ಟಿ. ನರಸೀಪುರದಲ್ಲಿ ಮಹದೇವಪ್ಪಗೆ ಮುಖಭಂಗ
ಮೈಸೂರು, ಮೇ 15: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವ ಎಚ್.ಸಿ. ಮಹದೇವಪ್ಪ ಅವರು ಟಿ, ನರಸೀಪುರ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ.
ಜಾತ್ಯತೀತ ಜನತಾದಳದ ಅಭ್ಯರ್ಥಿ ಅಶ್ವಿನ್ ಕುಮಾರ್ ಎಂ. ಅವರು ಮಹದೇವಪ್ಪ ವಿರುದ್ಧ ಸುಮಾರು 20,000 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಲೋಕೋಪಯೋಗಿ ಸಚಿವರಾಗಿದ್ದ ಎಚ್.ಸಿ. ಮಹದೇವಪ್ಪ ಅವರು ಈ ಬಾರಿಯ ಚುನಾವಣೆಯಲ್ಲಿ ಟಿ. ನರಸೀಪುರ ಕ್ಷೇತ್ರವನ್ನು ತಮ್ಮ ಮಗನಿಗೆ ಬಿಟ್ಟುಕೊಟ್ಟು, ಬೆಂಗಳೂರಿನ ಸಿ.ವಿ. ರಾಮನ್‌ನಗರ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.

2013ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನ ಎಂ.ಸಿ. ಸುಂದರೇಶನ್ ವಿರುದ್ಧ ಮಹದೇವಪ್ಪ ಅವರು ಪ್ರಯಾಸದ ಗೆಲುವು ಕಂಡಿದ್ದರು. ಮಹದೇವಪ್ಪ ಅವರು ಸುಂದರೇಶನ್ ವಿರುದ್ಧ ಕಡೆಯ ಸುತ್ತಿನ ಮತ ಎಣಿಕೆಯಲ್ಲಿ ಕೇವಲ 323 ಮತಗಳ ಅಂತರದಲ್ಲಿ ಜಯ ಪಡೆದಿದ್ದರು.












Click it and Unblock the Notifications