿ 29,015 ಮತಗಳನ್ನು ಪಡೆದಿದ್ದರು.

ಎಚ್.ವಿಶ್ವನಾಥ್

ಎಚ್.ವಿಶ್ವನಾಥ್

ಮಾಜಿ ಸಚಿವ, ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಎಚ್.ವಿಶ್ವನಾಥ್ ಅವರಿಗೆ ಹುಣಸೂರು ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ ತೊರೆದು ವಿಶ್ವನಾಥ್ ಜೆಡಿಎಸ್ ಸೇರಿದ್ದರು. 2013ರ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 43,723 ಮತಗಳನ್ನು ಪಡೆದು ಎರಡನೇ ಸ್ಥಾನಗಳಿಸಿದ್ದರು.

ಚಿಕ್ಕಣ್ಣ

ಚಿಕ್ಕಣ್ಣ

ಹೆಗ್ಗಡದೇವನಕೋಟೆ (ಎಚ್.ಡಿ.ಕೋಟೆ) ಕ್ಷೇತ್ರಕ್ಕೆ ಚಿಕ್ಕಣ್ಣ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 2013ರ ಚುನಾವಣೆಯಲ್ಲಿ ಕ್ಷೇತ್ರದಿಂದ ಜೆಡಿಎಸ್‌ ಪಕ್ಷದ ಎಸ್.ಚಿಕ್ಕಮಾಧು ಅವರು ಸ್ಪರ್ಧಿಸಿ ಜಯಗಳಿಸಿದ್ದರು. ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದಾಗಿ ಮೃತಪಟ್ಟಿದ್ದಾರೆ.

ಮಹದೇವ ಕೆ.

ಮಹದೇವ ಕೆ.

ಪಿರಿಯಾಪಟ್ಟಣ ಕ್ಷೇತ್ರಕ್ಕೆ ಮಹದೇವ ಕೆ. ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 2008, 2013ರ ಚುನಾವಣೆಯಲ್ಲಿ ಗೆಲುವಿನ ಸನಿಹ ಬಂದು ಸೋಲುಕಂಡಿದ್ದಾರೆ. 2008ರಲ್ಲಿ 859, 2013ರ ಚುನಾವಣೆಯಲ್ಲಿ 2088 ಮತಗಳ ಅಂತರದಿಂದ ಸೋತಿದ್ದಾರೆ. ಈ ಬಾರಿ ಗೆಲುವು ಸಿಗುವುದೇ?

ಸಾ.ರಾ.ಮಹೇಶ್

ಸಾ.ರಾ.ಮಹೇಶ್

ಕೆ.ಆರ್.ನಗರ (ಕೃಷ್ಣರಾಜನಗರ) ಕ್ಷೇತ್ರಕ್ಕೆ ಸಾ.ರಾ.ಮಹೇಶ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಸಾ.ರಾ.ಮಹೇಶ್ ಕ್ಷೇತ್ರದ ಹಾಲಿ ಶಾಸಕರು. 2013ರ ಚುನಾವಣೆಯಲ್ಲಿ 81,457 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಅಬ್ದುಲ್ಲಾ

ಅಬ್ದುಲ್ಲಾ

ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿಅಬ್ದುಲ್ಲಾ ಅವರಿಗೆ ಟಿಕೆಟ್ ನೀಡಲಾಗಿದೆ. 2018ರ ಚುನಾವಣೆಯಲ್ಲಿ ಎಸ್.ಸತೀಶ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 29,180 ಮತಗಳನ್ನು ಪಡೆದಿದ್ದರು.

ಅಶ್ವಿನ್ ಕುಮಾರ್

ಅಶ್ವಿನ್ ಕುಮಾರ್

ಟಿ.ನರಸೀಪುರ (ತಿರುಮಕೂಡಲು ನರಸೀಪುರ) ಕ್ಷೇತ್ರಕ್ಕೆ ಅಶ್ವಿನ್ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 2013ರ ಚುನಾವಣೆಯಲ್ಲಿ ಎ.ಸಿ.ಸುಂದರೇಶನ್ 52,896 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದರು 323 ಮತಗಳ ಅಂತರದಿಂದ ಸೋತಿದ್ದರು. ಆದರೆ, 2017ರಲ್ಲಿ ಅವರು ಮೃತಪಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಶ್ವಿನ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಅಭಿಷೇಕ್

ಅಭಿಷೇಕ್

ವರುಣಾ ಕ್ಷೇತ್ರಕ್ಕೆ ಅಭಿಷೇಕ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ಚೆಲುವರಾಜ್ ಅಭ್ಯರ್ಥಿಯಾಗಿದ್ದರು ಮತ್ತು 2,686 ಮತಗಳನ್ನು ಪಡೆದಿದ್ದರು. ವರುಣಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ.

ಮಲ್ಲೇಶ್

ಮಲ್ಲೇಶ್

ಕೃಷ್ಣರಾಜ ಕ್ಷೇತ್ರಕ್ಕೆ ಮಲ್ಲೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 2013ರ ಚುನಾವಣೆಯಲ್ಲಿ ವಾಸು ಎಚ್. ಸ್ಪರ್ಧಿಸಿದ್ದರು 7,486 ಮತ ಪಡೆದಿದ್ದರು. ಈ ಬಾರಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+