ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ರೆಸಾರ್ಟ್ ರಾಜಕೀಯ'ಕ್ಕೆ ಕೇರಳದಿಂದ ಮುಕ್ತ ಆಹ್ವಾನ

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 15: ಅಂದುಕೊಂಡಂತೆ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿದೆ. ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38+1 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಬಹುಮತಕ್ಕೆ 112 ಸ್ಥಾನಗಳು ಬೇಕಾಗಿದ್ದು ಬಿಜೆಪಿ 8 ಸ್ಥಾನಗಳ ಕೊರತೆ ಅನುಭವಿಸುತ್ತಿದೆ. ಇದೇ ಸಂದರ್ಭದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ದೋಸ್ತಿ ಸರಕಾರ ರಚನೆಗೆ ಮುಂದಾಗಿವೆ. ಜೆಡಿಎಸ್ ನೇತೃತ್ವದಲ್ಲಿ ಸರಕಾರ ರಚನೆಗೆ ಕಾಂಗ್ರೆಸ್ ಮನಸ್ಸು ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ

ಆದರೆ ಇದರ ಮಧ್ಯೆಯೂ ನಾವೇ ಸರಕಾರ ರಚನೆ ಮಾಡುತ್ತೇವೆ ಎಂದು ಬಿಜೆಪಿ ಹೇಳಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಒಂದಷ್ಟು ಕಂಪನಗಳನ್ನು ಸೃಷ್ಟಿಸಿದೆ. ತಮ್ಮ ಪಕ್ಷದ ಶಾಸಕರನ್ನು ಬಿಜೆಪಿ ಆಪರೇಷನ್ ಕಮಲ ಮಾಡಬಹುದು ಎಂಬ ಭೀತಿಯಲ್ಲಿದ್ದು, ಮತ್ತೆ ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿವೆ.

Karnataka Election Results 2018: Kerala Tourism invites MLAs to Resort Politics

ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಕೇರಳ ರೆಸಾರ್ಟ್ ರಾಜಕಾರಣಕ್ಕೆ ಬನ್ನಿ ಎಂದು ಕರ್ನಾಟಕದ ಪಕ್ಷಗಳಿಗೆ ಆಹ್ವಾನಿಸಿದೆ. "ದೇವರ ಸ್ವಂತ ನಾಡಿನ ಸುರಕ್ಷಿತ ಮತ್ತು ಸುಂದರ ರೆಸಾರ್ಟ್ ಗಳಿಗೆ ನಾವು ಶಾಸಕರನ್ನು ಆಹ್ವಾನಿಸುತ್ತಿದ್ದೇವೆ," ಎಂದು ಕೇರಳ ಟೂರಿಸಂ ಟ್ಟಿಟ್ಟರ್ ಖಾತೆಯಿಂದ ಟ್ಟೀಟ್ ಮಾಡಲಾಗಿದೆ.

English summary
Karnataka election results 2018. After the rough and tumble of the Karnataka Verdict, Kerala Tourism has invited all the MLAs to unwind at the safe and beautiful resorts of God's Own Country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X