ಎಚ್ಡಿಕೆ ಪ್ರಮಾಣವಚನಕ್ಕೆ ಬೆಂಗಳೂರಿಗೆ ಬಂದ ನಾಯ್ಡು, ದೀದಿ
ಬೆಂಗಳೂರು, ಮೇ 23: "ಪ್ರಾದೇಶಿಕ ಪಕ್ಷಗಳಿಗೆ ಬಲ ನೀಡುವ ಸಲುವಾಗಿ ನಾವಿಲ್ಲಿಗೆ ಬಂದಿದ್ದೇವೆ" ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒಟ್ಟಾಗಿ ಉಚ್ಚರಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದಿಳಿದ ಉಭಯ ನಾಯಕರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. "ನಾವು ಕುಮಾರಸ್ವಾಮಿ ಅವರ ಬಗೆಗಿನ ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಲು ಬಂದಿದ್ದೇವೆ. ಭವಿಷ್ಯದಲ್ಲಿ ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ಕಾಪಾಡಲು ಒಟ್ಟಾಗುತ್ತೇವೆ" ಎಂದು ಇಬ್ಬರೂ ವಿಶ್ವಾಸ ವ್ಯಕ್ತಪಡಿಸಿದರು.
2019 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಎದುರಿಸುವ ಸಲುವಾಗಿ ಎಲ್ಲ ಪ್ರಾದೇಶಿಕ ಪಕ್ಷಗಳೂ ಒಂದಾಗುತ್ತಿವೆ.

ಇಂದು ಅಪರಾಹ್ನ 4:30 ಕ್ಕೆ ವಿಧಾನಸೌಧದಲ್ಲಿ ನಡೆಯಲಿರುವ ಕುಮಾರಸ್ವಾಮಿಯವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ, ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.












Click it and Unblock the Notifications